ರಥಯಾತ್ರೆಗೆ ಅದ್ಧೂರಿ ಸ್ವಾಗತ
Team Udayavani, Dec 13, 2019, 5:11 PM IST
ಕೊರಟಗೆರೆ: ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಸಂಕಲ್ಪದಂತೆ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಯಂತಿ ಅಂಗವಾಗಿ ಆಯೋಜಿಸಿರುವ ರಥಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ತಾಲೂಕು ವೀರಶೈವ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ ಮಾತನಾಡಿ, ರಥಯಾತ್ರೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ 5 ಜಿಲ್ಲಾ ತಾಲೂಕುಗಳಲ್ಲಿ ಯಾತ್ರೆ ಪೂರೈಸಿ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ಮುಖಾಂತರ ಸಿದ್ಧರಬೆಟ್ಟದಿಂದ ತೋವಿನಕೆರೆ ಮಾರ್ಗವಾಗಿ ಚಿಕ್ಕತೊಟ್ಟುಕೆರೆ, ಕೆಸ್ತೂರು, ಬೆಳ್ಳಾವಿ, ಚೇಳೂರು, ಹೊಸಕೆರೆ, ಬೆಟ್ಟದಹಳ್ಳಿ, ತ್ಯಾಗಟೂರು, ನಿಟ್ಟೂರು, ಮಲ್ಲಸಂದ್ರದ ಮೂಲಕ ಸಿದ್ಧಗಂಗಾ ಮಠ ತಲುಪಲಿದೆ ಎಂದು ಹೇಳಿದರು.
ತಾಲೂಕು ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಪರ್ವತಯ್ಯ ಮಾತನಾಡಿ, ರಥಯಾತ್ರೆಯು ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆ ಪ್ರವಾಸ ಮಾಡಿ ಜ.5ರಂದು ಕುಣಿಗಲ್ ತಾಲೂಕಿನ ತಪೋಕ್ಷೇತ್ರ ಕಗ್ಗೆರೆಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಪಪಂ ಸದಸ್ಯ ಪ್ರದೀಪ್ ಕುಮಾರ್, ರಾಜೇಶ್, ಮಹೇಶ್, ಉಮೇಶ್, ಗೀರಿಶ್, ಜಗನ್ನಾಥ್, ಸೋಮಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.