ಶಬರಿಮಲೆ ವಿವಾದ: ಪ್ರವೇಶಕ್ಕೆ ಅನುಮತಿ ಇಲ್ಲ
Team Udayavani, Dec 13, 2019, 7:57 PM IST
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶಕ್ಕೆ ಅವಕಾಶ ಮತ್ತು ರಕ್ಷಣೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ತಕ್ಷಣವೇ ಆದೇಶ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಹೋರಾಟಗಾರ್ತಿಯರಾಗಿರುವ ಬಿಂದು ಅಮ್ಮಿಣಿ ಮತ್ತು ಎಸ್.ಫಾತಿಮಾ ಎಂಬುವರು ಈ ಅರ್ಜಿ ಸಲ್ಲಿಕೆ ಮಾಡಿದ್ದರು.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬೆx ನೇತೃತ್ವದ ಪೀಠ “ಇದೊಂದು ಅತ್ಯಂತ ಭಾವನಾತ್ಮಕ ವಿಚಾರ. ಹೀಗಾಗಿ ತಕ್ಷಣದಲ್ಲಿಯೇ ಆದೇಶ ನೀಡಲು ಸಾಧ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ವಿಚಾರ ಈಗ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ವಿಸ್ತೃತ ಪೀಠ ಇನ್ನಷ್ಟೇ ರಚನೆಯಾಗಬೇಕಿದೆ. ಅಲ್ಲಿ ತನಕ ಮಹಿಳೆಯರ ಪ್ರವೇಶ ನಿಟ್ಟಿನಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಾಗದು’ ಎಂದು ಸ್ಪಷ್ಟಪಡಿಸಿತು. ಈ ಪೀಠದಲ್ಲಿ ನ್ಯಾಯಮೂರ್ತಿ ಬಿ ಆರ್ ಗವಾಯ್ ಹಾಗೂ ನ್ಯಾ. ಸೂರ್ಯಕಾಂತ್ ಇದ್ದಾರೆ.
ಯಾವುದನ್ನಾದರೂ ಖಚಿತಪಡಿಸಿ ಎಂದು ವಕೀಲೆ ಇಂದಿರಾ ಜೈಸಿಂಗ್ ಆಗ್ರಹಕ್ಕೂ ಮಣಿಯದ ನ್ಯಾಯಪೀಠ, ” ಈ ದೇಶದಲ್ಲಿ ಕೆಲವೊಂದು ಆಚರಣೆಗಳು ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದು ಭಾವನಾತ್ಮಕವಾಗಿದೆ. ಅದರಲ್ಲಿ ಇದೂ ಒಂದು. ದೇಶದಲ್ಲಿ ಹಿಂಸೆಗೆ ನಾವು ಅವಕಾಶ ಕೊಡುವುದಿಲ್ಲ ಎಂದು ಹೇಳಿತು. ಹೀಗಾಗಿ, ಯಾವುದೇ ಆದೇಶ ನೀಡಲು ಸಾಧ್ಯವಾಗದು ಎಂದು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.