ಹೆಸರಿಗಷ್ಟೇ ಶುದ್ಧ ಕುಡಿಯುವ ನೀರಿನ ಘಟಕ
Team Udayavani, Dec 15, 2019, 3:01 PM IST
ಸೈದಾಪುರ: ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಿ ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆ ಮಾಡಿದರೂ ಗ್ರಾಮಸ್ಥರಿಗೆ ಮಾತ್ರ ಶುದ್ಧ ನೀರು ದೊರಕುತ್ತಿಲ್ಲ.
ಸಮೀಪದ ಬೆಳಗುಂದಿ ಗ್ರಾಮದ ಹನುಮಾನ ದೇವಸ್ಥಾನ ಹತ್ತಿರದಲ್ಲಿ ಕುಡಿಯುವ ಶುದ್ಧ ನೀರಿನ ಘಟಕ ನಿರ್ಮಾಣ ಕಾಮಾಗಾರಿ ಪ್ರಾರಂಭವಾಗಿ ಸರಿ ಸುಮಾರು ಒಂದು ವರ್ಷ ಕಳೆದರೂ ವ್ಯವಸ್ಥಿತ ನಿರ್ಮಾಣವಾಗದೆ ಶುದ್ಧ ನೀರು ಜನತೆಗೆ ದೊರೆಯುತ್ತಿಲ್ಲ. ಪ್ರತಿ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸುತ್ತಿರುವ ಘಟಕಗಳು ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಳ್ಳ ಹಿಡಿಯುತ್ತಿದ್ದು, ಇಲ್ಲಿನ ಜನರಿಗೆ ಕುಡಿಯಲು ನಲ್ಲಿ ನೀರೆ ಗತಿಯಾಗಿದೆ.
ಇಷ್ಟಾದರು ಇಲ್ಲಿನ ಜನ ಪ್ರತಿನಿಧಿಗಳಗಾಲಿ, ಅಧಿಕಾರಿಗಳಾಗಲಿಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಇಲ್ಲಿನ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಜನತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.