ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
Team Udayavani, Dec 13, 2019, 2:44 PM IST
ಪಿರಿಯಾಪಟ್ಟಣ: ಪಟ್ಟಣದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗ ಮತ್ತು ರಾಜಕಾಲುವೆಗಳ ಸರ್ವೆ ನಡೆಸಿ, ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪುರ ಸಭಾ ಮುಖ್ಯಾಧಿಕಾರಿ ಚಂದ್ರು ಕುಮಾರ್‌ತಿಳಿಸಿದರು.
ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿ ಕೊಂಡಿರುವ 4ನೇ ವಾರ್ಡ್‌ನ ಬಾನು ಕೋಟಿ ಬಡಾವಣೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜಕಾಲುವೆಯನ್ನು ತೆರವುಗೊಳಿಸಲು ಪುರಸಭೆ ವತಿಯಿಂದ ಮೂಲ ನಕ್ಷೆಯಂತೆ ಸರ್ವೆ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು.
ಮನೆಗಳಿಗೆ ಕೊಳಚೆ ನೀರು: ಈ ವೇಳೆ ಇಲ್ಲಿನ ನಿವಾಸಿ ಗಿರೀಶ್ ಮಾತನಾಡಿ, ಪಟ್ಟಣದ ಹೊರ ವಲಯದ ತಾವರೆ ಕೆರೆ ಕೋಡಿ ಬಿದ್ದ ಸಂದರ್ಭದಲ್ಲಿ ಬಿ.ಎಂ. ರಸ್ತೆಯ ಎಡಭಾಗದ ಬಡಾವಣೆಗಳು ಅಂಗಡಿ ಮುಂಗ್ಗಟ್ಟುಗಳು ಮುಳುಗಡೆಗೊಂಡು ಇಲ್ಲಿನ ನಿವಾಸಿಗಳು ಮತ್ತು ಸಾರ್ವಜನಿಕರು ನರಕಯಾತನೆ ಅನುಭವಿಸುವಂತಾಗಿದೆ. ಇತ್ತೀಚೆಗೆ ಪಟ್ಟಣದಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿಯಿಂದ ಅಲ್ಲಲ್ಲಿ ನೀರು ನಿಂತು ಮನೆಯ ಗಲೀಜು ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ಅವಲತ್ತು ಕೊಂಡರು. ಈ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪುರ ಸಭಾ ಮುಖ್ಯಾಧಿಕಾರಿ ಚಂದ್ರುಕುಮಾರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಸಿಬ್ಬಂದಿ ಆದರ್ಶ, ಕುಮಾರ್, ಸ್ಥಳೀಯ ನಿವಾಸಿಗಳಾದ ಲಾದುಲಾಲ್ ಜೈನ್, ಸ್ವಾಮೀ ಗೌಡ, ನಾಗರಾಜು, ಶಿವ ಕುಮಾರ್, ಜೋಸಫ್, ಕ್ಯಾಲಿ ನಾತು ರಾಮ್ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.