ಬಡತನವೂ ಮಾನವ ಹಕ್ಕು ಉಲ್ಲಂಘನೆ

ಬೇರೊಬ್ಬರ ಹಕ್ಕಿಗೆ ಚ್ಯುತಿ ಉಂಟುಮಾಡದೇ ಬದುಕುವುದೇ ಮಾನವ ಹಕ್ಕು

Team Udayavani, Dec 11, 2019, 11:19 AM IST

11-December-3

ದಾವಣಗೆರೆ: ಬಡತನವೂ ಒಂದು ಸ್ಪಷ್ಟ ಮಾನವ ಹಕ್ಕು ಉಲ್ಲಂಘನೆಯಾಗಿದ್ದು, ಒಂದು ರಾಜ್ಯ ಪ್ರಜೆಗಳಿಗೆ ಬಡತನದಿಂದ ಮುಕ್ತಿ ಕೊಡಿಸಲು ಶ್ರಮಿಸಬೇಕು. ಹಾಗಾದಾಗ ಮಾತ್ರ ಕಲ್ಯಾಣ ರಾಜ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ವೈ.ಬಸಾಪುರ ಹೇಳಿದ್ದಾರೆ.

ಮಂಗಳವಾರ, ನಗರದ ಆರ್‌.ಎಲ್‌.ಕಾನೂನು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ಬೇರೆಯವರನ್ನು ಕಂಡು ಹೊಟ್ಟೆಕಿಚ್ಚು ಪಡುವುದೂ ಸಹ ಮಾನವ ಹಕ್ಕು ಉಲ್ಲಂಘನೆಯಾಗುತ್ತದೆ. ಸಂವಿಧಾನ ಹಲವಾರು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಕಲ್ಪಿಸಿದೆ. ಅಂತೆಯೇ ಮಾನವ ಹಕ್ಕುಗಳನ್ನು ಒದಗಿಸುವುದು, ಗೌರವಿಸುವುದು ಅಷ್ಟೇ ಪ್ರಮುಖ ಎಂದರು.

ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಬೇರೊಬ್ಬರ ಹಕ್ಕಿಗೆ ಚ್ಯುತಿ ಉಂಟುಮಾಡದೇ ಗೌರವದಿಂದ ಬದುಕುವುದೇ ಮಾನವ ಹಕ್ಕು. ಬೇರೊಬ್ಬರ ವೈಯಕ್ತಿಕ ಘನತೆಗೆ ಧಕ್ಕೆ ಮಾಡಿದರೆ ಅದು ಮಾನವ ಹಕ್ಕಿನ ಸ್ಪಷ್ಪ ಉಲ್ಲಂಘನೆ. 2ನೇ ವಿಶ್ವ ಮಹಾಯುದ್ದದಲ್ಲಿ ಆದ ಅಧಿಕ ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸೆಟೆದು ನಿಂತು ತಮ್ಮ ಹಕ್ಕುಗಳಿಗೆ ಹೋರಾಡಿ 1948ರ ಡಿಸೆಂಬರ್‌ 10ರಂದು ಘೋಷಿಸಲಾದ ಮ್ಯಾಗ್ನಕಾರ್ಟ್‌ ಈ ಮಾನವ ಹಕ್ಕುಗಳ ದಿನ. ಎಲ್ಲಾ ಸದಸ್ಯ ರಾಷ್ಟ್ರಗಳು ಒಮ್ಮತದಿಂದ ಒಪ್ಪಿ, ಸಹಿ ಹಾಕಿದ ದಿನ ಎಂದರು.

ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಜೆ.ಎಸ್‌.ಸದಾನಂದ ಮಾತನಾಡಿ, ಮಾನವ ಹಕ್ಕುಗಳಿಗೆ ಸುದಿಧೀರ್ಘ‌ವಾದ ಇತಿಹಾಸವಿದೆ. ಕ್ರಿಸ್ತಪೂರ್ವದಿಂದಲೂ ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಲಾಗಿದೆ. ಆಳುವವರ ಮತ್ತು ಆಳಿಸಿಕೊಳ್ಳುವವರ ನಡುವಿನ ಸಂಘರ್ಷದಿಂದ ಮಾನವ ಹಕ್ಕುಗಳು ಹುಟ್ಟಿಕೊಂಡಿವೆ ಎಂದು ಹೇಳಿದರು.

