ಉಪ ನೋಂದಣಾಧಿಕಾರಿ ಕಚೇರಿ ಅವ್ಯವಸ್ಥೆ


Team Udayavani, Dec 12, 2019, 5:13 PM IST

mandya-tdy-2

ಕೆ.ಆರ್‌.ಪೇಟೆ: ಪಟ್ಟಣದಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸ್ಥಳ, ಸಿಬ್ಬಂದಿ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳ ಅವ್ಯವಸ್ಥೆಯಿಂದ ಜನರಿಗೆ ಸೂಕ್ತ ಸಮಯಕ್ಕೆ ನೋಂದಣಿ ಕೆಲಸವಾಗದೆ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಪ್ರತಿದಿನ ಮನೆ, ನಿವೇಶನ, ಕೃಷಿ ಭೂಮಿ ಮತ್ತಿತರೆ ನೋಂದಣಿ ಹಾಗೂ ಆಧಾರ್‌ಕಾರ್ಡ್‌ ಮಾಡಿಸಲು ತಾಲೂಕಿನ ಜನ ಉಪನೋಂದ ಣಾಧಿಕಾರಿ ಕಚೇರಿಗೇ ಬರುವ ಅನಿವಾರ್ಯತೆ ಇದೆ. ಆದರೆ ಸದರಿ ಕಚೇರಿಯಲ್ಲಿ ಓರ್ವ ನೋಂದಣಾ ಧಿಕಾರಿ, ಓರ್ವ ಡಿ.ಗ್ರೂಪ್‌ ನೌಕರ ಹೊರತು ಪಡಿಸಿದರೆ ಉಳಿದ ಎಲ್ಲಾ ಹುದ್ದೆಗಳು ಖಾಲಿ ಇದೆ. ಮಧ್ಯವರ್ತಿಗಳ ಹಾವಳಿ: ಸದರಿ ಕಚೇರಿಯಲ್ಲಿ ಮಧ್ಯ ವರ್ತಿಗಳು ಹಾಗೂ ಸ್ವಯಂ ಸೇವಕರಿಂದಲೇ ಸಾರ್ವಜನಿಕ ಕೆಲಸಗಳು ನಡೆಯುತ್ತಿವೆ. ಕಚೇರಿಯಲ್ಲಿ ಪತ್ರ ಬರಹಗಾರರು ಮತ್ತು ಮಧ್ಯವರ್ತಿಗಳು ಕಾನೂನು ಬಾಹಿರ ಚಟುವಟಿಕೆ ಸ್ಥಗಿತಗೊಳಿಸಿದರೆ ಉಪ ನೋಂದಣಾಧಿಕಾರಿಗಳ ಕಚೇರಿಗೇ ಬೀಗ ಹಾಕಬೇಕೆನ್ನುವಷ್ಟರ ಮಟ್ಟಿಗೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.

ಮಧ್ಯವರ್ತಿಗಳು ಕಾಯಬೇಕಿಲ್ಲ: ರೈತರು ವಿವಿಧ ಕೃಷಿ ಯೋಜನೆಗಳಡಿ ಆಧಾರ್‌ ಲಿಂಕ್‌ ಮಾಡಬೇಕಾಗುತ್ತದೆ. ಅದು ಉಪನೋಂದಣಾಧಿಕಾರಿ ಕಚೇರಿಯಲ್ಲೇ ಮಾಡಬೇಕಾಗುತ್ತದೆ. ಹಾಗಾಗಿ ಪ್ರತಿದಿನ ನೂರಾರು ರೈತರು ಕಚೇರಿಗೆ ಆಗಮಿಸುತ್ತಾರೆ. ಆದರೆ ಇಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಣ್ಣ ಕೆಲಸವಾಗಬೇಕಾದರೂ 20ರಿಂದ 30 ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಏಕೆಂದರೆ ಆಧಾರ್‌ ಮಾಡಿಸಲು ಬರುವ ರೈತರಿಗೆ ದಿನಾಂಕ ನಿಗದಿಪಡಿಸಿ ಟೋಕನ್‌ ಕೊಡುತ್ತಾರೆ. ರೈತರು ಆ ದಿನಾಂಕದಂದೇ ಬಂದು ಆಧಾರ್‌ ಮಾಡಿಸಬೇಕು.  ಆದರೆ ಈ ನಿಮಯ ಬರಿ ರೈತರಿಗೆ ಮಾತ್ರ.

