ಸಂಸತ್‌ಗೆ ಅನುಭವ ಮಂಟಪ : ಬಜೆಟ್ ಅಧಿವೇಶನ ವೇಳೆ ಅನಾವರಣ
Team Udayavani, Dec 16, 2019, 6:15 AM IST
ಕಲಬುರಗಿ: ವಿಶ್ವದಲ್ಲಿಯೇ ಮೊದಲ ಬಾರಿ, ಹನ್ನೆರಡನೇ ಶತಮಾನದಲ್ಲಿ ನಡೆದ ಬಸವಾದಿ ಶರಣರ ಅನುಭವ ಮಂಟಪದ ಕಲಾಕೃತಿ ಸಂಸತ್‌ನಲ್ಲಿ ಬಜೆಟ್ ಅಧಿವೇಶನ ಇಲ್ಲವೆ ಅದಕ್ಕೂ ಮುನ್ನ ಅಳವಡಿಕೆಯಾಗಲಿದೆ. ಈ ಕಲಾಕೃತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಆಗಲಿದೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಂಸತ್ ಆವರಣದೊಳಗೆ ಅನುಭವ ಮಂಟಪ ಕಲಾಕೃತಿ ಅಳವಡಿಕೆಗೆ ಅನುಮತಿ ನೀಡಿದ್ದು, ಸದ್ಯದಲ್ಲೇ ಅಳವಡಿಕೆಗೆ ದಿನಾಂಕ ಗೊತ್ತುಪಡಿಸುವುದಾಗಿ ತಿಳಿಸಿದ್ದಾರೆ. ನಾಡೋಜ ಪುರಸ್ಕೃತ, ರೂಪಧರ್ ಪ್ರಶಸ್ತಿ ವಿಜೇತ ಕಲಬುರಗಿಯ ಡಾ| ಜೆ.ಎಸ್. ಖಂಡೇರಾವ್ 2 ವರ್ಷಗಳಿಂದ ಈ ಕಲಾಕೃತಿ ರಚಿಸುತ್ತಿದ್ದಾರೆ. 12ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ಅಲ್ಲಮ ಪ್ರಭು ಅಧ್ಯಕ್ಷತೆಯಲ್ಲಿ ನಡೆದ ಬಸವಾದಿ ಶರಣರ ಅಧಿವೇಶನ ಅಂದರೆ ಅನುಭವ ಮಂಟಪ ದೃಶ್ಯ ಕಣ್ಣೆದುರಿಗೆ ಬರುವ ರೀತಿಯಲ್ಲಿ ಕಲಾಕೃತಿ ರೂಪುಗೊಂಡಿದೆ. ವಿವಿಧ ಸಾಮಾಜಿಕ ಸ್ತರಗಳಿಂದ ಬಂದ ಕಾಯಕ ಜೀವಿ ಶರಣರ ಪ್ರತಿನಿಧಿಗಳಾದ 770 ಅಮರಗಣಂಗಳು ಅನುಭವ ಮಂಟಪದಲ್ಲಿ ಸೇರಿ ಜೀವನ ದರ್ಶನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುತ್ತಿದ್ದ, ಶರಣ- ಶರಣೆಯರೆಲ್ಲರೂ ಪಾಲ್ಗೊಂಡ ಅಪರೂಪದ ದೃಶ್ಯವನ್ನು ಖಂಡೇರಾವ್ ಕಲಾಕುಂಚದಲ್ಲಿ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.