ವೇತನಾನುದಾನ ಕೊಡಿ

ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟ ಪ್ರತಿಭಟನೆ ಆರ್‌ಟಿಇ ದಾಖಲಾತಿ ಮುಂದುವರಿಸಿ

Team Udayavani, Dec 11, 2019, 6:10 PM IST

11-December-27

ರಾಯಚೂರು: 1995ರಿಂದ ಆರಂಭಗೊಂಡ ಎಲ್ಲ ಖಾಸಗಿ ಶಾಲಾ,
ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ವೇತನಾನುದಾನ
ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ
ಖಾಸಗಿ ಅನುದಾನ ರಹಿತ ಶಾಲೆ-ಕಾಲೇಜು ಆಡಳಿತ ಮಂಡಳಿಗಳ
ಒಕ್ಕೂಟದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ
ನಡೆಸಲಾಯಿತು.

ನಗರ ಸೇರಿ ಜಿಲ್ಲಾದ್ಯಂತ ಮಂಗಳವಾರ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್‌ ಮಾಡಿದ ಒಕ್ಕೂಟದ ಪದಾಧಿಕಾರಿಗಳು, ನಗರದ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಧರಣಿ ನಡೆಸಿ ಡಿಸಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಅನುದಾನಿತ ಶಾಲಾ, ಕಾಲೇಜು ಮಕ್ಕಳಿಗೆ ನೀಡುವ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಅನುದಾನ ರಹಿತ ಶಾಲಾ, ಕಾಲೇಜು ಮಕ್ಕಳಿಗೂ ಕಲ್ಪಿಸಬೇಕು. ಆರ್‌ ಟಿಇ ದಾಖಲಾತಿಯನ್ನು ಮೊದಲಿನಂತೆ ಮುಂದುವರಿಸಬೇಕು. ಆರ್ಥಿಕವಾಗಿ ಹಿಂದುಳಿದ ಪಾಲಕರ ಮಕ್ಕಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

1995ರ ಮುಂಚೆ ಆರಂಭಗೊಂಡ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲಾಗಿದೆ. ಆದರೆ,1995ರ ನಂತರ ಆರಂಭಗೊಂಡ ಶಾಲಾ ಕಾಲೇಜುಗಳ ಮನವಿಯನ್ನು ಯಾವ ಸರ್ಕಾರವೂ ಪುರಸ್ಕರಿಸುತ್ತಿಲ್ಲ ಎಂದು ಆರೋಪಿಸಿದರು.

ಈಗಾಗಲೇ ಸಾಕಷ್ಟು ನೌಕರರು ನಿವೃತ್ತಿ ಅಂಚಿನಲ್ಲಿದ್ದು ಅವರ ಇಷ್ಟು ವರ್ಷದ ಸೇವೆ ವ್ಯರ್ಥವಾಗಲಿದೆ. ಸರ್ಕಾರದಿಂದ 1ರಿಂದ 5ನೇ ತರಗತಿವರೆಗೆ ಅನುಮತಿ ಪಡೆದ ಖಾಸಗಿ ಶಾಲೆಗಳಿಗೆ ಹೈಕೋರ್ಟ್‌ ಆದೇಶದಂತೆ 6ರಿಂದ 8ನೇ ತರಗತಿವರೆಗೆ ಸ್ವಾಭಾವಿಕ ಬೆಳವಣಿಗೆಯ ಆಧಾರದ ಮೇಲೆ ಅನುಮತಿ ನೀಡಬೇಕು.

ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಅಧೀನದಲ್ಲಿರುವ ಕೃಷಿ ಜಮೀನನ್ನು 109ರ ಅಡಿ ಶುಲ್ಕ ರಹಿತ ಕಂದಾಯ ಜಮೀನನ್ನಾಗಿ ಮಾಡಿ ಆಡಳಿತ ಮಂಡಳಿಗೆ ವರ್ಗಾಯಿಸಬೇಕು. ವೇತನಾನುದಾನ ನೀಡುವವರೆಗೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಯಲ್ಲಿ ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,500 ರೂ. ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 12,500 ರೂ. ನೀಡುತ್ತಿದ್ದು ಅದರಂತೆ ಅನುದಾನ ರಹಿತ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವೇತನ ಪಾವತಿಸಬೇಕೆಂಬ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಪದಾಧಿಕಾರಿಗಳಾದ ರವಿಕುಮಾರ, ರಾಜಾ ಶ್ರೀನಿವಾಸ, ಶಂಕರಲಿಂಗಯ್ಯ, ನರಸಪ್ಪ, ಗಿರೀಶ ಆಚಾರಿ, ಶೇಖ ಮೆಹಬೂಬ್‌, ಮಹಾಂತೇಶ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.