ಡಿ.31ರ ಬಳಿಕ 2 ಸಾವಿರ ನೋಟು ರದ್ದು, ವಾಟ್ಸ್‌ಆಪ್ ಸಂದೇಶ ಸುಳ್ಳು!
Team Udayavani, Dec 17, 2019, 8:39 PM IST
ನವದೆಹಲಿ: “ಡಿ.31ರ ಬಳಿಕ 2 ಸಾವಿರ ರೂ. ಮುಖ ಬೆಲೆಯ ನೋಟು ಅಮಾನ್ಯಗೊಳ್ಳುತ್ತದೆ. ಅದಕ್ಕಿಂತ ಮೊದಲು ಅದನ್ನು ಬದಲಾವಣೆ ಮಾಡಿಸಿಕೊಳ್ಳಿ. ಆರ್‌ಬಿಐ ಸದ್ಯ ರದ್ದಾಗಿರುವ 1 ಸಾವಿರ ರೂ. ನೋಟು ಮತ್ತೆ ಜಾರಿಗೆ ತರುತ್ತದೆ’ ಎಂಬ ಸಂದೇಶ ಸುಳ್ಳು ಎಂದು ಕೇಂದ್ರ ಸರ್ಕಾರ ಹೇಳಿದೆ.
ವಾಟ್ಸ್‌ಆ್ಯಪ್ ಮೂಲಕ ಹಲವು ದಿನಗಳಿಂದ ಈ ರೀತಿಯ ಸಂದೇಶ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ವ್ಯಾಪ್ತಿಯ ಪ್ರಸ್ ಇನ್ಫೋರ್ಮೇಶನ್ ಬ್ಯೂರೋ ಈ ಸಂದೇಶ ಸುಳ್ಳು ಎಂದು ಟ್ವೀಟ್ ಮಾಡಿದೆ. ದೇಶದ ಹಲವು ಭಾಗಗಳಲ್ಲಿ ಈ ಸಂದೇಶ ಸ್ವೀಕರಿಸಿದ ಹಲವಾರು ಮಂದಿ ವಿವಿಧ ಬ್ಯಾಂಕ್‌ಗಳಿಗೆ ಭೇಟಿ ಮಾಡಿ 2 ಸಾವಿರ ನೋಟು ಬದಲು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆರ್‌ಬಿಐ, 2000 ರೂ. ನೋಟು ಹಿಂಪಡೆಯುವ ಕುರುತಂತೆ ತಾನು ಈ ರೀತಿಯ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಡಿ.11ರಂದು ವಿತ್ತ ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಕೂಡ 2 ಸಾವಿರ ನೋಟು ರದ್ದು ಮಾಡುವುದಿಲ್ಲ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.