ಪಾಲಿಕೆ ಆಡಳಿತ ಸುಸೂತ್ರ: ಮೂರು ವಲಯ ಕಚೇರಿಗಳು ಮೇಲ್ದರ್ಜೆಗೆ
ಪಾಲಿಕೆಯಿಂದ ಮಲ್ಲಿಕಟ್ಟೆಗೆ ವಲಯ ಕಚೇರಿ ಶಿಪ್ಟ್
Team Udayavani, Dec 12, 2019, 4:41 AM IST
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆ ಸುಸೂತ್ರಗೊಳಿಸುವ ನಿಟ್ಟಿನಲ್ಲಿ ಸುರತ್ಕಲ್, ಕದ್ರಿ ಹಾಗೂ ಲಾಲ್‌ಬಾಗ್‌ನ ಮೂರು ವಲಯ ಕಚೇರಿಗಳು ಮೇಲ್ದ ರ್ಜೆಗೇರಿಸಲು ಪಾಲಿಕೆ ನಿರ್ಧರಿಸಿದೆ.
ಕದ್ರಿಯ ಮಲ್ಲಿಕಟ್ಟೆಯಲ್ಲಿ ಕಾರ್ಯಾ ಚರಿಸುತ್ತಿದ್ದ ವಲಯ ಕಚೇರಿಯನ್ನು ಕೆಲವು ತಿಂಗಳ ಹಿಂದೆ ವೆಚ್ಚ ಅಧಿಕ ವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಕಚೇರಿಗೆ ತರಲಾಗಿದ್ದು, ಇದೀಗ ಮತ್ತೆ ಅದನ್ನು ಮಲ್ಲಿಕಟ್ಟೆಯಲ್ಲಿಯೇ ರಚಿಸುವ ಮುಖೇನ ಆಡಳಿತ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಪಾಲಿಕೆ ಮುಂದಾಗಿದೆ. ಜತೆಗೆ, ಪಾಲಿಕೆಯ ಎಲ್ಲ 60 ವಾರ್ಡ್‌ಗಳಿಗೆ ಸುಮಾರು 37 ಎಂಜಿನಿಯರ್‌ಗಳ ಕಾರ್ಯವ್ಯಾಪ್ತಿಯನ್ನು ಮರುಹಂಚಿಕೆ ಮಾಡಿ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಅವರು ಆದೇಶಿಸಿದ್ದಾರೆ.
ಹಿಂದೆ ಮಲ್ಲಿಕಟ್ಟೆ ಸಹಿತ ಬೇರೆ ಬೇರೆ ವ್ಯಾಪ್ತಿಯ ಜನರು ಕಡತಗಳಿಗಾಗಿ ಪಾಲಿಕೆಗೇ ಬರಬೇಕಾಗಿತ್ತು.
ಇದೀಗ ಇದಕ್ಕೆ ಮುಕ್ತಿ ನೀಡಲು ಪಾಲಿಕೆ ಮುಂದಾಗಿದ್ದು, ವಲಯ ಕಚೇರಿಯನ್ನು ಪೂರ್ಣ ಮಟ್ಟದಲ್ಲಿ ಮತ್ತೆ ಮಲ್ಲಿಕಟ್ಟೆಯಲ್ಲಿಯೇ ನಡೆಸಲು ತೀರ್ಮಾನಿಸಿದೆ. ಹಾಗಾಗಿ ಮುಂದಿನ 1 ವಾರದೊಳಗೆ ಈ ಕಚೇ ರಿಗೆ ಸುಮಾರು 30 ವಿವಿಧ ಸ್ತರದ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳ ನೇಮಕಕ್ಕೆ ಸೂಚನೆ
ಸದ್ಯ ಸುರತ್ಕಲ್‌ನಲ್ಲಿ ವಲಯ ಕಚೇರಿ ಆರಂಭಿಸಿದ್ದರೂ ಅಲ್ಲಿ ಪೂರ್ಣ ಪ್ರಮಾಣದ ಅಧಿಕಾರಿಗಳ ನೇಮಕವಾಗಿರಲಿಲ್ಲ. ಇದಕ್ಕಾಗಿ ವಲಯ ಕಚೇರಿಗೆ ಅಗತ್ಯವಿರುವ ಎಲ್ಲ ಸ್ತರದ ಅಧಿಕಾರಿಗಳನ್ನು ನೇಮಿಸಿ ಒಂದು ವಾರದೊಳಗೆ ಪೂರ್ಣಸ್ವರೂಪದಲ್ಲಿ ಕಾರ್ಯ ನಿರ್ವ ಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆಯಲ್ಲಿಯೇ ಕಾರ್ಯಾಚರಿಸುತ್ತಿರುವ ಕಚೇರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳನ್ನು ನೇಮಿಸಲಾಗಿದೆ.
