ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರ
Team Udayavani, Dec 11, 2019, 4:53 PM IST
ಪರಿಪೂರ್ಣವಾದ ಕೌಟುಂಬಿಕ ಕಥಾ ಹಂದರ ಹೊಂದಿರೋ ಚಿತ್ರವೆಂಬ ವಿಚಾರ ಈಗಾಗಲೇ ಜಾಹೀರಾಗಿದೆ. ಟ್ರೇಲರ್, ಟೀಸರ್ ಮತ್ತು ಹಾಡುಗಳ ಮೂಲಕ ಒಡೆಯನ ಅದ್ದೂರಿತನದ ಮಜಲುಗಳು ಸಹ ಅನಾವರಣಗೊಂಡಿವೆ. ಸಂದೇಶ್ ನಾಗರಾಜ್ ಅರ್ಪಿಸಿ, ಎನ್ ಸಂದೇಶ್ ಅವರು ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ನಿರ್ಮಾಣ ಮಾಡಿರುವ ಚಿತ್ರವಿದು. ಇದರಲ್ಲಿ ದರ್ಶನ್ ತುಂಬಿದ ಮನೆಯ ಒಡೆಯನಾಗಿ, ಬಂಧಗಳಿಗೆ ಬೆಲೆ ಕೊಡುವ ನಾಯಕನಾಗಿ ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಭರ್ಜರಿ ಆಕ್ಷನ್ ಸನ್ನಿವೇಶಗಳೂ ಈ ಸಿನಿಮಾದಲ್ಲಿ ಹೇರಳವಾಗಿದೆ. ಅದುವೇ ಈ ಚಿತ್ರದ ಪ್ರಧಾನ ಆಕರ್ಷಣೆ ಅನ್ನೋದು ಚಿತ್ರತಂಡದ ಭರವಸೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಜ ಜೀವನದಲ್ಲಿಯೂ ಸ್ನೇಹಕ್ಕೆ, ಪ್ರೀತಿಗೆ ತುಂಬಾನೇ ಬೆಲೆ ಕೊಡುವಂಥಾ ವ್ಯಕ್ತಿತ್ವ ಹೊಂದಿರುವವರು. ಅವರನ್ನು ಫ್ಯಾಮಿಲಿ ಸಬ್ಜೆಕ್ಟಿನ ಚಿತ್ರಗಳಲ್ಲಿಯೇ ಕಾಣ ಬಯಸುವ ದೊಡ್ಡ ಪ್ರೇಕ್ಷಕ ವರ್ಗವೇ ಕನ್ನಡದಲ್ಲಿದೆ. ಆಗಾಗ ಆ ವರ್ಗದ ಪ್ರೇಕ್ಷಕರನ್ನು ತಣಿಸುವಂಥಾ ಸಿನಿಮಾಗಳಲ್ಲಿ ದರ್ಶನ್ ನಟಿಸುತ್ತಾರೆ. ಆದರೆ ಒಡೆಯ ಪೂರ್ತಿಯಾಗಿ ಫ್ಯಾಮಿಲಿ ಪ್ಯಾಕೇಜಿನಂಥಾ ಚಿತ್ರ. ತನ್ನನ್ನು ನಂಬಿದವರಿಗಾಗಿ ಏನು ಮಾಡಲೂ ಸಿದ್ಧವಿರುವ ಈ ಒಡೆಯ, ಎದುರಾಳಿಗಳು ಯಾರೇ ಇದ್ದರೂ ಎದೆ ಅದುರಿಸುವಂತೆ ಅಬ್ಬರಿಸಲೂ ಹಿಂದೆ ಮುಂದೆ ನೋಡುವವನಲ್ಲ. ಒಡೆಯ ಗಜೇಂದ್ರನ ಈ ಗುಣವೇ ಸದರಿ ಸಿನಿಮಾವನ್ನು ಪಕ್ಕಾ ಆಕ್ಷನ್ ಚಿತ್ರವಾಗಿಯೂ ಗಮನ ಸೆಳೆಯುವಂತೆ ಮಾಡಿದೆ.
ದರ್ಶನ್ ಅಭಿಮಾನಿಗಳು ಸದಾ ಅವರನ್ನು ಆಕ್ಷನ್ ಪಾತ್ರಗಳಲ್ಲಿಯೇ ನೋಡಲು ಬಯಸುತ್ತಾರೆ. ಅಂಥವರೆಲ್ಲರನ್ನೂ ತಣಿಸುವಂಥಾ ಹೈ ವೋಲ್ಟೇಜ್ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿವೆ. ಅದರ ಝಲಕ್‌ಗಳು ಈಗಾಗಲೇ ಟ್ರೇಲರ್, ಟೀಸರ್‌ಗಳಲ್ಲಿ ಕಾಣಿಸಿವೆ. ಒಟ್ಟಾರೆಯಾಗಿ ಒಡೆಯನನ್ನು ನಿರ್ದೇಶಕ ಎಂ ಡಿ ಶ್ರೀಧರ್ ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ರೂಪಿಸಿದ್ದಾರೆ. ಈ ಹಿಂದೆ ದರ್ಶನ್ ಅವರ ಫಸ್ಟ್ ಲುಕ್ ಅಭಿಮಾನಿಗಳು ಹುಚ್ಚೇಳುವಂತೆ ಮಾಡಿತ್ತು. ಅದನ್ನೇ ಮೀರಿಸುವಂಥಾ ಚೆಂದದ ಲುಕ್ಕುಗಳಲ್ಲಿ ದರ್ಶನ್ ಇಲ್ಲಿ ಒಡೆಯನಾಗಿ ಕಂಗೊಳಿಸಿದ್ದಾರೆ. ಇದೆಲ್ಲವೂ ಈ ವಾರವೇ ಪ್ರೇಕ್ಷಕರೆಲ್ಲರ ಮುಂದೆ ಅನಾವರಣಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.