ಏಳನೇ ತರಗತಿ ಪಬ್ಲಿಕ್ ಪರೀಕ್ಷೆ ಇಂದು ಅಂತಿಮ ತೀರ್ಮಾನ; ಸಚಿವ ಸುರೇಶ್ ಕುಮಾರ್
ಸರಕಾರ ಮತ್ತು ಮಕ್ಕಳ ಹಕ್ಕುಗಳ ಆಯೋಗದ ನಡುವೆ ಮಾತುಕತೆ ನಡೆಯಲಿದೆ
Team Udayavani, Dec 18, 2019, 4:11 PM IST
ಬೆಂಗಳೂರು: ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಕುರಿತು ಇರುವ ಗೊಂದಲ ಮಾತ್ರ ಇನ್ನೂ ಬಗೆಹರಿದಿಲ್ಲ.
ಈ ನಿಟ್ಟಿನಲ್ಲಿ ಬುಧವಾರ ಬಹುತೇಕ ಸಮಸ್ಯೆಗೆ ತರೆಬೀಳಲಿದ್ದು, ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರವಾಗಿ ಸರಕಾರ ಮತ್ತು ಮಕ್ಕಳ ಹಕ್ಕುಗಳ ಆಯೋಗದ ನಡುವೆ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪರೀಕ್ಷೆ ವ್ಯವಸ್ಥೆ ಬಗ್ಗೆಯೇ ತಿಳಿವಳಿಕೆ ಇಲ್ಲದೇ ಎಸ್ಎಸ್ಎಲ್ ಸಿಯಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏಳನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಆದರೆ ಈ ಪ್ರಸ್ತಾವನೆಗೆ ಮಕ್ಕಳ ಹಕ್ಕು ಆಯೋಗ ಆಕ್ಷೇಪ ವ್ಯಕ್ತ ಪಡಿಸಿದೆ. ಈ ಸಂಬಂಧ ಇಂದು ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಾಯೋಗಿಕವಾಗಿ ಪಬ್ಲಿಕ್ ಪರೀಕ್ಷೆ ಜಾರಿ ಮಾಡಿ, ಯಾವ ವಿದ್ಯಾರ್ಥಿಯನ್ನೂ ಫೇಲ್ ಮಾಡದಿರಲು ನಿರ್ಧರಿಸಲಾಗಿತ್ತು. ಆದರೆ, ಮಕ್ಕಳ ಹಕ್ಕು ಆಯೋಗ ಹಾಗೂ ಕೆಲವು ಖಾಸಗಿ ಶಾಲೆಗಳ ಮುಖ್ಯಸ್ಥರು ಆಕ್ಷೇಪ ಎತ್ತಿದ್ದರು. ಪ್ರಸ್ತಾವನೆ ಹಿಂದಿನ ಆಶಯವನ್ನು ಈಗಾಗಲೇ ಆಯೋಗದ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇವೆ. ಇಂದು ಮತ್ತೂಮ್ಮೆ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.