ಸಂಪನ್ಮೂಲ ಕ್ರೋಢೀಕರಣಕ್ಕೆ ಸೂಚನೆ

Team Udayavani, Dec 15, 2019, 3:05 AM IST

sampanmoola

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿರುವ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಸ್ಥಳೀಯ ಸಮುದಾಯ, ಸಂಘ ಸಂಸ್ಥೆಗಳ ಸಹಕಾರ ಮತ್ತು ಪಾಲ್ಗೊಳ್ಳುವಿಕೆಯ ಮೂಲಕ ಶಾಲಾ ಮೂಲಸೌಕರ್ಯ ಹೆಚ್ಚಿಸಿಕೊಳ್ಳಲು ಪ್ರಯತ್ನ ನಡೆಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಶಾಲೆಗಳಲ್ಲಿ ಕಡ್ಡಾಯವಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಮಾಡಬೇಕು ಮತ್ತು ಇಲಾಖೆ ಸೂಚಿಸಿರುವ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಪಾಲಿಸಬೇಕು. ಎಸ್‌ಡಿಎಂಸಿಗಳು ಸ್ಥಳೀಯ ಜನ ಪ್ರತಿನಿಧಿಗಳ, ಸಂಘ-ಸಂಸ್ಥೆ, ಹಳೇ ವಿದ್ಯಾರ್ಥಿಗಳು, ಉದ್ದಿಮೆದಾರರು, ಗಣ್ಯರ ಅನುಭವ ಮತ್ತು ಸೇವೆಗಳನ್ನು ಪರಿಣಾಮಕಾರಿ ಯಾಗಿ ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸೂಚಿಸಿದೆ.

ವರ್ಷಕ್ಕೆ ಎರಡು ಬಾರಿ ಎಸ್‌ಡಿಎಂಸಿಯಿಂದ ಸಮುದಾಯದ ಸಭೆ ಕರೆಯಬೇಕು. ಎಲ್ಲ ಸಮುದಾಯಗಳನ್ನು ಇದರಲ್ಲಿ ಭಾಗವಹಿಸುವಂತೆ ಮಾಡಬೇಕು. ಶಾಲೆ ಬೆಳೆದು ಬಂದ ಹಿನ್ನೆಲೆ, ವಿದ್ಯಾರ್ಥಿ-ಶಿಕ್ಷಕರ ಸಾಧನೆ, ಕಾರ್ಯಕ್ರಮಗಳ ಅನುಷ್ಠಾನದ ವಿವರನ್ನು ಸಭೆಗೆ ನೀಡಬೇಕು. ಶಾಲೆ ಹೊರಗುಳಿದ ಮಕ್ಕಳು, ಆಗಿಂದಾಗ್ಗೆ ಗೈರಾಗುವ ವಿದ್ಯಾರ್ಥಿಗಳ ಹಾಜರಾತಿ ವಿಶೇಷ ಕ್ರಮ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ, ಶಾಲಾ ಆಸ್ತಿ ರಕ್ಷಣೆ, ಬೋಧನೋಪಕರಣಗಳು, ತಂತ್ರಜ್ಞಾನದ ಬಳಕೆ, ಪೀಠೊಪಕರಣ, ಕೊಠಡಿಗಳ ಸುಸ್ಥಿತಿ ಇತ್ಯಾದಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ನಿರ್ದೇಶಿಸಿದೆ.

ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳಿಗೆ ಸರ್ಕಾರದ ಅನುದಾನದ ಜತೆಗೆ ಊರಿನ ದಾನಿಗಳು, ಗಣ್ಯರು, ಸಂಘ-ಸಂಸ್ಥೆಗಳು, ಕಂಪನಿ ಇತ್ಯಾದಿಗಳ ಮೂಲಕ ಸಂಪನ್ಮೂಲ ಕ್ರೋಢೀಕರಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಈ ಸಭೆಯಲ್ಲಿ ಡಿಡಿಪಿಐ, ಬಿಇಒ, ಬ್ಲಾಕ್‌ ಸಂಪನ್ಮೂಲ ಅಧಿಕಾರಿ, ಕ್ಲಸ್ಟರ್‌ ಸಂಪನ್ಮೂಲ ಅಧಿಕಾರಿಗಳಲ್ಲಿ ಒಬ್ಬರು ಕಡ್ಡಾಯವಾಗಿ ಹಾಜರಿರಬೇಕು. ಒಟ್ಟಿನಲ್ಲಿ ಎಸ್‌ಡಿಎಂಸಿಗಳು ಶಾಲೆಗಳ ಅಭಿವೃದ್ಧಿಗಾಗಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.