ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು NRCಯನ್ನು ಪಶ್ಚಿಮಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ
Team Udayavani, Dec 14, 2019, 8:05 AM IST
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಎನ್ ಆರ್ಸಿ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಮಾತ್ರವಲ್ಲದೇ ಸೋಮವಾರದಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಬೆಂಕಿಯೊಂದಿಗೆ ಸರಸವಾಡುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಪದೆ ಪದೇ ಹೇಳುತ್ತಿದ್ದೇವೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಯನ್ನು ಬಲವಂತವಾಗಿ ಜಾರಿಗೊಳಿಸುವುದಾಗಿ ಅವರು ಪಣತೊಟ್ಟಿದ್ದಾರೆ. ಆದರೇ ಪಶ್ಚಿಮ ಬಂಗಾಳದಲ್ಲಿ ಇವೆರಡೂ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮತ್ತೊಮ್ಮೆ ಒತ್ತಿ ಹೇಳಲಾಗುವುದು ಎಂದರು.
ಕೇಂದ್ರಕ್ಕೆ ಕಾಯ್ದೆಗಳನ್ನು ಜಾರಿಗೊಳಿಸುವ ಮತ್ತು ರಾಜ್ಯಗಳಿಗೆ ಅದರ ಕುರಿತು ನಿರ್ದೇಶನ ನೀಡುವ ಹಕ್ಕಿದೆ. ಆದರೆ ಅದನ್ನು ಕಾರ್ಯಗತಗೊಳಿಸುವುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು. ಬಲವಂತವಾಗಿ ಕಾಯ್ದೆ ಹೇರುವುದು ಸಾಧ್ಯವೇ ? ಪಶ್ಚಿಮ ಬಂಗಾಳದಲ್ಲಿ, ನಮ್ಮ ಸರ್ಕಾರ ಕೇಂದ್ರದ ಈ ನಿರ್ದೇಶನವನ್ನು ಪಾಲಿಸುವುದಿಲ್ಲ ಎಂದು ಮಿಡ್ನಾಪೂರ್ ಜಿಲ್ಲೆಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.