ಭೂಸೇನಾ ನಿಗಮ ಕಾರ್ಯ ವೈಖರಿಗೆ ಅಸಮಾಧಾನ


Team Udayavani, Dec 14, 2019, 12:22 PM IST

bk-tdy-1

ಬಾಗಲಕೋಟೆ: ಪೂರ್ಣ ಪ್ರಮಾಣದ ಅನುದಾನ ನೀಡಿದರೂ ಕಾಮಗಾರಿ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವ ಭೂ ಸೇನಾ ನಿಗಮದ ಕಾರ್ಯ ವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ, ನಿಗಮದ ಉಪ ನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಎಸ್‌ ಸಿಪಿ, ಟಿಎಸ್‌ಪಿ ಕಾಮಗಾರಿ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾಮಟ್ಟದ ಜಾಗೃತಿ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾದಾಮಿ-ಮುಧೋಳದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಸಂಪೂರ್ಣ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯ ಜವಾಬ್ದಾರಿ ಪಡೆದ ಭೂ ಸೇನಾ ನಿಗಮ ಈವರೆಗೆ ಕಾಮಗಾರಿ ಕೈಗೊಂಡಿಲ್ಲ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನ ನವೆಂಬರ್‌ ಅಂತ್ಯಕ್ಕೆ ಉಳಿದ ಎಲ್ಲ ಸ್ಥಳೀಯ ಸಂಸ್ಥೆಗಿಂತ ಗುಳೇದಗುಡ್ಡ ಪುರಸಭೆ ಮಾತ್ರ ಅತೀ ಕಡಿಮೆ ಶೇ.40 ಮಾತ್ರ ಪ್ರಗತಿ ಸಾಧಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಕೂಡಲೇ ನಿಗದಿ ಅವಧಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು.

ಜಿಲ್ಲೆಯ ಎಲ್ಲ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಹುನಗುಂದದ ವಸತಿ ನಿಲಯಕ್ಕೆ ಕಾಂಪೌಂಡ್‌ ಇಲ್ಲ. ಹಾಸ್ಟೇಲ್‌ನಲ್ಲಿ ನೀರಿನ ತೊಟ್ಟಿ ಇದ್ದು, ಮಕ್ಕಳು ಬೀಳದಂತೆ ಕ್ರಮ ವಹಿಸಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಸ್ವತ್ಛತೆ ಕಾಪಾಡಲು ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಸಾಮರಸ್ಯ ಬೆಳೆಸಲು ಜಿಲ್ಲೆಯಾದ್ಯಂತ ವಿವಿಧೆಡೆ ಸಭೆ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ನವೆಂಬರ್‌ವರೆಗೆ ಒಟ್ಟು 33 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 32 ತನಿಖೆ ಹಂತದಲ್ಲಿವೆ ಎಂದರು. ಜಿಲ್ಲೆಯಲ್ಲಿ ಎಲ್ಲ ದೌರ್ಜನ್ಯ ಪ್ರಕರಣಗಳಲ್ಲಿ ಎಲ್ಲರಿಗೂ ಹಂತ ಹಂತವಾಗಿ ಪರಿಹಾರ ಕಳೆದೆರಡು ವರ್ಷಗಳಿಂದ ಆರ್‌ಟಿಜಿಎಸ್‌ ಮೂಲಕವೇ ನೇರವಾಗಿಅವರ ಬ್ಯಾಂಕ್‌ ಖಾತೆಗೆ ಜಮಾ   ಮಾಡಲಾಗುತ್ತಿದೆ. ಮದ್ಯವರ್ತಿಗಳ ಹಾವಳಿ ತಡೆಗೆ ಉತ್ತಮ ಕ್ರಮವಾಗಿದ್ದು, ಜೂನ್‌ದಿಂದ ಇಲ್ಲಿವರೆಗೆ ಒಟ್ಟು 29 ಪ್ರಕರಣಗಳಿಗೆ ಪರಿಹಾರಧನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಸಭೆಗೆ ತಿಳಿಸಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕೃಷಿ ಇಲಾಖೆ ಒಟ್ಟು ಶೇ.73.82, ತೋಟಗಾರಿಕೆ ಇಲಾಖೆ ಶೇ.87.23, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶೇ.85.51, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೇ.71.05, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶೇ.99.50, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶೇ.70.26, ಕೈಗಾರಿಕೆ ಇಲಾಖೆ ಶೇ.100, ಕಾರ್ಮಿಕ ಇಲಾಖೆ ಶೇ.73, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶೇ.91.32 ಪ್ರಗತಿ ಸಾಧಿಸಿವೆ. ಒಟ್ಟಾರೆ ವಿಶೇಷ ಘಟಕ ಯೋಜನೆಯಡಿ 59.50 ಕೋಟಿ ರೂ. ಹಾಗೂ ಗಿರಿಜನ ಉಪಯೋಜನೆಯಡಿ 58.68 ಕೋಟಿ ರೂ.ಖರ್ಚು ಮಾಡಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಾಗೃತಿ ಸಮಿತಿಯ ಸದಸ್ಯ ಎಂ.ಎಚ್‌. ಚಲವಾದಿ, ದುಂಡಪ್ಪ ಸಾವಳಗಿ, ಯಲ್ಲಪ್ಪ ಮೇತ್ರಿ, ಶಂಭುಗೌಡ ಪಾಟೀಲ, ಸುಭಾಸ ಗತ್ತಿ, ಎಸ್‌.ಎಸ್‌. ಗುಳೇದ ಮುಂತಾದವರಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.