ಸರ್ಕಾರ ವಜಾಗೊಳಿಸಿ ನೋಡುವ-ಪೌರತ್ವ ಕಾಯ್ದೆಗೆ ಅವಕಾಶವಿಲ್ಲ: ಕೇಂದ್ರಕ್ಕೆ ಮಮತಾ ಸವಾಲು
ನಾನು ಯಾವುದೇ ಕಾರಣಕ್ಕೂ ಬಂಗಾಳದಲ್ಲಿ ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ
Team Udayavani, Dec 16, 2019, 5:49 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸೋಮವಾರ ಕೋಲ್ಕತಾದಲ್ಲಿ ಬೃಹತ್ ರಾಲಿ ನಡೆಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲ್ಲ, ಸಾಧ್ಯವಾದರೆ ನನ್ನ ಸರ್ಕಾರವನ್ನು ಕೇಂದ್ರ ಸರ್ಕಾರ ವಜಾಗೊಳಿಸಲಿ ಎಂದು ಸವಾಲು ಹಾಕಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಟಿಎಂಸಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಕಾಲ್ನಡಿ ಜಾಥಾದ ಮೂಲಕ ಪ್ರತಿಭಟನೆ ನಡೆಸಿದರು.
“ಒಂದು ವೇಳೆ ನಿಮಗೆ (ಕೇಂದ್ರ) ನನ್ನ ಸರ್ಕಾರ ವಜಾಗೊಳಿಸಬೇಕೆಂದಿದ್ದರೆ ಹಾಗೇ ಮಾಡಿ. ಆದರೆ ನಾನು ಯಾವುದೇ ಕಾರಣಕ್ಕೂ ಬಂಗಾಳದಲ್ಲಿ ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಬಹಿರಂಗವಾಗಿ ಘೋಷಿಸಿದ್ದಾರೆ.
ಮಮತಾ ಬ್ಯಾನರ್ಜಿ ಏಕಾಂಗಿ ಅಂತ ತಿಳಿದುಕೊಂಡಿದ್ದಾರೆ. ಆದರೆ ಈಗ ನನ್ನ ಜತೆ ಸಾವಿರಾರು ಜನ ಇದ್ದಾರೆ. ನಿಮ್ಮ ಉದ್ದೇಶ ಸರಿಯಾಗಿದೆ, ಜನರು ಬರಬೇಕು. ಆದರೆ ನೆನಪಿಡಿ ಅದು ಎಲ್ಲರೂ ಎಂಬುದಾಗಿರಬೇಕು ಎಂದು ಮಮತಾ ತಿಳಿಸಿದ್ದಾರೆ.
ಇದೊಂದು ಧರ್ಮಾಧಾರಿತವಾದ ಹೋರಾಟವಲ್ಲ. ಆದರೆ ಇದು ಹಕ್ಕು ಅಂದರೆ ಏನು ಎಂಬುದರ ಕುರಿತಾದ ಹೋರಾಟವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.