ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರದಿಂದ ಅಗತ್ಯ ಕ್ರಮ: ಡಾ. ಸಿಎನ್‌ ಅಶ್ವತ್ಥನಾರಾಯಣ


Team Udayavani, Dec 16, 2019, 5:37 PM IST

ashwath-narayan

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ನಮ್ಮ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಪರಿಣಾಮಕಾರಿ ಪರಿಹಾರ ಒದಗಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿಎನ್‌ ಅಶ್ವತ್ಥನಾರಾಯಣ ಹೇಳಿದ್ದಾರೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬೆಂಗಳೂರಿನಲ್ಲಿ ನಡೆಸುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಸಚಿವರು, ಅಹವಾಲು ಸ್ವೀಕರಿಸಿ ಮಾತನಾಡಿದರು.

“ಡಾ. ಸರೋಜಿನಿ ಮಹಿಷಿ ಆಯೋಗದ ವರದಿಯಂತೆ ಸಿ ಮತ್ತು ಡಿ ದರ್ಜೆಯಲ್ಲಿ ಕನ್ನಡಿಗರಿಗೆ 80% ಉದ್ಯೋಗ ಮೀಸಲು ಕಡ್ಡಾಯ. ಆದರೆ, ಎ ಮತ್ತು ಬಿ ದರ್ಜೆಯಲ್ಲಿ ಇದನ್ನು ಕಡ್ಡಾಯ ಮಾಡುವುದು ಸವಾಲಿನ ವಿಷಯ. ಆದರೆ, ನಾಡಿನ ಜನರಿಗೆ ಉದ್ಯೋಗ ದೊರೆತು, ಬದುಕು ಕಟ್ಟಿಕೊಳ್ಳಲೇ ಬೇಕು.

ಪ್ರತಿ ಕುಟುಂಬಕ್ಕೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದ್ದು ಇದಕ್ಕೆ ನಾವು ಬದ್ಧ,”ಎಂದರು.

“ಬದಲಾಗುತ್ತಿರುವ ವಾತಾವಾರಣದಲ್ಲಿ ನಾಡಿನ ಆರ್ಥಿಕತೆಗೆ ಶಕ್ತಿ ತುಂಬಿ, ಉದ್ಯೋಗ ಸೃಷ್ಟಿ ಮಾಡುವುದು ಸರ್ಕಾರದ ಉದ್ದೇಶ. ವ್ಯಾಪಾರ, ವ್ಯವಹಾರದಲ್ಲೂ ಸಾಕಷ್ಟು ಬದಲಾವಣೆಗಳು ಆಗಿವೆ. ಜಾಗತಿಕರಣ ಹಾಗೂ ಆರ್ಥಿಕ ಹಿಂಜರಿತ ಮುಂತಾದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕಂಡುಕೊಳ್ಳಲು ಸಜ್ಜಾಗಿದ್ದೇವೆ,”ಎಂದು ಅವರು ಹೇಳಿದರು.

“ಉನ್ನತ ಶಿಕ್ಷಣ ಸಚಿವನಾಗಿ, ಜನಪ್ರತಿನಿಧಿಯಾಗಿ ಮುಖ್ಯವಾಗಿ ಕನ್ನಡಿಗನಾಗಿ ಭುವನೇಶ್ವರಿ ತಾಯಿಯ ಮಕ್ಕಳಿಗೆ ಒಳ್ಳೆಯ ಸ್ಥಾನಮಾನ ಕೊಡಿಸುವ ಅವಕಾಶ ಒದಗಿದೆ. ನಮ್ಮ ಜನರಿಗೆ ಸಲ್ಲಬೇಕಾದ್ದನ್ನು ಕೊಡಿಸಲು ಬದ್ಧ. ಈ ಸಮಸ್ಯೆ ಬಗೆಹರಿಸಲು ಪರಿಣಾಮಕಾರಿ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುವುದು,”ಎಂದು ಭರವಸೆ ನೀಡಿದರು.

