ಉದ್ಯಾನಗಳಲ್ಲಿ ಹೊಸ ವರ್ಷ ಆಚರಣೆ ನಿಷೇಧ
Team Udayavani, Dec 14, 2019, 10:31 AM IST
ಬೆಂಗಳೂರು: ಉದ್ಯಾನಗಳಲ್ಲಿ ಕ್ರಿಸ್‌ಮಸ್, ಹೊಸವರ್ಷ ಆಚರಿಸುವುದನ್ನು ಬಿಬಿಎಂಪಿ ನಿಷೇಧಿಸಿದೆ. ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರು ಹುಟ್ಟಿದ ದಿನ, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಮಾಡುತ್ತಾ ಉದ್ಯಾನಗಳನ್ನು ಹಾಳು ಮಾಡುತ್ತಿದ್ದಾರೆ. ಮಧ್ಯಪಾನ ಮತ್ತು ಧೂಮಪಾನ ಸೇವನೆ ಮಾಡುವುದು, ಗಿಡ ಮರಗಳಿಗೆ ಹಾನಿ ಮಾಡುವುದು, ಕುಳಿತುಕೊಳ್ಳುವ ಬೆಂಚುಗಳು ಹಾಗೂ ಇತರೆ ಉಪಕರಣಗಳನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ.
ಪ್ರಮುಖ ಉದ್ಯಾನಗಳಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿದ್ದು, ಉಳಿದ ಅನೇಕ ಉದ್ಯಾನಗಳು ಅಕ್ರಮ ಚಟುವಟಿಕೆ ತಾಣಗಳಾಗಿ ಮಾರ್ಪಟ್ಟಿವೆ. ಆದ್ದರಿಂದ ಪಾಲಿಕೆ ಪ್ರಸಕ್ತ ವರ್ಷದಿಂದ ಸಂಭ್ರಮಾಚರಣೆಗಳನ್ನು ನಿಷೇಧಿಸಲಾಗಿದ್ದು, ಈ ಕುರಿತು ಕೂಡಲೇ ನೋಟಿಸ್ ಸಿದ್ಧಪಡಿಸಿ ಎಲ್ಲ ವಿಭಾಗಕ್ಕೆ ಕಳುಹಿಸಲು ಆಯುಕ್ತರು ಅಧಿಕಾರಿಗಳಿಗೆ ಶುಕ್ರವಾರ ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 1,200ಕ್ಕೂ ಹೆಚ್ಚು ಉದ್ಯಾನಗಳದ್ದು, ಉದ್ಯಾನಗಳಿಗೆ ರಕ್ಷಣೆ ಕೊರತೆ ಎದುರಾಗಿದೆ. ಕೆಲವು ವಾರ್ಡ್‌ಗಳಲ್ಲಿ ಉದ್ಯಾನಗಳನ್ನು ರಕ್ಷಣೆ ಮಾಡಬೇಕಾದ ಭದ್ರತಾ ಸಿಬ್ಬಂದಿಗಳು ಹಣದಾಸೆಗೆ ಉದ್ಯಾನದ ಬೀಗವನ್ನು ಬೇರೊಬ್ಬರಿಗೆ ಕೊಟ್ಟು ಅಕ್ರಮ ಚಟುವಟಿಕೆ ನಡೆಸಲು ಕಾರಣವಾಗಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೂ ಬಾಗಿಲು ತೆರಯಬೇಕಾದ ಉದ್ಯಾನಗಳು ಕೆಲ ವೇಳೆ ಮಧ್ಯಾಹ್ನವೇ ಬಾಗಿಲು ಹಾಕಿರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.