ಭಾರತದಲ್ಲಿ ವೇದಗಳ ಕಾಲದಿಂದಲೂ ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯಿಂದ ಮೂಲಕ ಮಾನವ ಹಕ್ಕುಗಳನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಆದರೆ, ಇಂದು ಮಾನವ ಹಕ್ಕುಗಳ ಉಲ್ಲಂಘನೆ ವಿವಿಧ ರೀತಿಯಲ್ಲಿ ಆಗುತ್ತಿದೆ. ಸಮಯಕ್ಕೆ ಸರಿಯಾಗಿ ನ್ಯಾಯ ಸಿಗದಿದ್ದರೂ ಸಹ, ಮಾನವ ಹಕ್ಕುಗಳ ಉಲ್ಲಂಘನೆ ಆದಂತೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯೂ ಸಹ ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಮುಖ ಕಾರಣವಾಗಿದೆ.

ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಮಾನವ ಹಕ್ಕುಗಳ ಉಲ್ಲಂಘನೆ ಯಾಗುತ್ತಿರುವುದು ದುರಂತದ ಸಂಗತಿ ಎಂದು ತಿಳಿಸಿದರು.

ವಕೀಲರಾದ ದಾದಾಪೀರ್‌ ಮಾತನಾಡಿ, ಮಾನವ ಹಕ್ಕುಗಳು ಅನೇಕ ಉದ್ದೇಶಗಳನ್ನು ಹೊಂದಿದೆ. ಮನುಷ್ಯ ಪ್ರಪಂಚದಲ್ಲಿ ಮುಕ್ತವಾಗಿ ಜೀವಿಸುವ ಮತ್ತು ಭೇದ-ಭಾವವಿಲ್ಲದೇ ಬದುಕುವ ಹಕ್ಕು ಹೊಂದಿದ್ದಾರೆ. ಯಾರ ಗುಲಾಮಗಿರಿಯಲ್ಲೂ ಇರದೇ, ಸ್ವತಂತ್ರರಾಗಿ ಜೀವಿಸಬೇಕು. ಹಿಂಸೆ ಮತ್ತು ಅಮಾನವೀಯವಾಗಿ ಬೇರೊಬ್ಬರಿಂದ ಶಿಕ್ಷೆಗೆ ಒಳಗಾಗದಂತೆ ಜೀವಿಸುವ ಹಕ್ಕುಗಳು ಸೇರಿದಂತೆ ವಿವಿಧ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಮಾನವ ಹಕ್ಕುಗಳ ವೇದಿಕೆ ಅಧ್ಯಕ್ಷ ಬಿ.ಎಂ ಹನುಮಂತಪ್ಪ ಮಾತನಾಡಿ, ಪ್ರಸ್ತುತ ನಮ್ಮಲ್ಲಿ ಬಡವರಿಗೆ, ಶ್ರೀಮಂತರಿಗೆ ಎಂಬ ಪ್ರತ್ಯೇಕ ಹಕ್ಕುಗಳಿವೆ ಎಂಬಂತೆ ಕಾಣುತ್ತದೆ. ಮಾನವ ಹಕ್ಕುಗಳು ಎಲ್ಲರಿಗೂ ಒಂದೇ ರೀತಿಯಲ್ಲಿ ಸಿಗುತ್ತಿಲ್ಲ. ಇದು ಬದಲಾಗಬೇಕು ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌.ಅರುಣಕುಮಾರ್‌ ಮಾತನಾಡಿ, ಮನುಷ್ಯ ಮನುಷ್ಯನನ್ನು ಗೌರವಿಸಬೇಕು. ಮಾನವ ದೇವರಾಗುವುದು ಸುಲಭ. ಆದರೆ ಮನುಷ್ಯ ಮನುಷ್ಯನಾಗುವುದು ಕಷ್ಟವಾಗಿದೆ ಈ ಮನಸ್ಥಿತಿ ಬದಲಾಗಬೇಕು. ಎಲ್ಲರೂ ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆರ್‌.ಎಲ್‌. ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಸೋಮಶೇಖರಪ್ಪ ಮಾತನಾಡಿ, ನಮಗೆ ಹಕ್ಕುಗಳು ಇರುವಂತೆ ಬಾಧ್ಯತೆಗಳೂ ಇವೆ. ಇವುಗಳನ್ನು ನಾವು ಮೊದಲು ತಿಳಿಯಬೇಕು. ಮನುಷ್ಯನಾಗಿ ಬದುಕಿದಾಗ ಮಾತ್ರ ಮಾನವ ಹಕ್ಕುಗಳು ಸರಿಯಾಗುತ್ತವೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಭು.ಎನ್‌.ಬಡಿಗೇರ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌.ಟಿ.ಮಂಜುನಾಥ್‌, ವಕೀಲ ಆಂಜನೇಯ ಗುರೂಜಿ, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.