ಪರಿಹಾರ ಕ್ರಮ:
“ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹೆಚ್ಚಿಸಲು ಎಲ್ಲ ಏಜೆನ್ಸಿಗಳನ್ನು ಒಂದೇ ವೇದಿಕೆಗೆ ತಂದು ಏಕ ಗವಾಕ್ಷಿ ಯೋಜನೆಯಡಿ ಉದ್ಯೋಗ ಕೌಶಲ್ಯ ಕಲಿಸಲು ಸರ್ಕಾರ ಕಾರ್ಯ ಪ್ರವೃತ್ತವಾಗಿದೆ. ಈ ಮೂಲಕ ಉದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ದಾರಿಯಲ್ಲಿ ಶಿಕ್ಷಣ ಸಂಸ್ಥೆಗಳು ಸಹ ವಿದ್ಯಾರ್ಥಿಗಳಿಗೆ ಅವರ ಮುಂದಿನ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ಕಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿ , ಯಾವ ರೀತಿಯ ಉದ್ಯೋಗ ಇದೆ ಎಂಬುದೇ ಗೊತ್ತಾಗುತ್ತಿರಲಿಲ್ಲ. ಹಾಗಾಗಿ ಈ ವೇದಿಕೆಯನ್ನು ತರಲಾಗಿದೆ,” ಎಂದರು.

“ಉದ್ಯೋಗಕ್ಕೆ ಬೇಕಿರುವ ಎಲ್ಲ ಕೌಶಲ್ಯವನ್ನು ಕಲಿಕೆ ವೇಳೆಯಲ್ಲೇ ಕಲಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗುತ್ತಿವೆ. ವಿದ್ಯಾಭ್ಯಾಸದ ವೇಳೆಯಲ್ಲೇ ಪ್ರಾಜೆಕ್ಟ್‌, ಇಂಟರ್ನ್‌ಶಿಪ್,‌ ಅಪ್ರೆಂಟಿಶಿಪ್‌ ಮಾಡಲು ಅವಕಾಶ ಮಾಡಿಕೊಲಾಗುತ್ತದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಂಪನಿಗಳ ಜತೆ ಸಂಬಂಧ ಬೆಸೆಯಲಾಗುತ್ತಿದೆ. ಓದು ಮುಗಿದ ನಂತರ ಕೆಲಸ ಹುಡುಕುವ ಬದಲಿಗೆ ಕಲಿಕೆ ವೇಳೆಯಲ್ಲಿ ಉದ್ಯೋಗಾವಕಾಶ ಪಡೆಯಬಹುದು,”ಎಂದು ವಿವರಿಸಿದರು.

“ಎಲ್ಲಿಂದಲೋ ಬಂದವರು ಇಲ್ಲಿ ಕೆಲಸ ಗಿಟ್ಟಿಸಿಕಳ್ಳುತ್ತಿರುವ ಸಂದರ್ಭದಲ್ಲಿ ಇಲ್ಲಿಯವರು ಇಲ್ಲಿನ ಕಂಪನಿಗಳ ಜತೆ ಸಂಪರ್ಕ ಬೆಳೆಸಿಕೊಳ್ಳಲು ಪೂರಕ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಪರ್ಕದ ಕೊರತೆಯ ಸಣ್ಣ ಸಮಸ್ಯೆಯೇ ದೊಡ್ಡ ಸಮಸ್ಯೆ ಆಗಿ ಕಾಡುತ್ತಿತ್ತು. ಈಗ ಅದಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ಓದುವ ಸಂದರ್ಭದಲ್ಲೇ ಉದ್ಯೋಗಾವಕಾಶದ ಮಾಹಿತಿ ಮತ್ತು ಅಗತ್ಯ ತರಬೇತಿ ಮತ್ತು ವೃತ್ತಿ ಪರ ಅವಕಾಶ ಸೃಷ್ಟಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ,”ಎಂದು ತಿಳಿಸಿದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.