ಡಿಸಿಎಂ ಸಿಗದ ಹಿನ್ನೆಲೆ: ರಾಮುಲು ಮುನಿಸು ಸಂಪುಟ ಸಭೆಗೆ ಗೈರು
Team Udayavani, Dec 12, 2019, 10:58 PM IST
ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಗೈರು ಹಾಜರಾಗಿದ್ದರು.
ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತಿಲ್ಲ ಎನ್ನುವ ಕಾರಣಕ್ಕೆ ರಾಮುಲು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅದೇ ಕಾರಣಕ್ಕೆ ಬೆಂಗಳೂರಿನಲ್ಲಿ ಇದ್ದರೂ ಸಂಪುಟ ಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ ವಿಕಾಸಸೌಧದಲ್ಲಿ ನಡೆದ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಾರಂಭದಿಂದಲೂ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅನುಪಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ತಳವಾರ, ಪರಿವಾರ ಹಾಗೂ ಸಿದ್ದಿ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಈಗಾಗಲೇ ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಎಸ್ಟಿ ಸಮುದಾಯ ಹೋರಾಟ ನಡೆಸಿದ್ದು, ಈಗಿರುವ ಶೇಕಡಾ 3.5 ರಿಂದ ಶೇಕಡಾ 7 ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದರ ನಡುವೆ ಸರ್ಕಾರ ಮತ್ತೆ ಮೂರು ಜಾತಿಗಳನ್ನು ಎಸ್ಟಿ ಸಮುದಾಯಕ್ಕೆ ಸೇರಿಸಿರುವುದು. ರಾಮುಲು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಮುಖ್ಯಮಂತ್ರಿಯ ಅನುಮತಿ ಪಡೆದು ಸಂಪುಟ ಸಭೆಗೆ ಗೈರು ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.