ಎಲ್ಲ ವಲಯ ಕಚೇರಿಗೆ ಕಾರ್ಯ ನಿರ್ವಾಹಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಆಡಳಿತ ವಿಕೇಂದ್ರೀಕರಣ ಮಾಡುವ ಪರಿಣಾಮ ವಾರ್ಡ್‌ನ ಎಲ್ಲ ಸಮಸ್ಯೆಗಳಿಗೂ ಸ್ಪಂದಿಸಲು ಸಾಧ್ಯವಾಗಲಿದೆ ಎಂಬ ಕಾರಣದಿಂದ ವಲಯ ಕಚೇರಿಯನ್ನು ಇನ್ನಷ್ಟು ಬಲಪಡಿಸಲಾಗಿದೆ.
ವಾರ್ಡ್‌ವಾರು ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಆಯುಕ್ತರು ಹಾಗೂ ಉಪ ಆಯುಕ್ತರಾದ ಸಂತೋಷ್ ಕುಮಾರ್ ಒಳಗೊಂಡಂತೆ ಪ್ರತ್ಯೇಕ ವಾಟ್ಸಾಪ್ ಗುಂಪು ರಚಿಸಲಾಗಿದ್ದು, ದೈನಂದಿನ ಕಾಮಗಾರಿ ವಿವರಗಳನ್ನು ಅಧಿಕಾರಿಗಳು ಇದರಲ್ಲಿ ನಮೂದಿಸಬೇಕಾಗಿದೆ.
ಅಧಿಕಾರಿಗಳ ಕಾರ್ಯವ್ಯಾಪ್ತಿ ಮರುಹಂಚಿಕೆ
ಪಾಲಿಕೆಯ 60 ವಾರ್ಡ್‌ಗಳಿಗೆ ಪಾಲಿಕೆಯ ಎಂಜಿನಿಯರ್‌ಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ ಪ್ರಸ್ತುತ ಹಲವಾರು ಅಭಿಯಂತರುಗಳು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಅಭಿಯಂತರುಗಳಿಗೆ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ಅಲ್ಲದೆ ಕೆಪಿಎಸ್‌ಸಿಯಿಂದ ಹೊಸದಾಗಿ ನೇಮಕಗೊಂಡ ಅಭಿಯಂತರುಗಳಿಗೆ ಜವಾಬ್ದಾರಿ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್‌ಗಳಿಗೆ ಸಮಾನಾಗಿ ವಾರ್ಡ್‌ಗಳನ್ನು ಹಂಚಿಕೆ ಮಾಡಬೇಕಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸಮಾನವಾಗಿ ವಾರ್ಡ್ ಹಂಚಿಕೆ ಮಾಡಲಾಗಿದೆ. ಪ್ರತೀಯೊಬ್ಬ ಎಂಜಿನಿಯರ್‌ಗೂ 1ರಿಂದ ಗರಿಷ್ಠ 5 ವಾರ್ಡ್‌ಗಳ ಉಸ್ತುವಾರಿಯನ್ನು ನೀಡಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಮಂದಿ ಅಧಿಕಾರಿಗಳಿಗೆ ಕರ್ತವ್ಯ ಮರುಹಂಚಿಕೆ ಮಾಡಲಾಗಿದೆ.
ಒಂದು ವಾರದೊಳಗೆ ಕಾರ್ಯಾರಂಭ
ಸುರತ್ಕಲ್, ಕದ್ರಿ ಹಾಗೂ ಲಾಲ್‌ಬಾಗ್‌ನ ಮೂರು ವಲಯ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಿ-ಸಿಬಂದಿ ನೇಮಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ನಿರ್ಧರಿಸಲಾಗಿದೆ. ಮುಂದಿನ ಒಂದು ವಾರದೊಳಗೆ ಮೂರೂ ವಲಯ ಕಚೇರಿಗಳು ಪೂರ್ಣಮಟ್ಟದಲ್ಲಿ ಕಾರ್ಯನಿರ್ವಹಿಸಲಿದೆ.
- ಅಜಿತ್ ಕುಮಾರ್ ಹೆಗ್ಡೆ ಎಸ್. , ಆಯುಕ್ತರು, ಮಂಗಳೂರು ಪಾಲಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.