ಧೂಳಿನ ಕಾರಣಕ್ಕಾಗಿ ಕ್ರೀಡಾಂಗಣ ಬಂದ್


Team Udayavani, Dec 13, 2019, 10:16 AM IST

bng-tdy-1

ಬೆಂಗಳೂರು: ರಸ್ತೆಯಲ್ಲಿನ ಕಸ ಗಾಳಿಗೆ ಹಾರಿ ಮನೆಯೊಳಗೆ ಬರುತ್ತದೆ ಅಂತ ಮನೆಗೆ ಬೀಗಹಾಕಿ ಎಲ್ಲರೂ ಹೊರಗೆ ವಾಸವಿದ್ದರೆ ಹೇಗಿರುತ್ತದೆ? ಕೇಳಲಿಕ್ಕೂ ಇದು ಹಾಸ್ಯಾಸ್ಪದ. ಆದರೂ ಇಂತಹದ್ದೇ ಕಾರಣಕ್ಕಾಗಿ ಮಲ್ಲೇಶ್ವರದಲ್ಲಿ ಐದೂವರೆ ಕೋಟಿ ರೂ. ಸುರಿದು ನಿರ್ಮಿಸಿದ ಕಟ್ಟಡ ವೊಂದರ ಬಾಗಿಲನ್ನು ಕಳೆದ ಒಂದೂವರೆ ವರ್ಷದಿಂದ ತೆರೆದಿಲ್ಲ. ಇದರಿಂದಾಗಿ ಧೂಳು ತುಂಬಿದ ಆ ಕಟ್ಟಡವು ಈಗ ಭೂತಬಂಗಲೆಯಂತೆ ಗೋಚರಿಸುತ್ತಿದೆ!- ರಾಜ್ಯದ ಏಕೈಕ ವಾಲಿಬಾಲ್‌ ಒಳಾಂಗಣ ಕ್ರೀಡಾಂಗಣದ ದುಃಸ್ಥಿತಿ ಇದು.

ವಾಲಿಬಾಲ್‌ ಪಟುಗಳ ಅನುಕೂಲಕ್ಕಾಗಿ ಸಂಸದರ ಅನುದಾನ 1.9 ಕೋಟಿ ರೂ., ರಾಜ್ಯಸಭಾ ಸದಸ್ಯರ ಅನುದಾನ 50 ಲಕ್ಷ ರೂ., ಶಾಸಕರ ಅನುದಾನ 3.21 ಕೋಟಿ ರೂ. ಸೇರಿದಂತೆ ಒಟ್ಟಾರೆ 5.61 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಾಲಿಬಾಲ್‌ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಈ ಮೂರಂತಸ್ತಿನ ಕಟ್ಟಡದಲ್ಲಿ ಒಂದು ವಾಲಿಬಾಲ್‌ ಕೋರ್ಟ್‌, ಎರಡು ತಂಡಗಳ ಕೊಠಡಿಗಳು, ಎರಡು ಸ್ಟೋರ್‌ ರೂಮ್‌ ಗಳು, 500 ಜನರು ಕುಳಿತುಕೊಳ್ಳುವ ಆಸನಗಳುಳ್ಳ ಸಾರ್ವಜನಿಕ ಗ್ಯಾಲರಿ, ವಿಐಪಿ ಗ್ಯಾಲರಿ ನಿರ್ಮಿಸಲಾಗಿದೆ. ಮುಖ್ಯದ್ವಾರಕ್ಕೆ ಗ್ಲಾಸ್‌ ಅಳವಡಿಸಲಾಗಿದೆ. ಹಾಗೆಯೇ ಕ್ರೀಡಾಂಗಣದಲ್ಲಿ ಗಾಳಿ, ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಆದರೆ, ಅಲ್ಲಿ ಆಟ ಆಡಲಿಕ್ಕೆ ಮಾತ್ರ ಅವಕಾಶ ನೀಡಿಲ್ಲ. ಒಂದೆಡೆ ಕ್ರೀಡಾಪಟುಗಳಿಗೆ ಸೂಕ್ತ ಕ್ರೀಡಾಂಗಣಗಳಿಲ್ಲದೆ ಒದ್ದಾಡುತ್ತಿದ್ದಾರೆ. ಜತೆಗೆ ಅಭ್ಯಾಸಕ್ಕಾಗಿ ಕ್ರೀಡಾಂಗಣಗಳ ಕೊರತೆ ಇರುವ ಕಾರಣ ಪ್ರತಿಭೆಗಳು ಮುನ್ನೆಲೆಗೆ ಬರುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ.  ಆದರೆ, ಇತ್ತ ದೂಳಿನ ಕಾರಣಕ್ಕಾಗಿ ಕ್ರೀಡಾಂಗಣಕ್ಕೆ ಬಾಗಿಲು ಹಾಕಲಾಗಿದೆ.

