ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸಿಗೆ ಸತತ ಅಧ್ಯಯನ ಅಗತ್ಯ: ರುದ್ರಪ್ಪ
Team Udayavani, Dec 15, 2019, 2:22 PM IST
ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸತತ ಅಧ್ಯಯನ ಅಗತ್ಯ ಎಂದು ಎಸಿಪಿ ಎಂ.ಎನ್. ರುದ್ರಪ್ಪ ಹೇಳಿದರು.
ಕ್ಲಾಸಿಕ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆಯ ಕ್ಲಾಸಿಕ್ ಪದವಿ ಮಹಾವಿದ್ಯಾಲಯದಲ್ಲಿ ಬಿಎ, ಬಿಕಾಂ ಮತ್ತು ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಮೂಲಗಳಿಂದ ಜ್ಞಾನವನ್ನು ಸಂಗ್ರಹಿಸಿಕೊಳ್ಳಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಮಾನವಾಗಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಲಾಸಿಕ್ ಸಂಸ್ಥೆಯ ಮುಖ್ಯ ಆಡಳಿತಾತ್ಮಕ ಸಂಯೋಜಕ ಐ.ಜಿ. ಚೌಗಲಾ ಮಾತನಾಡಿ, ಮಾನವ ಸಂಪನ್ಮೂಲ ದೇಶಕ್ಕೆ ಬಹು ಮೌಲ್ಯಯುತವಾಗಿರುವುದರಿಂದ ಗುಣಮಟ್ಟದ ಸೇವಾ ವರ್ಗ ಆಡಳಿತಕ್ಕೆ ಅಗತ್ಯವಿದೆ. ವಿದ್ಯಾರ್ಥಿ ದಿಶೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಯುವ ಜನಾಂಗ ಪಡೆದುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಾಗಾರ ವಿದ್ಯಾರ್ಥಿಗಳಿಗೆ ಪೂರಕವಾಗಲಿದೆ ಎಂದು ಹೇಳಿದರು.
ಡಾ| ಆರ್.ವಿ. ಚಿಟಗುಪ್ಪಿ, ದೀಪಕ ಜೋಡಂಗಿ, ಕುಸುಮಾ ವೈ.ಎಸ್., ಪ್ರೊ| ಹೇಮಂತ ಕರ್ಜಗಿ ಇದ್ದರು. ಐಶ್ವರ್ಯ ದೊಡಮನಿ ಪ್ರಾರ್ಥಿಸಿದರು. ಡಾ| ಎಂ.ವೈ. ಸಾವಂತ ಸ್ವಾಗತಿಸಿದರು. ಬಸವರಾಜ ಕುಪ್ಪಸಗೌಡ್ರ ನಿರೂಪಿಸಿದರು. ಪ್ರೊ| ವಿ.ಎಂ. ಕಾಲಾಳದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.