ಪ್ರಭಾವಿಗಳು, ಮಧ್ಯವರ್ತಿಗಳಿಗೆ ಅನ್ವಯಿಸುವುದಿಲ್ಲ. ಇವರು ಲಂಚ ಕೊಟ್ಟೋ, ಪ್ರಭಾವ ಬಳಸಿ ಒಂದೇ ದಿನದಲ್ಲಿ ಕೆಲಸ ಮಾಡಿಕೊಳ್ಳುತ್ತಾರೆ. ಜಿಲ್ಲೆಯಲ್ಲಿಯೇ ಕನಿಷ್ಠ ಸಿಬ್ಬಂದಿ: ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾದರೂ ನೋಂದಣಿ ಕಚೇರಿಯಲ್ಲಿ ಯಾವುದೇ ಮೂಲ ಸೌಲಭ್ಯಗಳು, ಸಕ್ರಮ ಆಡಳಿತ ವ್ಯವಸ್ಥೆ ಇಲ್ಲ. ಕಚೇರಿಯಲ್ಲಿ ಎಫ್ಡಿಎ, ಎಸ್‌ಡಿಎ ಸೇರಿದಂತೆ ಅನೇಕ ಸಿಬ್ಬಂದಿ ಕೊರತೆ ಇದೆ. ಮುಖ್ಯವಾಗಿ ಅಗತ್ಯಕ್ಕೆ ತಕ್ಕಷ್ಟು ಕಂಪ್ಯೂಟರ್‌ ಆಪರೇಟರ್‌ಗಳೇ ಇಲ್ಲ, ಕೇವಲ ಮೂವರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಮೂಲ ಸೌಲಭ್ಯಗಳ ಕೊರತೆ:  ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮೌಲ ಸೌಲಭ್ಯಗಳ ಕೊರತೆ ಇದೆ. ಕಾರ್ಯ ನಿಮಿತ್ತ ಕಚೇರಿಗೆ ಆಗಮಿಸುವ ಸಾರ್ವಜನಿಕರು ಕುಳಿತುಕೊಳ್ಳಲು ಸೂಕ್ತ ಸ್ಥಳಾವಕಾಶ ಇಲ್ಲ. ಹೊಸ ಕಟ್ಟಡ ನಿರ್ಮಿಸಲೆಂದು ಹಳೆಯ ಕಟ್ಟಡ ಕೆಡವಿ ಉಪ ನೋಂದಣಾಧಿಕಾರಿ ಕಚೇರಿಯನ್ನು ಹಳೆ ತಾಲೂಕು ಕಚೇರಿ ಕಟ್ಟಡಕ್ಕೆ ವರ್ಗಾಯಿಸಲಾಗಿದೆ. ಸ್ಥಳಾಂತರ ಮಾಡಿ ಐದಾರು ವರ್ಷ ಕಳೆದರೂ ಇದುವರೆಗೂ ಹೊಸ ಕಟ್ಟಡ ನಿರ್ಮಿಸುವ ಯಾವುದೇ ಸೂಚನೆಗಳು ಕಂಡು ಬರುತ್ತಿಲ್ಲ. ಜನ ಕಚೇರಿ ಹೊರಗಿನ ಮರದಡಿಗಳಲ್ಲಿ ಕುಳಿತು ಕಾಯುವಂತಾಗಿದೆ. ಕಚೇರಿಯ ಒಳಭಾಗದಲ್ಲಿ ಕೇವಲ ಹತ್ತರಿಂದ ಹದಿನೈದು ಜನ ಮಾತ್ರ ಕುಳಿತುಕೊಳ್ಳಲು ಜಾಗವಿದೆಯಷ್ಟೆ.

ವಿವಾಹ ನೋಂದಣಿಗೂ ಕಿರಿಕಿರಿ:  ಸರ್ಕಾರಿ ಸೌಲಭ್ಯ ಹಾಗೂ ಸಾಂಪ್ರದಾಯಿಕ ಪದ್ಧತಿಯಲ್ಲಿ ವಿವಾಹವಾದರೂ ಬಳಿಕ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸುವುದು ಕಡ್ಡಾಯ ಮಾಡಲಾಗಿದೆ. ಆದರೆ ತಾಲೂಕಿನಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ

ಅಧಿಕಾರಿಗಳಿಗೆ ಲಾಭ ತಂದುಕೊಡುವ ಆಸ್ತಿ ನೋಂದಣಿಗಳಿಗೆ ಮಾತ್ರ ಆದ್ಯತೆ ನೀಡಿ, ವಿವಾಹ ನೋಂದಣಿಗೆ ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನವ ವಿವಾಹಿತ ಜೋಡಿ ಉಪನೊಂದಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ವಿವಾಹ ನೋಂದಣಿ ಮಾಡಿಸಿಕೊಂಡಿರುವ ಘಟನೆಯೂ ಇಲ್ಲಿ ನಡೆದಿದೆ.

 

-ಎಚ್‌.ಬಿ.ಮಂಜುನಾಥ್‌

ಟಾಪ್ ನ್ಯೂಸ್

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.