 ಹೊರಾಂಗಣ ಕಾಮಗಾರಿಗಾಗಿ ಬೀಗ?: ಒಳಾಂಗಣ ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಅಂದರೆ ಚಂದ್ರ ಶೇಖರ್‌ ಆಜಾದ್‌ ಮೈದಾನದಲ್ಲಿ ಬಿಬಿಎಂಪಿಯ 2 ಕೋಟಿ ರೂ. ವೆಚ್ಚದಲ್ಲಿ ಹೊರಾಂಗಣ ಕ್ರೀಡಾಂಗಣದ ಕಾಮಗಾರಿ ಒಂದು ವರ್ಷದಿಂದ ನಡೆಯುತ್ತಿದೆ. ಈ ಹೊರಾಂಗಣ ಕ್ರೀಡಾಂಗಣದ ಮಧ್ಯಭಾಗದಲ್ಲಿ ಚರಂಡಿ ಪೈಪುಗಳು ಹಾದುಹೋಗಿದ್ದು, ಅತ್ಯಂತ ಜಾಗರೂಕತೆಯಿಂದ ಈ ಕಾಮಗಾರಿ ಮಾಡಬೇಕಾಗಿದೆ. ಈ ಕಾಮಗಾರಿಯಿಂದ ಮೈದಾನದ ದೂಳು ಒಳಾಂಗಣ ಕ್ರೀಡಾಂಗಣಕ್ಕೆ ಹೋಗಲಿದೆ. ಆದ್ದ ರಿಂದ ಬಾಗಿಲು ಹಾಕಲಾಗಿದೆ ಎಂದು ಸ್ಥಳೀಯ ಪಾಲಿಕೆ ಸದಸ್ಯ ಮಂಜುನಾಥ ರಾಜು ಸ್ಪಷ್ಟಪಡಿಸುತ್ತಾರೆ.

ಹೊರಾಂಗಣ ಕ್ರೀಡಾಂಗಣದಲ್ಲಿ ಬಹುತೇಕ ಕಾಮಗಾರಿಯು ಮುಗಿದಿದೆ. ಸಿಂಥಟಿಕ್‌ ಟ್ರ್ಯಾಕ್‌, ಬಾಲ್‌ ಬ್ಯಾಡ್ಮಿಂಟನ್‌, ಶೆಟಲ್‌ ಕಾಕ್‌, ಕಬಡ್ಡಿ ಮೈದಾನ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆಯೇ ವಾಲಿಬಾಲ್‌ ಒಳಾಂಗಣ ಕ್ರೀಡಾಂಗಣ ಸೇವೆಗೆ ಮುಕ್ತವಾಗಲಿದೆ ಎಂದು ಅವರು ತಿಳಿಸಿದರು. ಆದರೆ, ಇದು ಸಮಂಜಸವಾದ ಕಾರಣವಲ್ಲ. ಹಾಗೆ ನೋಡಿದರೆ, ಸುಮಾರು ದಿನಗಳಿಂದ ಬೀಗ ಹಾಕಿದ್ದರಿಂದ ನೂತನ ಒಳಾಂಗಣ ಕ್ರೀಡಾಂಗಣವು ದೂಳಿನಿಂದ ತುಂಬಿದೆ ಎಂದು ಕ್ರೀಡಾಪಟುಗಳು ಸದಸ್ಯರ ಸಮಜಾಯಿಷಿಯನ್ನು ನಿರಾಕರಿಸುತ್ತಾರೆ.

ಈ ವಾಲಿಬಾಲ್‌ ಒಳಾಂಗಣ ಕ್ರೀಡಾಂಗಣ ಸ್ಥಳದಲ್ಲಿ ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕಚೇರಿ ಮತ್ತು ವಸತಿ ಗೃಹ ಕಟ್ಟಡವಿತ್ತು. ಬಿಬಿಎಂಪಿ ಜತೆ ಚರ್ಚಿಸಿ ಕಚೇರಿಯನ್ನು ಸೇವಾ ಕೇಂದ್ರ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಹಳೆಯ ಕಟ್ಟಡ ತೆರವುಗೊಳಿಸಿ ಮೂರು ಮಹಡಿಗಳ ಕಟ್ಟಡ ನಿರ್ಮಿಸಲಾಯಿತು.

ಉದ್ಘಾಟನಾ ಫ‌ಲಕ ತೆರವುಗೊಳಿಸಿಲ್ಲ :  2018ರ ಮಾರ್ಚ್‌ 19ರಂದು ಸ್ಥಳೀಯ ಸಂಸದ ಹಾಗೂ ಕೇಂದ್ರ ಸಚಿವರು ಉದ್ಘಾಟಿಸಿದ್ದರು. ಕಟ್ಟಡವುಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಉದ್ಘಾಟನಾ ಸಮಾರಂಭವೆಂದು ಬ್ಯಾನರ್‌ ಅಳವಡಿಸಲಾಗಿತ್ತು. ಆದರೆ, ಈವರೆಗೂ ಬ್ಯಾನರ್‌ ತೆರವುಗೊಳಿಸಿಲ್ಲ. ಕೆಲ ಉಪಕರಣಗಳಿಗೆ ದೂಳು ಹಿಡಿದಿವೆ. ಕ್ರೀಡಾಂಗಣದ ಮುಂಭಾಗವು ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ನಿಲುಗಡೆ ತಾಣವಾಗಿದೆ.

ಎಲೆಕ್ಟ್ರಿಕಲ್‌ ವರ್ಕ್‌, ಎಸಿ ಅಳವಡಿಕೆ ಸೇರಿದಂತೆ ಕೆಲವು ಕೆಲಸಗಳು ನಡೆಯುತ್ತಿರುವುದರಿಂದ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ನೀಡಿಲ್ಲ. 2020ರ ಆರಂಭದಲ್ಲೇ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದ್ದು, ಫೆಬ್ರವರಿಯಿಂದ ಕ್ರೀಡಾಂಗಣಕ್ಕೆ ಮುಕ್ತ ಅವಕಾಶ ನೀಡಲಾಗುವುದು. ಕೆ. ನಂದಕುಮಾರ್‌, ವಾಲಿಬಾಲ್‌ ಅಸೋಸಿಯೇಷನ್‌ಪ್ರಧಾನ ಕಾರ್ಯದರ್ಶಿ.

 

-ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.