ಟಾಟಾ ವಿರುದ್ಧ ಸೈರಸ್‌ಗೆ ಗೆಲುವು ; ಎನ್‌.ಸಿ.ಎಲ್‌.ಟಿ.ಯಿಂದ ತೀರ್ಪು

4 ವಾರಗಳವರೆಗೆ ಆದೇಶ ಜಾರಿಗೆ ತಡೆ

Team Udayavani, Dec 19, 2019, 12:54 AM IST

Cyrus-Mistry-730

ಹೊಸದಿಲ್ಲಿ: ಟಾಟಾ ಸಮೂಹ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ 2016ರಲ್ಲಿ ಸೈರಸ್‌ ಮಿಸ್ತ್ರಿ ಅವರನ್ನು ವಜಾ ಮಾಡಿ, ಎನ್‌. ಚಂದ್ರಶೇಖರ್‌ರನ್ನು ನೇಮಿಸಿರುವುದು ಕಾನೂನುಬಾಹಿರ ಎಂದು ರಾಷ್ಟ್ರೀಯ ಕಂಪೆನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣ (ಎನ್‌ಸಿಎಲ್‌ಟಿ) ಬುಧವಾರ ಹೇಳಿದೆ.

ಈ ಬೆಳವಣಿಗೆ ಟಾಟಾ ಸಮೂಹ ಸಂಸ್ಥೆಗೆ ಭಾರಿ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಬಾಂಬೆ ಷೇರು ಪೇಟೆಯಲ್ಲಿ ಟಾಟಾ ಷೇರುಗಳು ಕುಸಿತ ಕಂಡವು.

ಆದರೆ ಟಾಟಾ ಸಂಸ್ಥೆಗೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು 4 ವಾರಗಳ ಅವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಆದೇಶ ಜಾರಿಯಾಗುವುದಿಲ್ಲ ಎಂದು ನ್ಯಾಯಾಧಿಕರಣ ತಿಳಿಸಿದೆ. ಮತ್ತೂಂದು ಮಹತ್ವದ ನಿರ್ಣಯದಲ್ಲಿ ‘ಸಾರ್ವಜನಿಕ ಸಂಸ್ಥೆ’ ಎಂಬ ಶಿರೋನಾಮೆಯಿಂದ ‘ಖಾಸಗಿ ಕಂಪೆನಿ’ ಎಂದು ಬದಲು ಮಾಡಿಕೊಂಡಿದ್ದಕ್ಕೂ ತಡೆಯಾಜ್ಞೆ ನೀಡಿದೆ.

2012ರಲ್ಲಿ ಟಾಟಾದ 6ನೇ ಅಧ್ಯಕ್ಷರಾಗಿ ಸೈರಸ್‌ ಮಿಸ್ತ್ರಿ ನೇಮಕವಾಗಿದ್ದರು. ರತನ್‌ ಟಾಟಾ ಮತ್ತು ಸೈರಸ್‌ ನಡುವೆ ಹಲವು ಕ್ಷೇತ್ರಗಳಲ್ಲಿ ನಡೆಸಿದ್ದ ಹೂಡಿಕೆ ನಿರ್ಧಾರಗಳ ಬಗ್ಗೆ ಭಿನ್ನಾಭಿಪ್ರಾಯ ಶುರುವಾಗಿತ್ತು. ವಿಶೇಷವಾಗಿ ಸದ್ಯ ಉತ್ಪಾದನೆ ಸ್ಥಗಿತಗೊಳಿಸಿರುವ ಅಗ್ಗದ ನ್ಯಾನೋ ಕಾರು ಉತ್ಪಾದನೆ ವಿಚಾರದಲ್ಲೂ ಸಹಮತ ಮೂಡಿ ಬಂದಿರಲಿಲ್ಲ.

ಟಾಟಾ ಸಂಸ್ಥೆಯಲ್ಲಿ ಸೈರಸ್‌ ಕುಟುಂಬ ಶೇ.18.4 ಪಾಲು ಬಂಡವಾಳ ಹೊಂದಿದೆ. 2016ರ ನಿರ್ಧಾರ ಪ್ರಶ್ನೆ ಮಾಡಿ ಸೈರಸ್‌ ರಾಷ್ಟ್ರೀಯ ಕಂಪೆನಿ ಕಾನೂನು ನ್ಯಾಯಾಧಿಕರಣಕ್ಕೆ (ಎನ್‌ಸಿಎಲ್‌ಟಿ) ಅರ್ಜಿ ಸಲ್ಲಿಸಿದ್ದರು. ಟಾಟಾ ಸನ್ಸ್‌ ಸೇರಿ ಒಟ್ಟು 20 ಮಂದಿಯ ವಿರುದ್ಧ ಕೇಸು ಹೂಡಲಾಗಿತ್ತು. 2017ರಲ್ಲಿ ಈ ನ್ಯಾಯಾಧಿಕರಣ ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಿಸ್ತ್ರಿ ಅವರು ಮೇಲ್ಮನವಿ ನ್ಯಾಯಾಧಿಕರಣದ ಮೆಟ್ಟಿಲೇರಿದ್ದರು.

ಇದು ನನ್ನ ವೈಯಕ್ತಿಕ ಗೆಲುವಲ್ಲ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಅಲ್ಪಪ್ರಮಾಣದ ಷೇರುದಾರರ ಹಕ್ಕುಗಳಿಗೆ ಸಂದ ಜಯ.
– ಸೈರಸ್‌ ಮಿಸ್ತ್ರಿ

ಟಾಪ್ ನ್ಯೂಸ್

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.