ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ನಾಟಿ ಜೋರು
Team Udayavani, Dec 16, 2019, 12:33 PM IST
ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ: ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಎರಡನೇ ಬೆಳೆಗೂ ಬಸವಸಾಗರ ಜಲಾಶಯದಿಂದ ನೀರು ದೊರಕಿದ್ದರಿಂದ ಇದೀಗ ಭತ್ತ ನಾಟಿ ಚಟುವಟಿಕೆ ಜೋರಾಗಿದೆ. ಎಡದಂಡೆ ಮುಖ್ಯ ಕಾಲುವೆಗೆ ವಾರಬಂದಿ ಪದ್ಧತಿ ಮೂಲಕ ನೀರು ಹರಿಸುವ ಕುರಿತುನೀರಾವರಿ ಸಲಹಾ ಸಮಿತಿ ನಿರ್ಣಯಿಸಿದ್ದರಿಂದ ಹಿಂಗಾರು ಭತ್ತದ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗಿದೆ. ಹೀಗಾಗಿ ಎರಡನೇ ಬೆಳೆಯೂ ರೈತರಿಗೆ ಈ ಭಾರಿ ಕೈಹಿಡಿಯಲಿದೆ ಎಂದು ಪ್ರದೇಶದ ರೈತ ನಂದಣ್ಣ ವಾರಿ ಹೇಳುತ್ತಾರೆ.
ಸುರಪುರ ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 54,758 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಆದರೆ ಹಿಂಗಾರು ಹಂಗಾಮಿನಲ್ಲಿ ಭತ್ತ ನಾಟಿ ಕ್ಷೀಣಿಸಲಿದೆ. ಕೊನೆ ಭಾಗಕ್ಕೆ ಸಮರ್ಪಕ ನೀರು ಸಿಗುವುದು ಎಂಬ ಕಾರಣದಿಂದ ಕೆಲ ರೈತರು ಭತ್ತ ನಾಟಿಗೆ ಆಸಕ್ತಿ ತೋರಿಲ್ಲ ಎನ್ನಲಾಗಿದೆ.
ರೈತರು ಮುಂಗಾರು ಹಂಗಾಮಿನಲ್ಲಿ ಎಕರೆಗೆ 40-45 ಚೀಲ ಭತ್ತ ಇಳುವರಿ ಪಡೆದಿದ್ದಾರೆ. ಸರಕಾರ ಪ್ರತಿ ಕ್ವಿಂಟಲ್ ಭತ್ತಕ್ಕೆ ಬೆಂಬಲ ಬೆಲೆ ಸೇರಿ 1815, 1830 ರೂ. ದರದಲ್ಲಿ ಖರೀದಿಸುವಂತೆ ಆದೇಶಿಸಿದೆ. ಹೀಗಾಗಿ ಎಲ್ಲವೂ ದುಬಾರಿಯಾಗಿದೆ. ಸರಕಾರ ಘೋಷಿಸಿರುವ ಬೆಂಬಲ ಬೆಲೆ ತೀರಾ ಕಡಿಮೆಯಾಗುತ್ತದೆ. ಇದರಿಂದ ರೈತರು ಖರ್ಚು ಮಾಡಿದಕ್ಕೆ ಸಾಲುವುದಿಲ್ಲ. ಹೀಗಾಗಿ ಬೆಂಬಲ ಬೆಲೆ ಸೇರಿ ಪ್ರತಿ ಕ್ವಿಂಟಲ್ ಭತ್ತಕ್ಕೆ 3000ರಿಂದ 5000 ರೂ. ವರೆಗೂ ದರ ನೀಡಿದರೆ ಮಾತ್ರ ರೈತರಿಗೆ ಒಂದಿಷ್ಟು ಜೀವನ ಸುಧಾರಿಸಬಹುದು ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.
