ಹೋರಾಟ ನಡೆಸಿ ಅನುದಾನ ತರುತ್ತೇನೆ


Team Udayavani, Dec 19, 2019, 3:00 AM IST

horatanade

ಕುಣಿಗಲ್‌: ತಾಲೂಕಿನ ಅಭಿವೃದ್ಧಿಗೆ ಬಿಜೆಪಿ ಸರ್ಕಾರದೊಂದಿಗೆ ಹೋರಾಟ ನಡೆಸಿ ಅನುದಾನ ತರುತ್ತೇನೆ ಎಂದು ಶಾಸಕ ಡಾ.ಎಚ್‌.ಡಿ.ರಂಗನಾಥ್‌ ತಿಳಿಸಿದರು. ತಾಲೂಕಿನ ಕೊತ್ತಗೆರೆ ಹೋಬಳಿ ನೀಲತ್ತಹಳ್ಳಿ ಗ್ರಾಮದಲ್ಲಿ ಬುಧವಾರ ಎಸ್‌ಸಿಪಿ ಯೋಜನೆಯಡಿ 62 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕುಣಿಗಲ್‌ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಸಮ್ಮಿಶ್ರ ಸರ್ಕಾರ ರಸ್ತೆ, ಚರಂಡಿ, ನೀರಾವರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗೆ 700 ಕೋಟಿ ರೂ.ಗೂ ಅಧಿಕ ಹಣ ಮಂಜೂರು ಮಾಡಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಅನುದಾನ ತಡೆ ಹಿಡಿದಿದೆ. ಇದರಿಂದ ಕಾಮಗಾರಿ ಕುಂಠಿತಗೊಂಡಿದೆ. ಅನುದಾನ ಬಿಡುಗಡೆ ಮಾಡಿಕೊಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗುವುದು.

ಸ್ಪಂದಿಸದಿದ್ದರೆ ತಾಲೂಕಿನ ಜನರೊಂದಿಗೆ ಪಾದಯಾತ್ರೆ ಮೂಲಕ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಗ್ರಾಮಸ್ಥರು ಭಿನ್ನಾಭಿಪ್ರಾಯ ಬಿಟ್ಟು ಸರ್ಕಾರದಿಂದ ಮಂಜೂರಾಗಿರುವ ಯೋಜನೆ ಗ್ರಾಮಗಳ ಅಭಿವೃದ್ಧಿಗೆ ಸದ್ಬಳಕ್ಕೆ ಮಾಡಿಕೊಳ್ಳಬೇಕು. ಇದರಲ್ಲಿ ಗ್ರಾಮಸ್ಥರ ಜವಾಬ್ದಾರಿಯೂ ಹೆಚ್ಚಿದೆ ಎಂದು ಹೇಳಿದರು.

ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಪಕ್ಕದ ದೊಡ್ಡ ಅಳ್ಳದಲ್ಲಿ ಕೊಳಚೆ ನೀರು ನಿಂತಿರುವ ಬಗ್ಗೆ ಕೆಂಡಾಮಂಡಲರಾದ ಶಾಸಕರು, ಕಲುಷಿತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಿದೆ. ಏಕೆ ಹಳ್ಳ ಮುಚ್ಚಿಲ್ಲ ಎಂದು ಪಿಡಿ ತೇಜಸ್‌ಗೆ ಪ್ರಶ್ನಿಸಿ ಕೂಡಲೇ ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ತಾಕೀತು ಪಡಿಸಿದರು.

ವಾಗ್ವಾದ: ಕಳೆದ ಏಳು ತಿಂಗಳಿನಿಂದ ವಾಟರ್‌ ಮ್ಯಾನ್‌ಗೆ ಸಂಬಳ ಕೊಟ್ಟಿಲ್ಲ. ಇದಕ್ಕಾಗಿ ಮೂರು ಸಾವಿರ ರೂ. ವಾಟರ್‌ ಮ್ಯಾನ್‌ ಸಂಜೀವಯ್ಯ ಅವರಿಂದಲೇ ಪಡೆದ್ದೀರಾ, ಎಂದು ಪಿಡಿಒ ತೇಜಸ್‌ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಯಾವ ವಾಟರ್‌ ಮ್ಯಾನ್‌ನಿಂದಲ್ಲೂ ಹಣ ಪಡೆದಿಲ್ಲ. ಅವರಿಗೆ ಸಾಲವಾಗಿ ಕೊಟ್ಟ ಹಣ ಪಡೆದಿದ್ದೇನೆ ಲಂಚ ಪಡೆದಿಲ್ಲ ಎಂದು ಪಿಡಿಒ ತಿಳಿಸಿದರು. ಈ ನಡುವೆ ಗ್ರಾಮಸ್ಥರ ಹಾಗೂ ಪಿಡಿಒ ನಡುವೆ ವಾಗ್ವಾದ ನಡೆಯಿತು. ಹೇಮಾವತಿ ಎಇಇ ಸುರೇಶ್‌, ಗ್ರಾಪಂ ಅಧ್ಯಕ್ಷೆ ಮರಿಯಮ್ಮ, ಸದಸ್ಯ ರಾಮು, ಪುರಸಭಾ ಮಾಜಿ ಸದಸ್ಯ ಪಾಪಣ್ಣ, ಮುಖಂಡರಾದ ರವಿ, ಶೇಖರಪ್ಪ, ನಾಗರಾಜು, ಪಾಪಣ್ಣ ಮತ್ತಿತರರಿದ್ದರು.

ಪಿಡಿಒಗೆ ತರಾಟೆ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತೇಜಸ್‌ ಗ್ರಾಮದ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈವರೆಗೂ ಗ್ರಾಮಕ್ಕೆ ಭೇಟಿ ನೀಡರಲಿಲ್ಲ. ಶಾಸಕರು ಬಂದಿರುವುದಕ್ಕೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ ಎಂದು ತರಾಟೆ ತೆಗೆದುಕೊಂಡ ಗ್ರಾಮಸ್ಥರು, ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ದೂರು ಹೇಳಿದರು. ಇದರಿಂದ ಸಿಟ್ಟಾದ ಶಾಸಕರು, ಪಂಚಾಯಿತಿಯಲ್ಲಿ ಕುಳಿತು ಏನ್‌ ಮಾಡ್ತೀರಾ. ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಅರಿತು ಮೂಲಸೌಲಭ್ಯ ಕಲ್ಪಿಸಿಕೊಡಲು ಏಕೆ ಕ್ರಮ ಕೈಗೊಂಡಿಲ್ಲ ಎಂದು ಗದರಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.