ಸ್ತ್ರೀಯರ ಆತ್ಮರಕ್ಷಣೆಗೆ “ಮಿಷನ್‌ ಸಾಹಸಿ’

Team Udayavani, Dec 20, 2019, 4:09 PM IST

cm-tdy-1

ಮೂಡಿಗೆರೆ: “ಮಿಷನ್‌ ಸಾಹಸಿ’ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪೂರಕವಾಗಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿ  ಹಾಗೂ ಆತ್ಮ ರಕ್ಷಣೆ ಕಾರ್ಯಕ್ರಮಗಳ ಬೆಂಗಾವಲಾಗಿದೆ ಎಂದು ಸ್ಥಳೀಯರಾದ ಕನ್ನಡ ಚಿತ್ರನಟ ರವಿತೇಜ ಹೊಸಕೆರೆ ಹೇಳಿದರು.

ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ಪಟ್ಟಣದ ಜೆಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ “ಮಿಷನ್‌ ಸಾಹಸಿ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಣ್ಣುಮಕ್ಕಳು ಜನ್ಮತಃ ಧೈರ್ಯಶಾಲಿಗಳು. ಆದರೆ, ಸಮಾಜದಲ್ಲಿ ಅವರ ಮೇಲೆ ನಿರಂತರವಾಗಿ ಆಗುತ್ತಿರುವ ಶೋಷಣೆಗಳಿಂದಾಗಿ ತಮ್ಮ ಧೈರ್ಯ ಪ್ರದರ್ಶಿಸಲು ಹಿಂದೇಟು ಹಾಕುತ್ತಿದ್ದಾರೆ. ಒಬ್ಬ ಹೆಣ್ಣು ಮಗಳು ವಿವಿಧ ಆಯಾಮಗಳಲ್ಲಿ ತನ್ನ ಪಾತ್ರಗಳನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತಾಳೆ. ಹಣ್ಣುಮಕ್ಕಳನ್ನು ತಾಯಿಗೆ ಹೋಲಿಕೆ ಮಾಡಿ ಗೌರವಿಸುವ ಸಂಸ್ಕೃತಿ ನಮ್ಮದು. ಹೈದರಾಬಾದ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಎಲ್ಲರೂ ತಲೆ ತಗ್ಗಿಸಬೇಕಾದ ಕೃತ್ಯ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾಜದ ಕೆಲವು ಘಾತುಕ ಶಕ್ತಿಗಳಿಂದ ಆಗುವ ದೌರ್ಜನ್ಯದಿಂದಾಗಿ ವಿಶ್ವದ ಎದುರು ತಲೆ ತಗ್ಗಿಸುವಂತಾಗಿದೆ. ಎಲ್ಲರೂ ಸಮಾನ ಮನಸ್ಕರಾಗಿ ಇಂತಹ ಕೆಟ್ಟ ಘಟನೆಗಳ ವಿರುದ್ಧ ಹೋರಾಡಬೇಕು ಎಂದರು. ಹೆಣ್ಣುಮಕ್ಕಳು ಸಮಾಜದಲ್ಲಿ ಮುಂದೆ ಬರುವುದರ ಭರದಲ್ಲಿ ತಮ್ಮ ಸಂಸ್ಕೃತಿಯನ್ನು ಕಡೆಗಣಿಸಬಾರದು. ಪ್ರಾಕೃತಿಕವಾಗಿ ತಮಗೆ ಇರುವ ಇತಿಮಿತಿಗಳನ್ನು ಅರಿತು ಮುಂದುವರೆಯುವುದು ಎಲ್ಲಾ ದೃಷ್ಟಿಯಿಂದ ಒಳಿತು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಅಪರಿಚಿತ ವ್ಯಕ್ತಿಗಳ ಬಳಿ ತಮ್ಮ ಖಾಸಗಿ ವಿಚಾರಗಳನ್ನು ಹಂಚಿಕೊಳ್ಳುವುದನ್ನು ಮಾಡಬಾರದು. ಹೆಣ್ಣು ಮಕ್ಕಳು ಕ್ಲಿಷ್ಟಕರ ಸನ್ನಿವೇಶಗಳನ್ನು ಎದುರಿಸಲು ಆತ್ಮ ರಕ್ಷಣೆ ಮಾಡಿಕೊಳ್ಳುವಂತಹ ಕಲೆಗಳನ್ನು ಕಲಿಯಬೇಕು. ಮಿಷನ್‌ ಸಾಹಸಿ ಇಂತಹ ಕಾರ್ಯಗಳಿಗೆ ವೇದಿಕೆ ಕ್ಲಪಿಸಿ ಕೊಡುತ್ತಿದೆ. ಇದೊಂದು ಉತ್ತಮ ಪ್ರಯತ್ನ. ಇಂತಹ ಕಾರ್ಯಗಳು ಎಲ್ಲೆಡೆ ನಡೆಯಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೀಕ್ಷಿತ್‌ ಅವರು, 1949ರ ಜುಲೈ 9ರಂದು ಸ್ಥಾಪನೆಯಾದ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌, ಹಲವಾರು ಚಳವಳಿಗಳಲ್ಲಿ ಭಾಗವಹಿಸಿ ತನ್ನದೇ ಆದ ಸೇವೆ ಮಾಡುತ್ತ ಬಂದಿದೆ. ಇದರ ಯಶಸ್ಸು ಇಂದು ಹೆಚ್ಚು ಹೆಚ್ಚು ವಿದ್ಯಾರ್ಥಿಗಳನ್ನು ತರಬೇತು ಮಾಡಿ ದೇಶಕ್ಕೆ ಕೊಡುಗೆ ನೀಡುವ ಕಾರ್ಯದಲ್ಲಿ ನಿರತವಾಗಿದೆ. ನಾಯಕತ್ವದ ಗುಣ, ಅನ್ಯಾಯಗಳ ವಿರುದ್ಧ ಪ್ರತಿಭಟಿಸುವುದು ಸೇರಿದಂತೆ ಸಮಾಜಮುಖೀ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ವಾಸು ಅವರು ವಿದ್ಯಾರ್ಥಿನಿಯರಿಗೆ ಕರಾಟೆ ಮಾಡಿಸುವ ಮೂಲಕ ಆತ್ಮರಕ್ಷಣೆ ಕಲೆಗಳ ಮಹತ್ವ ತಿಳಿಸಿಕೊಟ್ಟರು. ವೇದಿಕೆಯಲ್ಲಿ ಎಬಿವಿಪಿ ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ ಬೆಟ್ಟಗೆರೆ ಕೀರ್ತನಾ, ಜಿಲ್ಲಾ ವಿದ್ಯಾರ್ಥಿ ಪ್ರಮುಖ್‌ ಗುತ್ತಿ ಶಶಾಂಕ್‌, ನಗರ ಕಾರ್ಯದರ್ಶಿ ಲೋಕವಳ್ಳಿ ಸ್ವಾತಿ ಇದ್ದರು. ಕೆಂಜಿಗೆ ಪ್ರಾಪ್ತಿ ಸ್ವಾಗತಿಸಿ, ನಿಶ್ಚಿತ ಪ್ರಾರ್ಥಿಸಿ, ಹೇಮಾ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯರು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.