ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ಸಿ.ಟಿ.ರವಿ
Team Udayavani, Dec 12, 2019, 3:04 AM IST
ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವಾಗ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳಿಗಿರುವ ಪರಮಾಧಿಕಾರ. ಅವರು ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಪಕ್ಷ ಹಾಗೂ ರಾಜ್ಯಕ್ಕೆ ಯಾರಿಂದ ಉಪಯೋಗವಾಗುತ್ತದೆಯೋ ಅವರನ್ನು ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಯಾವುದೇ ಸರ್ಕಾರವಿದ್ದರೂ ಅವರು ಆ ಪಕ್ಷದ ಹೈಕಮಾಂಡ್ನೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರು ಅತ್ಯಂತ ಅನುಭವಿಗಳಾಗಿದ್ದು, ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
“ನಿಮ್ಮಿಂದ ಯಾವ ಖಾತೆ ಹಿಂಪಡೆಯಬಹುದು’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನವನ್ನೇ ಕೇಳಿರಲಿಲ್ಲ. ಆದರೂ ಕೊಟ್ಟಿದ್ದಾರೆ. ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ. ಯಾರಿಗೆ, ಯಾವ ಖಾತೆ ಕೊಡಬೇಕೆಂಬುದು ಸಹ ಸಿಎಂಗೆ ಬಿಟ್ಟ ವಿಚಾರ. ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.