4.50 ಲಕ್ಷ ಹೆಕ್ಟೇರ್‌ಕ್ಕೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಬಸವಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಪ್ರಾಣಿ ಸಂಕುಲಕ್ಕೆ ಜೀವನಾಡಿಯಾಗಿದೆ. ಹಿಂಗಾರು ನಾಟಿಗಾಗಿ ರೈತರು ತಿಂಗಳ ಹಿಂದೆಯೇ ಭತ್ತದ ಮಡಿ ಹಾಕಿದ್ದರು. ರೈತರು ಈಗ ಕೂಲಿಕಾರ್ಮಿಕರನ್ನು ಬಳಸಿಕೊಂಡು ಭತ್ತ ನಾಟಿಯಲ್ಲಿ ತೊಡಗಿದ್ದಾರೆ. ಜತೆಗೆ ಕೂಲಿಕಾರ್ಮಿಕ ಬೇಡಿಕೆಯೂ ಹೆಚ್ಚಾಗಿದೆ. ಆಂಧ್ರದ ಗುಂತಕಲ್ ಹಾಗೂ ಅಚ್ಚುಕಟ್ಟು ಪ್ರದೇಶ ಕಾರ್ಮಿಕರನ್ನು ಕೃಷಿಗಾಗಿ ಬಳಸಿಕೊಳ್ಳಲಾಗುತ್ತದೆ.
ಭತ್ತ ನಾಟಿ ಮಾಡಲು ಕೂಲಿ ಕಾರ್ಮಿಕರಿಗೆ ಎಕರೆಗೆ 2000ದಿಂದ 2500 ರೂ. ಕೂಲಿ ಸಿಗುತ್ತದೆ. ಅಲ್ಲದೆ ಭತ್ತ ನಾಟಿ ಮಾಡಿದ ನಂತರ ದೀರ್ಘ ಕಾಲ ಕೂಲಿ ದೊರೆಯಲಿದೆ. ಮಹಿಳೆಯರಿಗೆ ಪ್ರತಿ ದಿನಕ್ಕೆ 150 ರೂ. ಹಾಗೂ ಪುರುಷರಿಗೆ 300 ರೂ. ಕೂಲಿ ಸಿಗಲಿದೆ. ಹೀಗಾಗಿ ಈ ಪ್ರದೇಶದ ರೈತರಿಗೆ ಮತ್ತು ಕಾರ್ಮಿಕರಿಗೆ ಭತ್ತ ವ್ಯವಸಾಯ ಬದುಕಿಗೆ ಆಸರೆಯಾಗಿದೆ ಎನ್ನಬಹುದು.
ವಾರ ಬಂದಿ ಪ್ರಕಾರವೇ ರವಿವಾರ 15ರಂದು ಕಾಲುವೆಗೆ ನೀರು ಸ್ಥಗಿತಗೊಳಿಸಲಾಗಿದೆ. ಎಂಟು ದಿನ ಬಂದ್ ಮಾಡಿ ನಂತರ ಡಿ. 23ರಂದು ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತದೆ.
.ಎಸ್. ರಂಗರಾಮ,
ಅಧೀಕ್ಷಕ ಇಂಜಿನಿಯರ್,
ಬಸವಸಾಗರ ಅಣೆಕಟ್ಟು ವಿಭಾಗ ನಾರಾಯಣಪುರ
ಸರಕಾರ ಬೆಂಬಲ ಬೆಲೆ ಘೋಷಿಸುವುದರಿಂದ ರೈತರು ಸುಧಾರಿಸುವುದಿಲ್ಲ. ಒಕ್ಕಲುತನ ಉಳಿಯಲ್ಲ. ರೈತನ ಜೀವನ ಸುಧಾರಣೆಯಾಗಬೇಕಾದರೆ ಸರ್ಕಾರ ಡಾ| ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡಬೇಕು.
.ಮಲ್ಲಿಕಾರ್ಜುನ ಸತ್ಯಂಪೇಟ ಕ.ರಾ. ರೈತ
ಸಂಘ(ಹಸಿರು ಸೇನೆ) ರಾಜ್ಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.