ಜಿಲ್ಲೆಗೆ ಬಿಜೆಪಿ ಕೊಡುಗೆ ಏನು
ಶಾಸಕ ಮಂಜುನಾಥ್ ಪ್ರಶ್ನೆ, ಎಚ್‌ಡಿಕೆ ಕೊಡುಗೆ ಕೆಲವೇ ತಿಂಗಳಲ್ಲೇ ಗೊತ್ತಾಗಲಿದೆ
Team Udayavani, Dec 19, 2019, 5:17 PM IST
ರಾಮನಗರ: ಜಿಲ್ಲೆಗೆ ಮಂಜೂರಾಗಿರುವ ಅಭಿವೃದ್ಧಿ ಯೋಜನೆಗಳು ರದ್ದಾಗಿವೆ. ಅಥವಾ ಹಿಂಪಡೆಯಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಲ್ಲ. ಆದರೂ. ಸ್ಥಳೀಯ ಬಿಜೆಪಿ ಮುಖಂಡರು ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ವಸ್ತು ಸ್ಥಿತಿ ಅರಿತು ಮಾತನಾಡುವುದನ್ನು ಕಲಿಯಬೇಕು ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜು ತಿರುಗೇಟು ನೀಡಿದರು.
ತಾಲೂಕಿನ ಬಿಡಿದಯ ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರೆವೇರಿಸಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಪತ್ರಿಕಾಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿದ್ದನ್ನು ಪ್ರಸ್ತಾಪಿಸಿ ಅವರು ಪ್ರತಿಕ್ರಿಯಿಸಿದರು.
ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಎಚ್ .ಡಿ.ಕುಮಾರಸ್ವಾಮಿ ಅವರ ಪಾತ್ರ, ಶ್ರಮ ಇರುವ ಬಗ್ಗೆ ಇಡೀ ಜಿಲ್ಲೆಯ ಜನಕ್ಕೆ ಗೊತ್ತಿದೆ. ಬಿಜೆಪಿ ಮುಖಂಡರ ಪ್ರಯತ್ನ, ಶ್ರಮ, ಕೊಡುಗೆ ಏನಿದೆ ಎಂದು ಜನಕ್ಕೆ ಗೊತ್ತಾಗಬೇಕಾಗಿದೆ ಎಂದು ಕುಟುಕಿದರು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಕೆಲವು ತಿಂಗಳುಗಳಲ್ಲಿ ಗೊತ್ತಾಗಲಿದೆ. ಅಲ್ಲಿಯವರೆಗೂ ಬಿಜೆಪಿ ನಾಯಕರು ತಾಳ್ಮ
ಇಟ್ಟುಕೊಳ್ಳಬೇಕು ಎಂದು ವಾಗ್ಧಾಳಿ ನಡೆಸಿದರು.
ವ್ಯವಧಾನ ಬೆಳೆಸಿಕೊಳ್ಳದ ಕೆಲವು ಬಿಜೆಪಿ ಮುಖಂಡರು ಕುಮಾರಸ್ವಾಮಿ ಅವರನ್ನು ಗುರಿ ಮಾಡಿಕೊಂಡು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಗಡಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನದಡಿಯಲ್ಲಿ ಬಿಡದಿ ಪುರಸಭೆ ವ್ಯಾಪ್ತಿಯ ವಿವಿಧೆಡೆ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಅಧಿಕಾರ ಬಿಜೆಪಿ ಪಾಲಿಗಿದೆ.
ಕುಮಾರಸ್ವಾಮಿ ಅವರನ್ನು ಟೀಕಿಸುವ ಬದಲಿಗೆ ಜಿಲ್ಲೆಯ ಅಭಿವೃದ್ಧಿ ಮಾಡಿ ತೋರಿಸಲಿ ಎಂದು ಅವರು ಸವಾಲು ಎಸೆದರು.
ಅಭಿವೃದ್ಧಿಗೆ ಚಾಲನೆ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್.ಡಿ.ಕುಮಾರಸ್ವಾಮಿ ಮಾಗಡಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನದಡಿಯಲ್ಲಿ ಬಿಡದಿ ಪುರಸಭೆ ವ್ಯಾಪ್ತಿಯ ವಿವಿಧೆಡೆ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಬಿಡದಿ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್-13 ಇಂದಿರಾನಗರದಲ್ಲಿ 9.17ಲಕ್ಷ ರೂ. ವೆಚ್ಚದ ನೂತನ ಅಂಗನವಾಡಿ ಕೇಂದ್ರದ ಕಟ್ಟಡ ಲೋಕಾರ್ಪಣೆ, ನಗರೋತ್ಥಾನ ಯೋಜನೆಯಡಿ ವಾರ್ಡ್ ನಂಬರ್-7 ಕೇತಗಾನಹಳ್ಳಿ ಹಾಗೂ ವಾರ್ಡ್ ನಂಬರ್-20ರ ವೃಷಭಾವತಿಪುರದಲ್ಲಿ 3.2 ಕೋಟಿ ರೂ.ಪಾಯಿ ವೆಚ್ಚದಲ್ಲಿ ಓವರ್‌ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿಪೂಜೆ, 32ಲಕ್ಷ ರೂ. ವೆಚ್ಚದಲ್ಲಿ ಪುರಸಭೆಗೆ ಖರೀದಿಸಿರುವ ಸಕ್ಕಿಂಗ್ ಅಂಡ್ ಜಟ್ಟಿಂಗ್ ನೂತನ ಯಂತ್ರಕ್ಕೆ ಚಾಲನೆ ನೀಡಲಾಗಿದೆ.
ಲೋಕೋಪಯೋಗಿ ಇಲಾಖೆ ವತಿಯಿಂದ ವಾರ್ಡ್ ನಂಬರ್-6ರ ಅವರಗೆರೆ ಕಾಲೋನಿಯಲ್ಲಿ 10.30 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಸಿಎಂಜಿಆರ್‌ವೈ ಯೋಜನೆಯಡಿ ಬಿಡದಿ ಮುದುವಾಡಿ ರಸ್ತೆಯಿಂದ ಕರಿಯಪ್ಪನದೊಡ್ಡಿ ಮಾರ್ಗವಾಗಿ ಬಾನಂದೂರು ರಸ್ತೆ ಸೇರುವ ರಸ್ತೆ ಅಭಿವೃದ್ಧಿಗೆ 63.69ಲಕ್ಷ ರುಪಾಯಿ ವೆಚ್ಚದ
ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು.
ಎ.ಮಂಜುನಾಥ್ ಮಾಹಿತಿ ನೀಡಿದರು. ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್ ನಟರಾಜು, ಬಿಡದಿ ಪುರಸಭೆ ಉಪಾಧ್ಯಕ್ಷೆ ಲಕ್ಷ್ಮೀದೇವಿ ರವಿಕುಮಾರ್, ಸದಸ್ಯರಾದ ದೇವರಾಜು, ರಾಕೇಶ್, ಶಿವಕುಮಾರ್, ಚಂದ್ರಕಲಾ ನಾಗೇಶ್, ಕುಮಾರ್, ಮಹೀಪತಿ, ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ಚೇತನ್ ಎಸ್. ಕೊಳವಿ, ಕಂದಾಯ ಅಧಿಕಾರಿ ಬಿ.ವಿ.ನಾಗರಾಜ್, ಮುಖಂಡರಾದ ರಾಮಕೃಷ್ಣಯ್ಯ, ಶೇಷಪ್ಪ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.