ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ
Team Udayavani, Dec 16, 2019, 3:00 AM IST
ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಆದಿಚುಂಚನಗಿರಿ ಶಾಖಾ ಮಠದ ಎದುರು ನೆಲೆಸಿರುವ ಶ್ರೀ ವೀರಾಂಜನೆಯಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಡಲೇ ಕಾಯಿ ಪರಿಷೆ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಭವ್ಯ ಪಲ್ಲಕ್ಕಿ ಮೆರವಣಿಗೆ: ಕಡಲೇ ಕಾಯಿ ಪರಿಷೆ ಪ್ರಯುಕ್ತ ಮೊದಲು ಜಡಲತಿಮ್ಮನಹಳ್ಳಿ ಗ್ರಾಮದಿಂದ ವೀರಾಂಜನೇಯ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮುತ್ತಿನ ಪಲ್ಲಕ್ಕಿಯೊಂದಿಗೆ ಬೆಂಗಳೂರು ರಸ್ತೆಯ ಮೂಲಕ ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ ಮತ್ತಿತರ ಸಾಂಸ್ಕೃತಿಕ ಕಲಾ ಮೇಳಗಳೊಂದಿಗೆ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಮುಂಭಾಗದಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದವರೆಗೂ ಶ್ರದ್ಧಾಭಕ್ತಿಯ ನಡುವೆ ಭವ್ಯ ಮೆರವಣಿಗೆ ನಡೆಸಲಾಯಿತು.
ರಥೋತ್ಸವಕ್ಕೆ ಶ್ರೀಗಳ ಚಾಲನೆ: ಈ ವೇಳೆ ಮುತ್ತಿನ ಪಲ್ಲಕ್ಕಿಯಲ್ಲಿ ತಂದಿದ್ದ ವೀರಾಂಜನೇಯಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಆದಿಚುಂಚನಗರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ವೇಳೆ ವೀರಾಂಜನೇಯಸ್ವಾಮಿ ಆಲಯ ಸುತ್ತ ರಥೋತ್ಸವ ಸಾಗಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ವೀರಾಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.
ಜಾತ್ರೆಯಲ್ಲಿ ಹರಿದ ಸಂಗೀತ ಸುಧೆ: ಕಡಲೇ ಕಾಯಿ ಜಾತ್ರೆ ಹಾಗೂ ವೀರಾಂಜನೇಯಸ್ವಾಮಿ ದೇವರ ಉತ್ಸವದ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಹಾಗೂ ಸಂಗೀತ ಗಾಯನ ಕಚೇರಿ ನಡೆಯಿತು. ಬಿಜಿಎಸ್ ಸಾಂಸ್ಕೃತಿಕ ಕಲಾ ವೇದಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕೀರ್ತಿನಾಥ ಸ್ವಾಮೀಜಿ ಮತ್ತು ತಂಡದವರಿಂದ ಹಾಗೂ ಸುನಾದ ಸುಗಮ ಸಂಗೀತ ಮತ್ತು ಕಲಾ ಸಂಸ್ಥೆ ಕಲಾವಿದರಿಂದ ವಿಶೇಷ ಗಾಯನ ಕಾರ್ಯಕ್ರಮ ಮೂಡಿ ಬಂತು.
ಕಡಲೇ ಕಾಯಿ ಪರಿಷೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಕಡಲೇ ಕಾಯಿ ಖರೀದಿ ಜೋರಾಗಿತ್ತು. ನೆರೆಯ ಆಂಧ್ರಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ವ್ಯಾಪಾರಸ್ಥರು ಕಡಲೇ ಕಾಯಿಗಳನ್ನು ಮಾರಾಟ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಕಡಲೇ ಕಾಯಿ ಪರಿಷೆಯಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಂದನಾಥ ಸ್ವಾಮೀಜಿ,
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಸ್ಥಳೀಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೇರಿದಂತೆ ಆದಿಚುಂಚನಗಿರಿ ಶಾಖಾ ಮಠದ ಕಿರಿಯ ಸ್ವಾಮೀಜಿಗಳು, ಮಠದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚಿಕ್ಕಬಳ್ಳಾಪುರ ನಂದಿ ಠಾಣೆ ಪಿಎಸ್‌ಐ ಓಂಪ್ರಕಾಶಗೌಡ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ವೀರಾಂಜನೇಯನಿಗೆ ತಂಬಿಟ್ಟಿನ ದೀಪೋತ್ಸವ: ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ಪ್ರಯುಕ್ತ ಜಡಲತಿಮ್ಮನಹಳ್ಳಿ, ತುಮ್ಮಕಲಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಂಗಲಿಯರಿಂದ ನಡೆದ ತಂಬಿಟ್ಟಿನ ದೀಪೋತ್ಸವ ವೀರಾಂಜನೇಯಸ್ವಾಮಿ ಕಡಲೇ ಕಾಯಿ ಜಾತ್ರೆಗೆ ವಿಶೇಷ ಕಳೆ ತಂದು ಕೊಟ್ಟಿತು. ಜಾತ್ರೆ ಪ್ರಯುಕ್ತ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ಮರಿಯಪ್ಪ ರಾಮಯ್ಯ ಚಾರಿಟಬಲ್ ಟ್ರಸ್ಟ್ ಹಾಗೂ ಜಡಲತಿಮ್ಮನಹಳ್ಳಿ ಹಾಗೂ ತುಮಕಲ್ಲಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರಿಂದ ಪಾನಕ ವಿತರಿಸಲಾಯಿತು.
ಈ ವೇಳೆ ಚುಂಚಶ್ರೀ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಖುದ್ದು ಕಡಲೇ ಕಾಯಿ ವಿತರಿಸಿ ಪರಿಷೆಗೆ ವಿಶೇಷ ಮೆರಗು ನೀಡಿದರು. ಶ್ರೀಗಳು ಜನರ ಬಳಿಗೆ ಎಸೆಯುತ್ತಿದ್ದ ಕಳ್ಳೇಕಾಯಿ ಪಡೆಯಲು ತಾ ಮುಂದು ನಾ ಮುಂದು ಎಂದು ಪರಿಷೆಯಲ್ಲಿ ಜನರ ನೂಕುನುಗ್ಗಲು ಏರ್ಪಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.