ಕಾಮಗಾರಿ ಶೀಘ್ರಪೂರ್ಣಗೊಳಿಸಿ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಆರಂಭಕ್ಕೆ ಪ್ರಯತ್ನ
Team Udayavani, Dec 12, 2019, 5:45 PM IST
ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳು ಶೀಘ್ರ ಮುಗಿಸಬೇಕು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ. ನಾರಾಯಣರಾವ್ ಹೇಳಿದರು.
ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಿಆರ್‌ಈ ಇಲಾಖೆಯಿಂದ ನಡೆಯುತ್ತಿರುವ ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರವಾಗಿ ಮುಗಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿ ಕಾರಿ ಸಿ.ಜೆ. ಹಳ್ಳದ ಮಾತನಾಡಿ, ಫಲಿತಾಂಶ ಹೆಚ್ಚಳಕ್ಕಾಗಿ ವಿಷಯವಾರು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಸಲಾಗುತ್ತದೆ ಮತ್ತು ಮುಂದಿನ ದಿನಗಳಲ್ಲಿ ಸಂವಾದ ಕಾರ್ಯಕ್ರಮ ಹಾಗೂ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಸೇರಿದಂತೆ ವಿವಿಧ ಯೋಜನೆ ಹಾಕಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ಭಾಗದಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಬಹಳಷ್ಟು ದೂರುಗಳಿವೆ. ಹೀಗಾಗಿ ಗುತ್ತಿಗೆದಾರರು ಮತ್ತು ಪಿಡಿಒಗಳಿಗೆ ಬೆನ್ನುಹತ್ತಿ ಕೆಲಸ ಮಾಡಿಸಿಕೊಳ್ಳುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ ಎಂದರು.
ಕೋಹಿನೂರ ಮೊರಾರ್ಜಿ ಶಾಲೆಗಾಗಿ ಸ್ಥಳ-ಅನುದಾನ ಮಂಜೂರಾಗಿದೆ. ಆದರೂ ಇಂದಿಗೂ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ ಎಂದಾಗ ಮೊರಾರ್ಜಿ ಶಾಲೆಗಳು ಜಿಲ್ಲಾ ಅಧಿಕಾರಿಗಳ ವ್ಯಾಪ್ತಿಗೆ ಬರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಹುಲಸೂರು ಸರ್ಕಾರಿ ಕಾಲೇಜಿನ ಮಕ್ಕಳಿಗಾಗಿ ಹಾಸ್ಟೆಲ್‌ಗಾಗಿ ಯೋಜನೆ ರೂಪಿಸಿ ನನಗೆ ಕೊಡಿ, ಅದನ್ನು ಮಾಡಿಸುವುದಾಗಿ ಭರವಸೆ ನಿಡಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಇಲ್ಲದ ಕಾರಣ ಬಡ ರೋಗಿಗಳು ಸೋಲ್ಲಾಪುರ, ಉಮರ್ಗಾ ಮತ್ತು ಲಾತೂರ ಹೋಗುವಂತಾಗಿದೆ. ಆದ್ದರಿಂದ ಸಿಟಿ ಸ್ಕ್ಯಾನ್ ಸಂಬಂಧಪಟ್ಟಂತೆ
ನನಗೆ ವರದಿ ನೀಡಿದರೆ ಸರ್ಕಾರದ ಗಮನಕ್ಕೆ ತಂದು ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಮಾಡಲಾಗುವುದು ಎಂದು ತಾಲೂಕು ಆರೋಗ್ಯ ಅಧಿಕಾರಿಗೆ ತಿಳಿಸಿದರು.
ತಾಪಂ ಅಧ್ಯಕ್ಷೆ ಯಶೋಧಾ ರಾಠೊಡ ಮಾತನಾಡಿ, ಬಿಸಿಯೂಟ ಆಹಾರ ಪದಾರ್ಥಗಳಲ್ಲಿ ತರಕಾರಿ ಮತ್ತು ಬೇಳೆ ಇಲ್ಲದ ಊಟ ನೀಡಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಹೀಗಾಗಿ ಸಂಬಂಧಪಟ್ಟವರು ಮಕ್ಕಳಲ್ಲಿ ಪೌಷ್ಟಿಕ ಆಹಾರ ಸೀಗುವಂತೆ ಮಾಡಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನಂತರ ಶಿಶು ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಶು ಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ಮಾಡಲಾಯಿತು.
ತಹಶೀಲ್ದಾರ್ ಸಾವಿತ್ರಿ ಸಲಗರ, ತಾಪಂ ಇಒ ಮಡೋಳಪ್ಪಾ ಪಿ.ಎಸ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಓಂಪ್ರಕಾಶ ಪಾಟೀಲ, ಉಪಾಧ್ಯಕ್ಷ ಸಂಗಮೇಶ ಬಿರಾದಾರ್, ವ್ಯವಸ್ಥಾಪಕ ಜಯಪ್ರಕಾಶ ಚವ್ಹಾಣ ಸೇರಿದಂತೆ ಸದಸ್ಯರು, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.