ರಾಜೀನಾಮೆ ಹಿಂಪಡೆಯಲು ಸಿದ್ದುಗೆ ವೀಕ್ಷಕರ ಸಲಹೆ
Team Udayavani, Dec 20, 2019, 1:29 AM IST
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಹಿಂಪಡೆಯು ವಂತೆ ಎಐಸಿಸಿ ವೀಕ್ಷಕರು ಸಲಹೆ ನೀಡಿ, ವಿಪಕ್ಷ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ. ಇದರ ಜತೆಗೆ ಹಿರಿಯ ನಾಯಕರು ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಸಿ, ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕು ಎಂದು ಸಲಹೆಯಿತ್ತಿದ್ದಾರೆ.
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ಉದ್ಭವಿ ಸಿರುವ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲು ಎಐಸಿಸಿ ವೀಕ್ಷಕರಾಗಿ ಆಗಮಿ ಸಿದ್ದ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಧುಸೂದನ ಮಿಸಿŒ ಹಾಗೂ ಎಐಸಿಸಿ ಕಾರ್ಯ ದರ್ಶಿ ಭಕ್ತ ಚರಣ ದಾಸ್ ಅವರು ರಾಜ್ಯದ 50 ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಬಾರಿ ವಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದು ಅಭಿಪ್ರಾಯ ಸಂಗ್ರಹಿಸಲು ಆಗಮಿಸಿದ ಸಂದರ್ಭದಲ್ಲಿ ಕೆಲವರು ತಂಡವಾಗಿ ಸಿದ್ದರಾಮಯ್ಯ ಪರ ಸಹಿ ಸಂಗ್ರಹ ಮಾಡಿ ವೀಕ್ಷಕರಿಗೆ ನೀಡಿದ್ದ ಬಗ್ಗೆ ರಾಜ್ಯ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಪ್ರತಿಯೊಬ್ಬ ನಾಯಕರಿಂದ ಪ್ರತ್ಯೇಕ ಅಭಿಪ್ರಾಯ ಪಡೆದುಕೊಂಡಿದ್ದಾರೆ.
ಒಕ್ಕಲಿಗ, ಲಿಂಗಾಯತ ಬೇಡಿಕೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತ ಬಂದಿರುವುದರಿಂದ ಎರಡೂ ಸಮುದಾಯಗಳು ಕಾಂಗ್ರೆಸ್‌ನಿಂದ ದೂರವಾಗುತ್ತಿವೆ. ಅದರಿಂದ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕೆಲವು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಅಥವಾ ಲಿಂಗಾಯತ ಸಮುದಾಯದವರಿಗೆ ನೀಡಿದರೆ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅನುಕೂಲವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೆಲವು ನಾಯಕರು ಒಕ್ಕಲಿಗ ಸಮುದಾಯದ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಪರವಾಗಿ ವೀಕ್ಷಕರ ಮುಂದೆ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.
ಸಿದ್ದು ಜತೆ ಪ್ರತ್ಯೇಕ ಮಾತುಕತೆ
ಸಿದ್ದರಾಮಯ್ಯನವರು ಆರೋಗ್ಯ ಸಮಸ್ಯೆ ಯಿಂದ ಮನೆಯಲ್ಲಿ ವಿಶ್ರಾಂತಿ ಪಡೆಯು ತ್ತಿರುವುದರಿಂದ ಮಧುಸೂದನ ಮಿಸಿŒ ಹಾಗೂ ಭಕ್ತ ಚರಣ ದಾಸ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದರು. ಈ ಸಂದರ್ಭ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದರು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರು ತಾನು ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದು, ಪಕ್ಷದಲ್ಲಿ ಯುವ ನಾಯಕರಿಗೆ ಅಧಿಕಾರ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಪಕ್ಷದ ಹಿತದೃಷ್ಟಿಯಿಂದ ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಯುವಂತೆ ಮಧುಸೂದನ ಮಿಸಿŒ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.