ಮರುವಸತಿ ಕಲ್ಪಿಸಲು ಸರ್ಕಾರ ಬದ್ಧ
Team Udayavani, Dec 14, 2019, 2:02 PM IST
ಬ್ಯಾಡಗಿ: ಅತಿವೃಷ್ಟಿಯಿಂದ ರಾಜ್ಯದ ಜನರು ಕಂಗಾಲಾಗಿದ್ದು, ಮರುವಸತಿ ಕಲ್ಪಿಸಲು ಬದ್ಧವಾಗಿದ್ದೇವೆ. ಮುಂದಿನ ಮೂರುವರೆ ವರ್ಷಗಳ ಅವ ಧಿಯಲ್ಲಿ ಬಿಎಸ್‌ವೈ ನೇತೃತ್ವದ ಸರ್ಕಾರ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಯಡಲಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು.
ಪಟ್ಟಣದ ಜನಸಂಪರ್ಕ ಕಾರ್ಯಾಲಯದಲ್ಲಿ ದೀರ್ಘ ಕಾಲದಿಂದ ಅನಾರೋಗ್ಯ ಪೀಡಿತ ಫಲಾನುಭವಿ ಗಳ ಚಿಕಿತ್ಸೆಗಾಗಿ ಮುಖ್ಯ ಮಂತ್ರಿಗಳ ಪರಿಹಾರ ನಿ ಧಿಯಿಂದ ಬಿಡುಗಡೆಗೊಳಿಸಿದ ಅನುದಾನದ ಚೆಕ್ ವಿತರಿಸಿ ಅವರು ಮಾತನಾಡಿದರು.
ಬಡವರಿಗೂ ಆರೋಗ್ಯ ಹಾಗೂ ಚಿಕಿತ್ಸೆ ಬಹಳಷ್ಟು ದುಬಾರಿ ಎನಿಸುತ್ತಿದೆ ವೈದ್ಯಕೀಯ ವೆಚ್ಚಕ್ಕೆ ಹಣವಿಲ್ಲದೇ ಸಾಕಷ್ಟು ಜನರು ತಮ್ಮ ಜೀವಗಳನ್ನು ಕಳೆದುಕೊಂಡ ಉದಾಹರಣೆಗಳಿವೆ. ಅಂತಹವರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಲಿದ್ದು, ಯಾವುದೇ ಸಂಕೋಚಪಡದೇ ಮುಕ್ತವಾಗಿ ಬಂದು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ಅತ್ಯುತ್ತಮ ಆರೋಗ್ಯ ಕೇಂದ್ರಗಳಲ್ಲಿ ಹತ್ತನೇ ಸ್ಥಾನ ಪಡೆದಿದೆ. ವೈದ್ಯಕೀಯ ಸಿಬ್ಬಂದಿ ಕೂಡ ಸಾರ್ವಜನಿಕರ ಆರೋಗ್ಯಕ್ಕೆ ಸ್ಪಂದಿಸುತ್ತಿದೆ. ಮಧುಮೇಹ, ರಕ್ತದೊತ್ತಡ, ರಕ್ತತಪಾಸಣೆ ಸೇರಿದಂತೆ ಡಯಾಲಿಸಿಸ್ ಇನ್ನಿತರ ಹತ್ತು ಹಲವು ಸೌಲಭ್ಯಗಳು ಲಭ್ಯವಿದೆ. ಬಡವ ಶ್ರೀಮಂತರೆನ್ನದೇ ಎಲ್ಲರೂ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು. ತಹಶೀಲ್ದಾರ್ ಶರಣಮ್ಮ ಕಾರಿ, ಸುರೇಶ ಅಸಾದಿ, ಶಂಕ್ರಣ್ಣ ಮಾತನನವರ, ಶಿವರಾಜ್ ಅಂಗಡಿ, ಸಂಜೀವ ಮಡಿವಾಳರ, ಬಸವರಾಜ ಹಲಗೇರಿ, ಸಂತೋಷ ಮೂಲಿಮನಿ ವೀರೇಂದ್ರ ಶೆಟ್ಟರ, ವಿದ್ಯಾಶೆಟ್ಟಿ, ವಿಷ್ಣುಕಾಂತ್ ಬೆನ್ನೂರ, ಜಿತೇಂದ್ರ ಸುಣಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.