ಮಂಗಳೂರು ಶಾಂತ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಸರ್ಪಗಾವಲು
ಇಂದು ಮುಖ್ಯಮಂತ್ರಿ,ಗೃಹ ಸಚಿವರ ಭೇಟಿ
Team Udayavani, Dec 21, 2019, 6:00 AM IST
ಮಂಗಳೂರು/ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾರೂಪ ಪಡೆದು ಕರ್ಫ್ಯೂ ವಿಧಿಸಿರುವ ಮಂಗಳೂರಿನಲ್ಲಿ ಪರಿಸ್ಥಿತಿಯು ನಿಯಂತ್ರಣಕ್ಕೆ ಬರುತ್ತಿದೆ. ಬಿಗು ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ.
ಗುರುವಾರ ಸಂಜೆ ಪೊಲೀಸರ ಗೋಲಿಬಾರ್‌ನಿಂದ ಮೃತಪಟ್ಟ ಬೆಂಗ್ರೆ ನಿವಾಸಿ ನೌಶಿನ್ ಮತ್ತು ಕಂದಕ ನಿವಾಸಿ ಜಲೀಲ್ ಅವರ ಮೃತದೇಹಗಳನ್ನು ಶುಕ್ರವಾರ ವೆನಾÉಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ದಫನ ಮಾಡಲಾಯಿತು. ಇನ್ನು ರಾಜ್ಯದ ಇತರೆಡೆಯಲ್ಲೂ ಶುಕ್ರವಾರ ಸಣ್ಣಪುಟ್ಟ ಪ್ರತಿಭಟನೆಗಳು ನಡೆದಿವೆ. ಆದರೆ ಇಡೀ ರಾಜ್ಯ ಶುಕ್ರವಾರ ಶಾಂತಿಯುತವಾಗಿತ್ತು.
ಕರ್ಫ್ಯೂ ಮುಂದುವರಿಕೆ
ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ರವಿ ವಾರ ಮಧ್ಯರಾತ್ರಿಯ ವರೆಗೆ ಕರ್ಫ್ಯೂ ಮುಂದುವರಿಸ ಲಾಗಿದ್ದು, ಹೆಚ್ಚುವರಿಯಾಗಿ ಪೊಲೀಸ್ ಪಡೆಯನ್ನು ನಿಯೋ ಜಿಸ ಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಿ ತಪಾ ಸಣೆ ನಡೆಸಲಾಗುತ್ತಿದ್ದು, ಸಂಚಾರಕ್ಕೆ ನಿರ್ಬಂಧ ವಿಧಿಸ ಲಾಗು ತ್ತಿದೆ. ಸಿಐಡಿ ವಿಭಾಗದ ಎಡಿಜಿಪಿ ದಯಾನಂದ್ ಸಹಿತ ಬೆಂಗಳೂರಿ ನಿಂದ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಅವಲೋಕಿಸುತ್ತಿದ್ದಾರೆ.
ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಶನಿವಾರವೂ (ಡಿ.21) ರಜೆಯನ್ನು ವಿಸ್ತರಿಸ ಲಾಗಿದೆ. ಮದ್ಯ ಮಾರಾಟವನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಎಲ್ಲೆಡೆ ಬಿಗಿ ಬಂದೋಬಸ್ತ್
ಗುರುವಾರ ಪೊಲೀಸ್ ಗೋಲಿಬಾರ್ ನಡೆದ ಬಂದರು ಪ್ರದೇಶದ ಅಜೀಜುದ್ದೀನ್ ರಸ್ತೆ, ನೆಲ್ಲಿಕಾಯಿ ರಸ್ತೆ, ಸ್ಟೇಟ್ ಬ್ಯಾಂಕ್, ಜಿಲ್ಲಾಧಿಕಾರಿ ಕಚೇರಿ ಆವರಣ ಪ್ರದೇಶಗಳಲ್ಲಿ ಪೊಲೀಸ್ ಪಹರೆ ಬಿಗಿಗೊಳಿಸಲಾಗಿತ್ತು. ನಗರ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಿದ್ದ ರಿಂದ ಜನಜೀವನ ಸ್ತಬ್ಧಗೊಂಡಿತ್ತು. ಖಾಸಗಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕೆಲವೇ ಕೆಲವು ಖಾಸಗಿ ವಾಹನಗಳು ಸಂಚರಿಸಿದವು.
