ಪ್ರಮೀಳಾ ಭೇಟಿಗೆ ನಕಾರ
ಕಾಶ್ಮೀರ ಕುರಿತ ಗೊತ್ತುವಳಿ ಮಂಡನೆಗೆ ಭಾರತ ಅತೃಪ್ತಿ
Team Udayavani, Dec 21, 2019, 5:22 AM IST
ವಾಷಿಂಗ್ಟನ್: ಕಾಶ್ಮೀರದಲ್ಲಿ ಹೇರಲಾಗಿರುವ ನಿಷೇಧಾತ್ಮಕ ಕ್ರಮಗಳನ್ನು ಹಿಂಪಡೆಯಬೇಕು ಎಂದು ಅಮೆರಿಕದ ಸಂಸತ್‌ನಲ್ಲಿ ಗೊತ್ತುವಳಿ ಮಂಡಿಸಿದ ಸಂಸದೆ, ಭಾರತೀಯ ಮೂಲದ ಪ್ರಮೀಳಾ ಜಯಪಾಲ್ ಭೇಟಿಯಾಗಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ನಿರಾಕರಿಸಿದ್ದಾರೆ. 2ನೇ ಆವೃತ್ತಿಯ 2+2 ಮಾತುಕತೆ ಬಳಿಕ ಭಾರತದ ಪತ್ರಕರ್ತರ ಜತೆಗೆ ಮಾತನಾಡಿದ ಜೈಶಂಕರ್, ಹೌಸ್ ಆಫ್ ರೆಪ್ರಸೆಂಟೇಟಿವ್ಸ್ ನಲ್ಲಿ ಮಂಡಿಸಲಾದ ಗೊತ್ತುವಳಿಯ ಬಗ್ಗೆ ಮಾಹಿತಿ ಇದೆ. ಇದು ಸೂಕ್ತ ಕ್ರಮವಲ್ಲ ಎಂದು ಹೇಳಿದ್ದಾರೆ. ಪ್ರಮೀಳಾ ಜಯಪಾಲ್ ನೇತೃತ್ವದ ಸಂಸತ್ ನಿಯೋಗವನ್ನು ಭೇಟಿ ಮಾಡುವುದಕ್ಕೆ ನಾನು ಉತ್ಸಾಹವನ್ನೂ ಹೊಂದಿಲ್ಲ ಎಂದು ಹೇಳಿದ್ದಾರೆ.
ಸಂಕ್ಷಿಪ್ತ ವಿವರಣೆ: ಸದ್ಯ ವಿವಾದಕ್ಕೆ ಸಿಲುಕಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕೇಂದ್ರ ಸರಕಾರ ಹೊಂದಿರುವ ನಿಲುವನ್ನು ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೊಂಪೊ ಜತೆಗಿನ ಮಾತುಕತೆ ವೇಳೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ಕೂಡ ಪ್ರಸ್ತಾಪಿಸಿ, ಚರ್ಚಿಸಲಾಗಿದೆ ಎಂದರು. ಈ ಹಂತದಲ್ಲಿ ವಶಕ್ಕೆ ಪಡೆಯಲಾಗಿದ್ದ ಕೆಲವರ ಬಿಡುಗಡೆಯನ್ನು ಮತ್ತು ಹೇರಲಾಗಿದ್ದ ನಿಷೇಧಾತ್ಮಕ ಕ್ರಮಗಳನ್ನು ಹಿಂಪಡೆದಿ ರುವುದನ್ನು ಅಮೆರಿಕ ಸ್ವಾಗತಿಸಿದೆ ಎಂದರು.
ಇದೇ ವೇಳೆ ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪರಿಣತರಿಗೆ ಅನಾನುಕೂಲವಾಗುವ ರೀತಿಯಲ್ಲಿ ಎಚ್-1ಬಿ ವೀಸಾ ನಿಯಮ ತರಬಾರದು. ಈ ಮೂಲಕ ಪ್ರತಿಭಾವಂತರ ಹರಿವು ಅಮೆರಿಕ್ಕೆ ಬರುವುದರ ಮೇಲೆ ನಿಯಂತ್ರಣ ಹೇರಬಾರದು ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.