ವಿದ್ಯುತ್‌ “ಶಾಕಿಂಗ್‌ ಸ್ಪಾಟ್‌’ ಗುರುತಿಸುವ ಕೆಲಸಕ್ಕೆ ಮುಂದಾದ ಮೆಸ್ಕಾಂ

ಎರಡನೇ ಹಂತದಲ್ಲಿ ಕಾರ್ಯಪ್ರವೃತ್ತವಾದ ಇಲಾಖೆ, ಮಹಾನಗರ ಪಾಲಿಕೆ

Team Udayavani, Dec 20, 2019, 10:52 PM IST

dc-31

ನಗರದ ಮೆಸ್ಕಾಂ ಮುಂಭಾಗ ಡಿವೈಡರ್‌ನಲ್ಲಿ ಅಳವಡಿಸಿದ ಬೀದಿ ದೀಪದ ಎಲ್‌ಟಿಡಿ ಬಾಕ್ಸ್‌ ಮುಚ್ಚಿರುವುದು.

ಮಹಾನಗರ: ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯ ಆಹ್ವಾನಿಸುವ ರೀತಿ ಅಳವಡಿಸಲಾಗಿರುವ ವಿದ್ಯುತ್‌ ಸಂಪರ್ಕ-ಸರಬರಾಜಿನ ಟ್ರಾನ್ಸ್‌ಫಾರ್ಮ ರ್‌ಗಳು, ತುಂಡಾಗಿ ಹೋಗಿರುವ ವಯರ್‌ಗಳು, ಎಲ್‌ಟಿಡಿ ಬಾಕ್ಸ್‌ಗಳು, ಸ್ವಿಚ್‌ ಬೋರ್ಡ್‌ಗಳನ್ನು ರಿಪೇರಿ ಮಾಡುವ ದಿಕ್ಕಿನಲ್ಲಿ ಮೆಸ್ಕಾಂ (ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ) ಮತ್ತು ಮಹಾನಗರ ಪಾಲಿಕೆ ಎರಡನೇ ಹಂತದಲ್ಲಿ ಕಾರ್ಯಪ್ರವೃತ್ತವಾಗಿವೆ.

ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಆಗದಿರುವ ಕಾರಣ ಸಾರ್ವಜನಿಕರಿಗೆ ಎದುರಾಗಿರುವ ಅಪಾಯದ ಕುರಿತಂತೆ “ಸುದಿನ’ವು ಕಳೆದ ಕೆಲ ದಿನಗಳ ಹಿಂದೆ “ವಿದ್ಯುತ್‌-ಆಪತ್ತು ಇರಲಿ ಎಚ್ಚರ’ ಎಂಬ ಶೀರ್ಷಿಕೆಯಡಿಯಲ್ಲಿ ಫೋಟೋಗಳನ್ನು ಪ್ರಕಟಿಸಿತ್ತು. ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆ ಕೆಲವು ಕಡೆಗಳಲ್ಲಿ ತತ್‌ಕ್ಷಣದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ನಗರದ ಮೆಸ್ಕಾಂ ಕಚೇರಿ ಮುಂಭಾಗದ ಡಿವೈಡರ್‌ನಲ್ಲಿ ಬೀದಿದೀಪದ ಎಲ್‌ಟಿಡಿ ಬಾಕ್ಸ್‌ ತೆರೆದಿಟ್ಟು ಸಾರ್ವಜನಿಕರಿಗೆ ಅಪಾಯ ಸೂಚಿಸುತ್ತಿತ್ತು. ಈ ಬಗ್ಗೆ “ಸುದಿನ’ ದಲ್ಲಿ ಫೋಟೋ ಪ್ರಕಟಿಸಲಾಗಿದ್ದು, ಈಗ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ತತ್‌ಕ್ಷಣಕ್ಕೆ ಬಾಕ್ಸ್‌ ಮುಚ್ಚುವ ಕೆಲಸಕ್ಕೆ ಮುಂದಾಗಿದೆ. ಅದೇ ರೀತಿ ಹಂಪನಕಟ್ಟೆಯ ಫುಟ್‌ಪಾತ್‌ನಲ್ಲಿಯೂ ವಿದ್ಯುತ್‌ ಬಾಕ್ಸ್‌ ಬಾಯ್ದೆರೆದಿತ್ತು. ಇದಕ್ಕೂ ಸಂಬಂಧಪಟ್ಟ ಇಲಾಖೆ ಸ್ಪಂದಿಸಿ ಮುಚ್ಚಳ ಹಾಕಲಾಗಿದೆ. ಆದರೂ, ಇನ್ನೂ ಕೆಲವು ಕಡೆಗಳಲ್ಲಿ, ಒಳರಸ್ತೆಗಳಲ್ಲಿ ವಿದ್ಯುತ್‌ ಬಾಕ್ಸ್‌ ಬಾಯ್ದೆರೆದಿದ್ದು, ಆ ಬಗ್ಗೆಯೂ ಗಮನ ನೀಡಬೇಕಿದೆ.

