ಬೋಂಬೆ ಬಂಟ್ಸ್‌ ಅಸೋಸಿಯೇಶನ್‌: ಅಧ್ಯಕ್ಷರಾಗಿ ಮುರಳಿ ಶೆಟ್ಟಿ ಆಯ್ಕೆ

Team Udayavani, Dec 16, 2019, 6:10 PM IST

mumbai-tdy-1

ಮುಂಬಯಿ, ಡಿ. 15: ಬಂಟ ಸಮಾಜದ ಪ್ರತಿಷ್ಠಿತ ಸಂಘಟನೆಯಾಗಿರುವ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ನೂತನ ಅಧ್ಯಕ್ಷರಾಗಿ ಮುರಳಿ ಕೆ. ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ನ್ಯಾಯವಾದಿ ಸುಭಾಶ್‌ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಡಿ. 15ರಂದು ಬೆಳಗ್ಗೆ 10.30ರಿಂದ ಬಂಟ್ಸ್‌ ಸೆಂಟರ್‌ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹ, ಶಶಿಕಲಾ ಮನ್‌ ಮೋಹನ್‌ ಶೆಟ್ಟಿ ಕಾಂಪ್ಲೆಕ್ಸ್‌, ಬಂಟ್ಸ್‌ ಸೆಂಟರ್‌ ಮಾರ್ಗ, ಸೆಕ್ಟರ್‌-24, ಪ್ಲಾಟ್‌ ನಂಬರ್‌ 42 ಇಲ್ಲಿ ನಡೆದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ 36ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆಗೈಯುತ್ತಿದ್ದ ಮುರಳಿ ಕೆ. ಶೆಟ್ಟಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಲತಾ ಜಿ. ಶೆಟ್ಟಿ ಮತ್ತು ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷರನ್ನಾಗಿ ಶಶಿಕಾಂತ್‌ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮುರಳಿ ಕೆ. ಶೆಟ್ಟಿ ಅವರನ್ನು ಸಂಸ್ಥೆಯ ನಿರ್ಗಮನ ಅಧ್ಯಕ್ಷ ನ್ಯಾಯವಾದಿ ಸುಭಾಶ್‌ ಬಿ. ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು. ಮಹಿಳಾ ವಿಭಾಗದ ನಿರ್ಗಮನ ಅಧ್ಯಕ್ಷೆ ಶಾರದಾ ಎಸ್‌. ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷೆ ಲತಾ ಜಿ. ಶೆಟ್ಟಿ ಮತ್ತು ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಶಶಿಕಾಂತ್‌ ರೈ ಅವರನ್ನು ನಿರ್ಗಮನ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ವಿಶ್ವನಾಥ ಪಿ. ಶೆಟ್ಟಿ, ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮ್‌ ಸುಂದರ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌.ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರುಗಳು, ಟ್ರಸ್ಟಿಗಳು, ಸಲಹೆಗಾರರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಮಹಾಸಭೆಯು ನಡೆಯಿತು.

ಮಹಾಸಭೆಯ ಬಳಿಕ ನಡೆದ ಬಹಿರಂಗ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಲೋಕಾಯುಕ್ತ ಜಸ್ಟೀಸ್‌ ಪಿ. ವಿಶ್ವನಾಥ ಶೆಟ್ಟಿ, ಗೌರವ ಅತಿಥಿಗಳಾಗಿ ಹೇರಂಬಾ ಇಂಡಸ್ಟ್ರೀಸ್‌ ಇದರ ಆಡಳಿತ ನಿರ್ದೇಶಕ ಆರ್‌. ಕೆ. ಶೆಟ್ಟಿ, ಪ್ರಸಿದ್ಧ ವೈದ್ಯರಾದ ಡಾ| ವಿಜಯ ರಾಘವ್‌ ಹೆಗ್ಡೆ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ,ಮುಲುಂಡ್‌ ಹೊಟೇಲ್‌ ಉದ್ಯಮಿ ಶೇಖರ್‌ಆರ್‌. ಶೆಟ್ಟಿ, ಪ್ರಸಿದ್ಧ ವೈದ್ಯ ಡಾ| ಶಿವಾನಂದ ಶೆಟ್ಟಿ, ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತ ಉದಯ್‌ ಶೆಟ್ಟಿ ಅವರು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಇತ್ತೀಚೆಗೆ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಆಚರಿಸಿಕೊಂಡ ಅಸೋಸಿಯೇಶನ್‌ನ ವಿಶ್ವಸ್ಥ ಹೊಟೇಲ್‌ ಉದ್ಯಮಿ ರಘುರಾಮ ಕೆ. ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿತು. ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ವಿಶ್ವನಾಥ ಪಿ. ಶೆಟ್ಟಿ, ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ,

ಜತೆ ಕೋಶಾಧಿಕಾರಿ ಶ್ಯಾಮ್‌ ಸುಂದರ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌.ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರುಗಳು, ಟ್ರಸ್ಟಿಗಳು, ಸಲಹೆಗಾರರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.