ಜಾಮಾ ಮಸೀದಿ ಪ್ರತಿಭಟನೆ ; ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ನೇತೃತ್ವದಲ್ಲಿ ಮೆರವಣಿಗೆ
ಉತ್ತರಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪೌರತ್ವ ಪ್ರತಿಭಟನೆ
Team Udayavani, Dec 20, 2019, 4:19 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನವದೆಹಲಿಯ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ಬಳಿಕ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಈ ಪ್ರತಿಭಟನೆಗೆ ಬೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರು ಜೊತೆ ನೀಡಿದ್ದಾರೆ.
ಜಾಮಾ ಮಸೀದಿಯಿಂದ ಜಂತರ್ ಮಂತರ್ ಗೆ ಮೆರವಣಿಗೆಯಲ್ಲಿ ಹೊರಟಿದ್ದ ಗುಂಪನ್ನು ಪೊಲೀಸರು ದೆಹಲಿ ಗೇಟ್ ಹತ್ತಿರವೇ ತಡೆಹಿಡಿದಿದ್ದಾರೆ. ಈ ಮೆರವಣಿಗೆಯ ನೇತೃತ್ವವನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ವಹಿಸಿಕೊಂಡಿದ್ದರು. ಈ ಪ್ರದೇಶವನ್ನು ಪೊಲೀಸರು ಮತ್ತು ಸಂಸತ್ ಭದ್ರತಾ ಸಿಬ್ಬಂದಿ ಬ್ಯಾರಿಕೇಡ್ ಮೂಲಕ ತಡೆ ಹಾಕಿದ್ದಾರೆ.
#WATCH Delhi: Protest at Jama Masjid against #CitizenshipAmendmentAct Bhim Army Chief Chandrashekhar Azad also present. Azad had been earlier denied permission for a protest march from Jama Masjid to Jantar Mantar pic.twitter.com/uXK1tvO4CT
— ANI (@ANI) December 20, 2019
ಈ ಸಂದರ್ಭದಲ್ಲಿ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದರು. ಆದರೆ ಪ್ರತಿಭಟನಾಕಾರರ ಗುಂಪಿನ ನಡುವೆ ಆಜಾದ್ ಇದ್ದುದರಿಂದ ಪೊಲೀಸರಿಗೆ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.
ದೆಹಲಿ ಹೊರತುಪಡಿಸಿದರೆ ಉತ್ತರಪ್ರದೇಶದ ಗೋರಖ್ ಪುರದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಜೋರಾಗಿದೆ. ಇಲ್ಲಿ ಕಲ್ಲುತೂರಾಟದ ಘಟನೆಗಳು ವರದಿಯಾಗಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನಲೆಯಲ್ಲಿ ಗೋರಖ್ ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.