ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಿ.ಎಸ್.ವೈ
Team Udayavani, Dec 12, 2019, 8:14 PM IST
ಬೆಂಗಳೂರು: ಹೃದಯ ತಪಾಸಣೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಆ್ಯಂಜಿಯೋಪ್ಲಾಸ್ಟ್ ಚಿಕಿತ್ಸೆಗೆ ಒಳಗಾಗಿರುವ ಮಾಜೀ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಬಿಜೆಪಿ ನಾಯಕರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿಯವರ ಜೊತೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇದ್ದರು.
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿರುವ ವಿಚಾರವನ್ನು ಸ್ವತಃ ಸಿದ್ಧರಾಮಯ್ಯನವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ @siddaramaiah ಅವರನ್ನು ಮುಖ್ಯಮಂತ್ರಿ @BSYBJP ಅವರು ಇಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಗೃಹ ಸಚಿವ @BSBommai , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ @ikseshwarappa ಉಪಸ್ಥಿತರಿದ್ದರು. pic.twitter.com/nMcEbrpBcS
— Karnataka Varthe (@KarnatakaVarthe) December 12, 2019
ತನ್ನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಯವರಿಗೆ ಮತ್ತು ಬೊಮ್ಮಾಯಿ ಹಾಗೂ ಈಶ್ವರಪ್ಪನವರಿಗೆ ಸಿದ್ಧರಾಮಯ್ಯನವರು ಕೃತಜ್ಞತೆ ಅರ್ಪಿಸಿದ್ದಾರೆ.
ನನ್ನ ಆರೋಗ್ಯ ವಿಚಾರಿಸಲು ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆಗಳು.
ರಾಜಕೀಯ ಭಿನ್ನಾಭಿಪ್ರಾಯ ವೈಯಕ್ತಿಕ ಸ್ನೇಹಕ್ಕೆ ಅಡ್ಡಿಯಾಗಬಾರದು ಎಂದು ನಂಬಿಕೊಂಡು ಬಂದವನು ನಾನು. pic.twitter.com/atjfEzqmxf
— Siddaramaiah (@siddaramaiah) December 12, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.