ಏ. 1ರಿಂದ ಹುಬ್ಬಳ್ಳಿ-ಮುಂಬೈ ವಿಮಾನಯಾನ ಸೇವೆ: ಜೋಶಿ


Team Udayavani, Dec 17, 2019, 11:04 AM IST

huballi-tdy-2

ಹುಬ್ಬಳ್ಳಿ: ವಿಮಾನಯಾನ ಸಂಪರ್ಕದಲ್ಲಿ ಹುಬ್ಬಳ್ಳಿ ಮಹತ್ವದ ಸ್ಥಾನ ಪಡೆಯುತ್ತಿದ್ದು, ಉಡಾನ್‌ ಯೋಜನೆಯಡಿ ದಕ್ಷಿಣ ಭಾರತದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಇನ್ನಷ್ಟು ವಿಮಾನಗಳು ಇಲ್ಲಿಂದ ಸಂಚಾರ ಆರಂಭಿಸಲು ಮುಂದಾಗಿವೆ.

ಏ. 1ರಿಂದ ಇಂಡಿಗೋ ವಿಮಾನ ಕಂಪೆನಿ ಹುಬ್ಬಳ್ಳಿ-ಮುಂಬೈ ಸೇವೆ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಂಬೈಗೆ ವಿಮಾನಯಾನ ಸೇವೆಗೆ ಮುಂಬೈ ನಿಲ್ದಾಣದಲ್ಲಿ ಸ್ಲ್ಯಾಟ್ ಸಮಸ್ಯೆ ಇತ್ತು. ಅಲ್ಲಿ ಸ್ಲ್ಯಾಟ್ ದೊರಕಿಸುವ ನಿಟ್ಟಿನಲ್ಲಿ ತಾವು ಮಾತನಾಡಿದ್ದು, ಮಾರ್ಚ್‌ 28ಕ್ಕೆ ಇಂಡಿಗೋ ಕಂಪೆನಿಗೆ ಸ್ಲ್ಯಾಟ್ ದೊರೆಯಲಿದೆ. ಏ. 1ರಿಂದ ಕಂಪೆನಿ ಹುಬ್ಬಳ್ಳಿ-ಮುಂಬೈ ವಿಮಾನಯಾನ ಆರಂಭಿಸಲಿದೆ ಎಂದರು.

ಈಗಾಗಲೇ ಸ್ಟಾರ್‌ ಏರ್‌ ವೇಸ್‌ ಹುಬ್ಬಳ್ಳಿ-ದೆಹಲಿ(ಹಿಂಡನ್‌) ಸೇವೆ ಆರಂಭಿಸಿದ್ದು, ಈ ಸೇವೆ ಪ್ರತಿದಿನ ಕೈಗೊಳ್ಳಲು ಸೂಚಿಸಿದ್ದು, ಕಂಪೆನಿ ಒಪ್ಪಿಕೊಂಡಿದೆ. ಹುಬ್ಬಳ್ಳಿ- ಹೈದರಾಬಾದ್‌ ವಿಮಾನಯಾನ ಆರಂಭವಾಗಿದೆ. ಇನ್ನಷ್ಟು ಕಂಪೆನಿಗಳು ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಆರಂಭಕ್ಕೆ ಮುಂದಾಗಿವೆ ಎಂದು ಹೇಳಿದರು.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬೆಳಗಿನ ಜಾವ, ಬೆಂಗಳೂರಿನಿಂದ ಹುಬ್ಬಳ್ಳಿಗೆ ತಡ ಸಂಜೆ ವಿಮಾನ ಸೇವೆ ಇಲ್ಲವಾಗಿದ್ದು, ಇದರ ಆರಂಭಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು. ಹುಬ್ಬಳ್ಳಿ-ಚೆನ್ನೈ ರೈಲು ಆರಂಭವಾಗಿದೆ. ವಾರಾಣಸಿ ರೈಲು ಸೇವೆ ಇನ್ನು ಎರಡು ದಿನ ಹೆಚ್ಚಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ರಸ್ತೆಗಳು ಸುಧಾರಣೆ ಆಗುತ್ತಿವೆ. ವಿವಿಧ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಆಕರ್ಷಣೆಗೆ ಉತ್ತಮ ಅವಕಾಶಗಳಿವೆ. ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಧಾರವಾಡ ಘಟಕದಲ್ಲಿ ಸುಮಾರು 9,213 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ ಎಂದರು.

ಕಲ್ಲಿದ್ದಲು ಮತ್ತು ಗಣಿ ಉದ್ಯಮಿಗಳು ನನ್ನ ಭೇಟಿಗೆ ಬಂದಾಗ, ಹುಬ್ಬಳ್ಳಿ-ಧಾರವಾಡ, ಉತ್ತರ ಕರ್ನಾಟಕದಲ್ಲಿ ಹೂಡಿಕೆಗೆ ಮನವೊಲಿಸುವ ಕಾರ್ಯ ಮಾಡುತ್ತಿರುವುದಾಗಿಯೂ ಸಚಿವರು ಹೇಳಿದರು. ಉದ್ಯಮಸ್ನೇಹಿ ಯೋಜನೆ ಹಾಗೂ ಸಮಸ್ಯೆಗಳ ನಿಟ್ಟಿನಲ್ಲಿ ಕೇಂದ್ರ ಮಟ್ಟದಲ್ಲಿ ಏನಾದರೂ ಕೆಲಸ ಆಗುವುದಿದ್ದರೆ ತಮ್ಮ ಗಮನಕ್ಕೆ ತಂದರೆ ಅದರ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜೋಶಿ ಹೇಳಿದರು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.