ಅಧಿಕಾರಿಗಳ ವಿರುದ್ಧ ಆತುರದ ಕ್ರಮ ಬೇಡ

Team Udayavani, Dec 14, 2019, 10:53 AM IST

bng-tdy-5

ಬೆಂಗಳೂರು: ವರ್ತೂರು ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಕಾನೂನುಬಾಹಿರವಾಗಿ ಮಾರಾಟ ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ನೋಂದಣಾಧಿಕಾರಿ ಎಂ.ಕೆ.ಶಾಂತಮೂರ್ತಿ ಹಾಗೂ ಭೂದಾಖಲೆಗಳ ಜಂಟಿ ನಿರ್ದೇಶರಾದ ಪಿ.ಎಸ್‌. ಕುಸುಮಲತ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳು ನ್ಯಾ.ಜಿ.ನರೇಂದರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು. ಆಗ ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಆರೋಪಿತ ಅಧಿಕಾರಿಗಳ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಮಧ್ಯಂತರ ಆದೇಶ ಹೊರಡಿಸಿತು. ಅಲ್ಲದೇ, ಪ್ರತಿವಾದಿಗಳಾದ ವಿಲ್ಸನ್‌ ಗಾರ್ಡನ್‌ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣಗಳಲ್ಲಿ ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಅವರಿಗೂ ಇದಕ್ಕೂ ಸಂಬಂಧವಿಲ್ಲ. ಅರ್ಜಿದಾರರು ತಹಸೀಲ್ದಾರ್‌ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು(ಎಡಿಎಲ್‌ಆರ್‌) ಮಾಡಿರುವ ಪೋಡಿಗೆ ಸಹಿ ಹಾಕಿದ್ದಾರಷ್ಟೇ, ಹಾಗಾಗಿ ಅವರ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಅಷ್ಟಕ್ಕೂ, ಅರ್ಜಿದಾರರೇ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ವರ್ಗಾವಣೆ ಮಾಡಿದ್ದಾರೆನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಪ್ರತಿವಾದಿಗೆ ದೂರು ದಾಖಲಿಸುವ ಅಧಿಕಾರವಿಲ್ಲ ಎಂದೂ ಸಹ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಕರಣದ ಹಿನ್ನೆಲೆ: ಮುಳ್ಳೂರು ಗ್ರಾಮದ ಕೆಲವು ಸರ್ವೆ ನಂಬರ್‌ 49, 47, 48, 49/6, 44, 45 ಮತ್ತು 91ರ ಜಮೀನುಗಳನ್ನು ನೋಂದಣಿ ಮಾಡಬಾರದೆಂದು ಎಲ್ಲ ಉಪ ನೋಂದಣಾಧಿಕಾರಿಗಳಿಗೆ ನಿರ್ದೇಶಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ ಪ್ರಸಾದ್‌ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಅವರಿಗೆ ಅ. 11ರಂದು ಪತ್ರ ಬರೆದಿದ್ದರು. ಅದರಂತೆ ತ್ರಿಲೋಕಚಂದ್ರ ಈ ಸರ್ವೇ ನಂಬರ್‌ಗಳ ಜಮೀನು ನೋಂದಣಿ ಮಾಡದಂತೆ ಸೂಚಿಸಿದ್ದರು. ಆದಾಗ್ಯೂ ಬಾಣಸವಾಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ದಯಾನಂದ ಭಂಡಾರಿ ವಿಚಾರಣೆ ನಡೆಸಿ, ವರದಿ ಸಲ್ಲಿಸಿದ್ದರು. ಅದನ್ನು ಆಧರಿಸಿ ಬಾಣಸವಾಡಿ ಹಿರಿಯ ಉಪ ನೋಂದಣಾಧಿಕಾರಿ ಎಂ.ಕೆ.ಶಾಂತಮೂರ್ತಿ ಹಾಗೂ ಎಡಿಎಲ್‌ಆರ್‌ ಪಿ.ಎಸ್‌. ಕುಸುಮಲತ ಮತ್ತಿತರರ ವಿರುದ್ಧ ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು.

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.