ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರವೂ ಮುಖ್ಯ: ಶೆಟಕಾರ್‌


Team Udayavani, Dec 16, 2019, 4:29 PM IST

16-December-22

ಬೀದರ: ವಿದ್ಯಾರ್ಥಿಗಳ ಕಲಿಕಾ ಅಭಿವ್ಯಕ್ತಿ ಹೆಚ್ಚಿಸುವಲ್ಲಿ ಶಿಕ್ಷಕರ ಜತೆಗೆ ಪಾಲಕರ ಪಾತ್ರವೂ ಬಹು ಮುಖ್ಯವಾಗಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ವಿದ್ಯಾ ಸರಸ್ವತಿ ಶಿಕ್ಷಣ ಸಂಸ್ಥೆ ಟ್ರಸ್ಟಿ ಸೂರ್ಯಕಾಂತ ಶೆಟಕಾರ್‌ ಸಲಹೆ ನೀಡಿದರು.

ಇಲ್ಲಿನ ಶಿವನಗರದ ಪ್ಯೂಚರ್‌ ಕಿಡ್ಸ್‌ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಡಾನ್‌ (ವಾರ್ಷಿಕೋತ್ಸವ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಎಲ್ಲವೂ ಶಿಕ್ಷಕರದ್ದೇ ಜವಾಬ್ದಾರಿ ಎಂಬ ಮನೋಭಾವದಿಂದ ಪಾಲಕರು ಹೊರಬರಬೇಕು. ಮಕ್ಕಳ ಶಿಕ್ಷಣ ಮತ್ತು ಬೆಳವಣಿಗೆ ಕುರಿತು ಕಾಳಜಿ ವಹಿಸಿಬೇಕು. ಆಗಾಗ ಶಾಲೆಗೆ ಸಂಪರ್ಕಿಸಿ ತಿಳಿದುಕೊಳ್ಳಬೇಕು. ಆಗ ಮಾತ್ರ ಮಕ್ಕಳ ಬೆಳವಣಿಗೆ ಸರಿಯಾಗಿ ಆಗಿ, ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಿವೃತ್ತ ಬ್ಯಾಂಕ್‌ ವ್ಯವಸ್ಥಾಪಕ ಚಂದ್ರಕಾಂತ ಶೆಟಕಾರ ಮಾತನಾಡಿ, ಮಕ್ಕಳ ಶಿಕ್ಷಣದ ಜತೆಗೆ ಬೆಳವಣಿಗೆಯ ಎಲ್ಲ ಜವಾಬ್ದಾರಿಯನ್ನು ಶಾಲೆಯವರ ಮೇಲೆ ಹಾಕುತ್ತಿರುವುದು ತಪ್ಪು. ಚಿಣ್ಣರಿಂದ ಮೊಬೈಲ್‌ ಬಳಕೆ ಹೆಚ್ಚುತ್ತಿರುವುದು ಆಘಾತಕಾರಿ ವಿಷಯವಾಗಿದ್ದು, ಇದಕ್ಕೆ ಕಡಿವಾಣ ಬೀಳಬೇಕು. ತಾಯಿಯಂತೆ ಮಕ್ಕಳು ಅನುಕರಣೆ ಮಾಡುತ್ತವೆ. ಹಿರಿಯರಾದ ನಾವು ಮೊಬೈಲ್‌ ಬಿಟ್ಟು ಪುಸ್ತಕ ಓದುತ್ತ ಕುಳಿತರೆ, ಅವರು ಸಹ ಅದನ್ನೇ ಮಾಡುತ್ತಾರೆ. ಅಭ್ಯಾಸ ಎನ್ನುವುದು ನಮ್ಮ ಮನೆಗಳಿಂದಲೇ ಬೆಳೆಯಬೇಕಿದೆ ಎಂದು ಕಿವಿ ಮಾತು ಹೇಳಿದರು.

ಶಾಲೆಯ ಪ್ರಾಚಾರ್ಯ ಚಿತ್ರಾ ಶೆಟಕಾರ ಮಾತನಾಡಿ, ಫ್ಯೂಚರ್‌ ಕಿಡ್ಸ್‌ ಇಂದು ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ. ಕೇವಲ 4 ಮಕ್ಕಳಿಂದ ಆರಂಭವಾದ ಶಾಲೆಯಲ್ಲಿ ನೂರಾರು ಮಕ್ಕಳು ಅಭ್ಯಾಸ ಮಾಡುತ್ತಿದ್ದು, ಒಟ್ಟು 3 ಶಾಖೆಗಳನ್ನು ಮುನ್ನಡೆಸಲಾಗುತ್ತಿದೆ. ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಶ್ರಮ ಮತ್ತು ಪಾಲಕರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

ಇನ್ನೋರ್ವ ಟ್ರಸ್ಟಿ ಕುಲದೀಪ್‌ಸಿಂಗ್‌ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಸಂದೀಪ ಶೆಟಕಾರ ಮತ್ತಿತರರು ವೇದಿಕೆಯಲ್ಲಿದ್ದರು. ನಂತರ ಶಾಲಾ ಮಕ್ಕಳಿಂದ ಉಡಾನ್‌ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಅತ್ಯಾಕರ್ಷಕ ವೇದಿಕೆಯಲ್ಲಿ ಫ್ಯೂಜನ್‌ ನೃತ್ಯ ಮೂಲಕ ಆರಂಭವಾದ ಸಾಂಸ್ಕೃತಿಕ ಸಮಾರಂಭದಲ್ಲಿ ಚಿಣ್ಣರ ನೃತ್ಯ ಜನರನ್ನು ಆಕರ್ಷಿಸಿತು.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.