ಸಾಮೂಹಿಕ ವಿವಾಹದಿಂದ ವೆಚ್ಛಕ್ಕೆ ಕಡಿವಾಣ

ಸಂಡೂರು ವಿರಕ್ತಮಠದ ಶ್ರೀ ಅಭಿಮತಸಾಮೂಹಿಕ ವಿವಾಹ-ಜಯಂತಿ ಕಾರ್ಯಕ್ರಮ

Team Udayavani, Dec 12, 2019, 4:09 PM IST

12-December-19

ಸಂಡೂರು: ಮದುವೆಗಳು ವೈಭವೀಕರಣಗೊಳ್ಳದೆ  ಮಾನ್ಯವಾಗಿ, ಸಾಮೂಹಿಕವಾಗಿ ಮಾಡಿಕೊಳ್ಳುವ ಮೂಲಕ ಬಸವತತ್ವದ ಪಾಲನೆಯಾಗುವುದರ ಜೊತೆಗೆ ಆರ್ಥಿಕ ಉಳಿತಾಯವಾಗಿ ಸಮಾಜದ ಅಭಿವೃದ್ಧಿಯಾಗುತ್ತದೆ ಎಂದು ಸಂಡೂರು ವಿರಕ್ತಮಠದ ಪ್ರಭುಮಹಾಸ್ವಾಮೀಜಿ ನುಡಿದರು.

ಅವರು ಬುಧವಾರ ಪಟ್ಟಣದ ವಾಲ್ಮೀಕಿ ಸಮುದಾಯಭವನದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮತ್ತು ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್‌ಜಾತಿ ವಿವಾಹ ಮಾಡುವ ಮೂಲಕ ಜಾತಿಯ ಪಿಡುಗನ್ನು ಹೋಗಲಾಡಿಸಲು ಶ್ರಮಿಸಿದರು, ಇಂದು ಸಾಮೂಹಿಕ ವಿವಾಹಗಳನ್ನು ಮಾಡುವ ಮೂಲಕ ಬಡತನಕ್ಕೆ ತುತ್ತಾಗುವುದನ್ನು ತಪ್ಪಿಸಲಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮದುವೆಯಾದ ದಂಪತಿಗಳು ತಮ್ಮ ಬದುಕಿನಲ್ಲಿ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಮುಖೀಯಾಗಿ ಬದುಕನ್ನು ರೂಢಿಸಿಕೊಳ್ಳಬೇಕು. ಇಂದು ಮದುವೆ ಎಂದರೆ ಅಡಂಬರದ ತುತ್ತ ತುದಿಯಲ್ಲಿವೆ. ಲಕ್ಷಾಂತರ ಬಿಟ್ಟು ಕೋಟ್ಯಂತರ ಖರ್ಚಾಗುತ್ತಿದೆ, ಅದ್ದರಿಂದ ಸಾಮೂಹಿಕ ವಿವಾಹಗಳು ಸಮಾಜದ ಬಡಜನತೆ ಅರ್ಥಿಕ ಹೊರೆಯನ್ನು ಇಳಿಸುತ್ತವೆ, ಸಾಲ ಮಾಡಿ ಸಾಲದಲ್ಲಿಯೇ ಮುಳುಗುವುದನ್ನು ತಪ್ಪಿಸುತ್ತವೆ ಎಂದರು.

ಶಾಸಕ ಈ. ತುಕರಾಂ ಮಾತನಾಡಿ, ಮದುವೆ ಮಾಡಿಕೊಂಡ ದಂಪತಿ ಮನೆಗೊಂದು ಮಗುವಿರಲಿ ಎನ್ನುವ ತತ್ವವನ್ನು ಅಳವಡಿಸಿಕೊಳ್ಳಬೇಕು. ಇಂದು ಇಡೀ ಸಮಾಜದ ಮುಂದೆ ನಡೆದ ಈ ವಿವಾಹಗಳು ಅದರ್ಶ ಪ್ರಾಯವಾಗಿರುವಂತವು. ಇದು ಇಡೀ ಸಮಾಜಕ್ಕೆ ಮಾದರಿಯಾಗಿದೆ. ದಂಪತಿ ತಮ್ಮ ಮುಂದಿನ ಬದುಕಿನಲ್ಲಿ ಈ ಆದರ್ಶಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವಂತಾಗಬೇಕು. ಮದುವೆ ಎರಡು ಮನಸುಗಳ ಹೊಂದಾಣಿಕೆಯಾಗಿದೆ. ಆದ್ದರಿಂದ ಅಡಂಬರವಿಲ್ಲದೆ ಸರಳವಾಗಿ ಸಾಮೂಹಿಕವಾಗಿ ಈ ಜಯಂತಿಯನ್ನು ಸಾಮೂಹಿಕ ವಿವಾಹದ ಮೂಲಕ ಅಚರಿಸುವುದು ಉತ್ತಮವಾದುದು ಎಂದರು.

ಯಶವಂತನಗರದ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನ ವಿರಕ್ತಮಠದ ಗಂಗಾಧರ ದೇವರು ಮಾತನಾಡಿ, ಮದುವೆಗಳು ಎರಡು ಮನಸ್ಸುಗಳ ಜೋಡಣೆಯಾಗಿದೆ. 12ನೇ ಶತಮಾನದಲ್ಲಿಯೂ ಸಹ ಮದುವೆ ಎಷ್ಟು ಸರಳ ಹಾಗೂ ಸಮಾಜಮುಖೀಯಾಗಿದ್ದವು ಎಂಬುದು ತಿಳಿಯುತ್ತದೆ. ಶಾಸಕರು ಇಂಥ ಕಾರ್ಯಕ್ರಮಗಳನ್ನು ಜಯಂತಿ ಅಂಗವಾಗಿ ಹಮ್ಮಿಕೊಂಡು ಇಡೀ ವಾಲ್ಮೀಕಿ ಸಮಾಜ ಈ ನಿರ್ಧಾರ ಕೈಗೊಂಡಿರುವುದು ಉತ್ತಮ ಸಂಗತಿಯಾಗಿದೆ. ಜಯಂತಿಗಳು ಬಡವರಿಗೆ ಉತ್ತಮ ಹಬ್ಬಗಳಾಗುತ್ತವೆ. ಈ ರೀತಿಯ ವಿವಾಹಗಳಿಂದ ಅಲ್ಲದೆ ಅರ್ಥಿಕ ಹೊಡೆತದಿಂದ ಹೊರ ಬರುವುದರ ಜೊತೆಗೆ, ಸರ್ಕಾರ ಸಾಮೂಹಿಕ ವಿವಾಹ ಮಾಡಿಕೊಳ್ಳುವವರಿಗೆ ಸಿಗುವ ಸೌಲಭ್ಯಗಳು ಸಿಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ 4 ಜೋಡಿಗಳ ವಿವಾಹ ನಡೆಯಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಡಿ. ಕೃಷ್ಣಪ್ಪ, ತಹಶೀಲ್ದಾರ್‌ ರಶ್ಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮಕುಮಾರ್‌, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವೆಂಕಟೇಶ್‌, ಎನ್‌.ಕೆ.ಸಮಾಜದ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.