ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Dec 15, 2019, 3:11 PM IST
ಕಂಪ್ಲಿ: ರಾಜ್ಯದಲ್ಲಿ ಬೇರೆ ಪಕ್ಷದ ಸರ್ಕಾರವಿದ್ದರೂ ಸಹಿತ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜೆ.ಎನ್.ಗಣೇಶ್ ತಿಳಿಸಿದರು.
ತಾಲೂಕಿನ ನೆಲ್ಲೂಡಿ ಗ್ರಾಪಂ ವ್ಯಾಪ್ತಿಯ ಶಾಂತಿನಗರದ ಎಸ್.ಟಿ. ಕಾಲೋನಿಯಲ್ಲಿ 2019-20ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸುಮಾರು 17.85 ಲಕ್ಷ ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಬಹುತೇಕ ಗ್ರಾಮಗಳ ಲೋಕೋಪಯೋಗಿ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಿಸುತ್ತಿದ್ದು, ಗುಣಮಟ್ಟದ ಸಿಸಿ ರಸ್ತೆಗಳನ್ನು ಮಾಡುವಲ್ಲಿ ಗುತ್ತಿಗೆದಾರರು ಜಾಗೃತಿ ವಹಿಸಬೇಕು. ಸಿಸಿ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಮೂಲ ಸೌಲಭ್ಯಗಳನ್ನು ಜನತೆಗೆ ಒದಗಿಸಲಾಗುತ್ತಿದೆ ಎಂದರು.
ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ, ತಾಪಂ ಸದಸ್ಯ ಓಬಳೇಶ್, ಗ್ರಾಪಂ ಅಧ್ಯಕ್ಷೆ ಜಡಿಯಮ್ಮ ಕರಿಬಸವನಗೌಡ ಹಾಗೂ ಮುಖಂಡರಾದ ಕೇಶವರೆಡ್ಡಿ, ರಂಗಪ್ಪ, ಜಿಲಾನ್‌ಸಾಬ್, ಮಾಬುಸಾಬ್,ಎ.ನಾಗರಾಜ, ಬುಜ್ಜಿ, ಶೇಖ್‌ಸಾಬ್, ಎ.ಎಸ್.ಮಂಜುನಾಥ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಶಾಸಕ ಜೆ.ಎನ್.ಗಣೇಶ್ ಅವರು ಶಾಂತಿನಗರದಲ್ಲಿ ಸಿಸಿ ರಸ್ತೆ ಭೂಮಿಪೂಜೆ ಸಲ್ಲಿಸಿದರು. ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡರೂ, ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಾರದೇ ಶಾಸಕರನ್ನು ನಿರ್ಲಕ್ಷಿಸುತ್ತಿದ್ದಾರೆ. ಪಿಡಿಒ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಜಡಿಯಮ್ಮ ಕರಿಬಸವನಗೌಡ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.