ಸಮುದಾಯ ಭವನ ಉಪಯೋಗವಿಲ್ಲದೇ ಅನಾಥ


Team Udayavani, Dec 19, 2019, 1:33 PM IST

19-December-14

ಶಶಿಧರ ವಸ್ತ್ರದ
ಬಾದಾಮಿ:
ಪಟ್ಟಣದ ಆನಂದ ನಗರದಲ್ಲಿ ನಿರ್ಮಿಸಿರುವ ಸಮುದಾಯ ಭವನ ಉಪಯೋಗವಿಲ್ಲದೇ ಅನಾಥವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಸಮುದಾಯ ಭವನ ನಿರ್ಮಿಸಲಾಗಿದ್ದು, ಆದರೆ ಅದನ್ನು ಬಳಸದೇ ಹಾಗೆ ಬಿಡಲಾಗಿದೆ.

ಎಂ.ಕೆ. ಪಟ್ಟಣಶೆಟ್ಟಿ ಅವರು ಶಾಸಕರಾಗಿದ್ದ ಅವಧಿಯಲ್ಲಿ 2009-10ನೇ ಸಾಲಿನ ಪುರಸಭೆ ವತಿಯಿಂದ ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆಯಡಿ 10.62 ಲಕ್ಷ ರೂ. ಅನುದಾನ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯದೇ ಅನಾಥವಾಗಿದೆ.

ಕಾಂಪೌಂಡ್‌ ಇದೆ. ಗೇಟ್‌ ಇಲ್ಲ; ಪುರಸಭೆ ವತಿಯಿಂದ ಲಕ್ಷಾಂತರ ರೂ.ಅನುದಾನ ಖರ್ಚು ಮಾಡಿ ಸಮುದಾಯ ಭವನ ನಿರ್ಮಿಸಲಾಗಿದೆ. ಭವನಕ್ಕೆ ಸೂಕ್ತವಾದ ಕಾಂಪೌಂಡ್‌ ಇದೆಯಾದರೂ ಗೇಟ್‌ ಇಲ್ಲದಾಗಿದೆ. ಸಮುದಾಯ ಭವನದ ಆವರಣದಲ್ಲಿ ಕಸ ಕಡ್ಡಿ ಬೆಳೆದಿದೆ. ಹಂದಿಗಳು, ಆಡು, ಹಸುಗಳು ಆವರಣದಲ್ಲಿ ಬಂದು ಹೊಲಸು ಮಾಡುತ್ತಿವೆ. ಶೌಚಾಲಯ ಬಾಗಿಲು ಇಲ್ಲ;ಇಲ್ಲಿ ಅಗತ್ಯಕ್ಕೆ ತಕ್ಕಂತೆ ಶೌಚಾಲಯಗಳನ್ನು ನಿರ್ಮಿಸಿದ್ದಾರೆ. ಶೌಚಾಲಯಕ್ಕೆ ಬಾಗಿಲು ಮುರಿದಿವೆ. ಸೂಕ್ತ ನಿರ್ವಹಣೆ ಇಲ್ಲದಾಗಿದೆ. ಪಟ್ಟಣದ ಮದ್ಯಭಾಗದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಪುರಸಭೆಯವರು ಸೂಕ್ತ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕೆಂಬುದು ನಾಗರಿಕರು ಆಗ್ರಹವಾಗಿದೆ.

ಪುರಸಭೆಯವರು ನಿರ್ಮಿಸಿರುವ ಸಮುದಾಯ ಭವನ ಉಪಯೋಗ ಇಲ್ಲದಾಗಿದೆ. ಸಂಬಂಧಿಸಿದ ಅಧಿ ಕಾರಿಗಳು ಸೂಕ್ತ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ?
.ಹೆಸರು ಹೇಳಲು ಇಚ್ಚಿಸದ
ಆನಂದ ನಗರ ನಿವಾಸಿ.

ಬಾದಾಮಿ ನಗರದ ಆನಂದ ನಗರದ ಸಮುದಾಯ ಭವನವನ್ನು ಪುರಸಭೆಯಿಂದ ಉಪಯೋಗ ಮಾಡಲಾಗುತ್ತಿದೆ. ಕಾಂಪೌಂಡ್‌ ಇದೆ. ಗೇಟ್‌ ಅಳವಡಿಸಲಾಗುವುದು. ಉಳಿದ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಾಗುವುದು.
ಜ್ಯೋತಿ ಗಿರೀಶ, ಮುಖ್ಯ
ಅಧಿಕಾರಿಗಳು ಪುರಸಭೆ ಬಾದಾಮಿ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.