![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 16, 2019, 11:13 AM IST
ನವದೆಹಲಿ: ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಸೋಮವಾರ ಖಡಕ್ ಸಂದೇಶ ರವಾನಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶ ಅಲಿಗಢ್ ಮುಸ್ಲಿಮ್ ಯೂನಿರ್ವಸಿಟಿ ಮತ್ತು ದಿಲ್ಲಿಯ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕ್ರಮದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೊದಲು ಹಿಂಸಾಚಾರ ನಿಲ್ಲಿಸಿ ಎಂದು ಸೂಚನೆ ನೀಡಿರುವ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆಸುವುದಾಗಿ ಹೇಳಿದೆ. ಹಿಂಸಾಚಾರ ನಿಲ್ಲಿಸಲು ನಾವು ಏನು ಮಾಡಬೇಕು. ಹಿಂಸಾಚಾರದಿಂದ ಏನೆಲ್ಲಾ ಸಂಭವಿಸಲಿದೆ ಎಂಬ ಬಗ್ಗೆ ಸಾಕಷ್ಟು ಅನುಭವಗಳು ಆಗಿವೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಯಾವ ನಿರ್ಧಾರವೂ ಕೈಗೊಳ್ಳುವುದಿಲ್ಲ. ಮೊದಲು ಹಿಂಸಾಚಾರ ನಿಲ್ಲಿಸಿ ಎಂದು ಸಿಜೆಐ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.