ಮೆಸ್ಕಾಂ, ಮಹಾನಗರ ಪಾಲಿಕೆ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿ, ನಗರದಲ್ಲಿ ವಿದ್ಯುತ್‌ನಿಂದ ಶಾಕ್‌ ಹೊಡೆಯಬಹುದಾದ ಅಪಾಯಕಾರಿ ಸ್ಥಳಗಳಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. “ಸುದಿನ’ವು ಕಳೆದ ವರ್ಷ “ವಿದ್ಯುತ್‌-ಆಪತ್ತು ಇರಲಿ ಎಚ್ಚರ’ ಎಂಬ ಅಭಿಯಾನವನ್ನು ಕೈಗೊಂಡಿದ್ದು, ಆ ವೇಳೆ ಸಂಬಂಧಪಟ್ಟ ಇಲಾಖೆಯು ನಗರದಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಬಾಯ್ದೆರೆದುಕೊಂಡಿರುವ ಎಲ್‌ಟಿಡಿ ಬಾಕ್ಸ್‌ಗಳನ್ನು ಗುರುತಿಸಿ, ಮಂಗಳೂರು ನಗರ ಮತ್ತು ಉಳ್ಳಾಲ ಪ್ರದೇಶಗಳಲ್ಲಿ ಒಟ್ಟಾರೆ 270 ಹೊಸ ಎಲ್‌ಟಿಡಿ ಬಾಕ್ಸ್‌ ಗಳನ್ನು ಅಳವಡಿಸಿತ್ತು. ನಗರದ ಇನ್ನೂ ಎಲ್ಲೆಲ್ಲಿ ಕೆಟ್ಟು ಹೋಗಿರುವ ಬಾಕ್ಸ್‌ಗಳಿವೆ ಸೇರಿದಂತೆ ವಿದ್ಯುತ್‌ ಶಾಕಿಂಗ್‌ ಸ್ಪಾಟ್‌ಗಳ ಬಗ್ಗೆ ಇಲಾಖೆ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ.

ಕ್ರಮ ಕೈಗೊಳ್ಳುತ್ತೇವೆ
ನಗರದಲ್ಲಿ ಬಾಯ್ದೆರೆದ ವಿದ್ಯುತ್‌ ಬಾಕ್ಸ್‌ಗೆ ಈಗಾಗಲೇ ಹೊಸ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ. ನಗರಗಳಲ್ಲಿನ ಮತ್ತು ಕೆಲವೆಡೆ ಬಾಯ್ದೆರೆದಿರುವ ಬಾಕ್ಸ್‌ಗಳಿದ್ದರೆ ಆ ಬಗ್ಗೆ ಲೈನ್‌ಮ್ಯಾನ್‌ಗಳು ಸೆಕ್ಷನ್‌ ಆಫೀಸರ್‌, ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲು ಸೂಚಿಸಲಾಗಿದೆ. ಕೂಡಲೇ ಕ್ರಮ ಕೈಗೊಳ್ಳುತ್ತೇವೆ.
 - ಕೃಷ್ಣರಾಜ್‌, ಮೆಸ್ಕಾಂ ಕಾರ್ಯಕಾರಿ ಅಭಿಯಂತರ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.