ಮುಂಡಗೋಡ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ಕೊರತೆ
Team Udayavani, Dec 16, 2019, 4:14 PM IST
ಮುಂಡಗೋಡ: ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂಬತ್ತನೇ ತರಗತಿಯ ನೂರಾರು ವಿದ್ಯಾರ್ಥಿಗಳಿಗೆ ಇನ್ನೂವರೆಗೆ ಸರಕಾರದ ಪುಸ್ತಕ ಸಿಕ್ಕಿಲ್ಲ.
ಮುಂಡಗೋಡ ಸರಕಾರಿ ಪ್ರೌಢಶಾಲೆ ತಾಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಬಡ ಕುಟುಂಬಗಳ ಮಕ್ಕಳೇ ಈ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದಾರೆ. ಕಡಿಮೆ ಬಂದ ಪುಸ್ತಕ: ಕಳೆದ ವರ್ಷ ಈ ಶಾಲೆಯಲ್ಲಿ ಎಂಟನೆ ತರಗತಿಗೆ 130 ವಿದ್ಯಾರ್ಥಿಗಳು ಓದುತ್ತಿದ್ದರು. ಆದರೆ ಈ ವರ್ಷ ಒಂಬತ್ತನೇ ತರಗತಿಯಲ್ಲಿ 302 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಿಕ್ಷಣ ಇಲಾಖೆಯವರು ಕಳೆದ ವರ್ಷದ ಮಕ್ಕಳ ಸಂಖ್ಯಾಧಾರದ ಮೇಲೆ ಕೇವಲ 130 ಪುಸ್ತಕಗಳನ್ನು ಮಾತ್ರ ನೀಡಿದ್ದಾರೆ. ಎಲ್ಲ ವಿಷಯಗಳ ಪುಸ್ತಕಗಳು ಕೇವಲ 130 ಬಂದಿದ್ದು, ಶಾಲೆಯವರು ಬಾಲಕಿಯರಿಗೆ ಪುಸ್ತಕಗಳನ್ನು ನೀಡಿದ್ದು, ಬಾಲಕರು ಮಾತ್ರ ಪುಸ್ತಕವಿಲ್ಲದೆ ಪರದಾಡುತ್ತಿದ್ದಾರೆ. ವಿಜ್ಞಾನ ಹಾಗೂ ಗಣಿತ ವಿಷಯದ ಪಾಠಗಳನ್ನು ಓದಲಂತು ವಿದ್ಯಾರ್ಥಿಗಳು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.
ವಿದ್ಯಾರ್ಥಿಗಳು ಬೇರೆ ಶಾಲೆಯಲ್ಲಿ ಓದುವ ತಮ್ಮ ಸ್ನೇಹಿತರ ಮನೆಗೆ ಹೋಗಿ ಪಾಠ ಓದಿಕೊಳ್ಳುತ್ತಿದ್ದಾರೆ. ಕೆಲವರು ಹಳೆಯ ವಿದ್ಯಾರ್ಥಿಗಳಿಂದ ಹಳೆಯ ಪುಸ್ತಕ ಪಡೆದುಕೊಂಡು ಓದುತ್ತಿದ್ದಾರೆ. ಇದೀಗ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಮುಂದಿನ ಮೂರು ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತದೆ. ಪುಸ್ತಕಗಳಿಲ್ಲದ 172 ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬುದನ್ನು ಶಿಕ್ಷಣ ಇಲಾಖೆ ಅಧಿಕಾರಿಗಳೇ ಉತ್ತರಿಸಬೇಕಿದೆ. ಪ್ರತಿ ವಿಷಯದ 172 ಪುಸ್ತಕಗಳು ಅವಶ್ಯವಿದೆ.
ಶಿಕ್ಷಣ ಇಲಾಖೆಯವರು ಕಳೆದ ವರ್ಷದ ಮಕ್ಕಳ ಸಂಖ್ಯಾಧಾರದ ಮೇಲೆ 130 ವಿದ್ಯಾರ್ಥಿಗಳಿಗೆ ಪುಸ್ತಕ ನೀಡಿದ್ದಾರೆ. ಶಾಲೆಯ
9ನೇ ತರಗತಿಯಲ್ಲಿ 302 ವಿದ್ಯಾರ್ಥಿಗಳಿದ್ದು, 172 ವಿದ್ಯಾರ್ಥಿಗಳಿಗೆ ಪುಸ್ತಕಗಳ ಕೊರತೆಯಾಗಿದೆ. -ಕೆ.ಟಿ. ಶೆಟ್ಟರ್, ಮುಖ್ಯಾಧ್ಯಾಪಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.