ಕಫೂì ಮಾಹಿತಿ ಇಲ್ಲದ ಕಾರಣ ಹೊರ ಜಿಲ್ಲೆ, ರಾಜ್ಯಗಳಿಂದ ನಗರಕ್ಕೆ ರೈಲು, ಬಸ್ ಮತ್ತು ವಿಮಾನಗಳಲ್ಲಿ ಆಗಮಿಸಿದ್ದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದರು.
ಹೆಚ್ಚುವರಿ ಪೊಲೀಸ್ ಪಡೆ
ಮಂಗಳೂರಲ್ಲಿ ಈಗಾಗಲೇ ಇರುವ ಪೊಲೀಸ್ ಪಡೆಗೆ ಸೇರ್ಪಡೆಯಾಗಿ ನಗರ ಸಶಸ್ತ್ರ ಮೀಸಲು ಪಡೆಯ 10 ತುಕಡಿ, ಕೆಎಸ್‌ಆರ್‌ಪಿ 26 ತುಕಡಿ, ನಾಲ್ಕು ಮಂದಿ ಎಸ್‌ಪಿ, 11 ಡಿವೈಎಸ್‌ಪಿ, 10 ಮಂದಿ ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಓರ್ವ ಸಬ್ ಇನ್‌ಸ್ಪೆಕ್ಟರ್ ಅವರನ್ನು ಕರೆಸಲಾಗಿದೆ.
ಮರಣೋತ್ತರ ಪರೀಕ್ಷೆ
ಜಲೀಲ್ ಮತ್ತು ನೌಶೀನ್ ಅವರ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಗರದ ವೆನಾÉಕ್ ಸರಕಾರಿ ಆಸ್ಪತ್ರೆಯಲ್ಲಿ ನಡೆಸಿ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಮೃತರ ಕುಟುಂಬ ಸದಸ್ಯರಿಗೆ ಮಾತ್ರ ಶವಾಗಾರದ ಬಳಿ ಬರಲು ಅವಕಾಶ ಮಾಡಲಾಗಿತ್ತು. ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಮತ್ತು ಮಾಜಿ ಶಾಸಕ ಬಿ.ಎ. ಮೊದಿನ್ ಬಾವಾ ಸ್ಥಳಕ್ಕೆ ಭೇಟಿ ನೀಡಿದರು.
ಕೇರಳದ ಪತ್ರಕರ್ತರು ವಶಕ್ಕೆ
ಮಂಗಳೂರಿನ ಪರಿಸ್ಥಿತಿ ಬಗ್ಗೆ ವರದಿ ಮಾಡಲು ಆಗಮಿಸಿದ್ದ ಕೇರಳದ ಕೆಲವು ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಅಧಿಕೃತ ಗುರುತು ಪತ್ರ ಹೊಂದಿಲ್ಲದೆ ಇದ್ದುದರಿಂದ ಪೊಲೀಸರು ಶುಕ್ರವಾರ ಬೆಳಗ್ಗೆ ವಶಕ್ಕೆ ಪಡೆದಿದ್ದರು. ಅನಂತರ ವಿಚಾರಣೆ ನಡೆಸಿ ತಲಪಾಡಿಯ ವರೆಗೆ ತನಕ ಕರೆದೊಯ್ದು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಲಾಯಿತು.
ಈ ಪ್ರಕರಣವು ಕೇರಳದಲ್ಲಿ ಗೊಂದಲ ಸೃಷ್ಟಿಸಿದೆ. ಸಿಎಂ ಪಿಣರಾಯಿ ವಿಜಯನ್ ಅವರಿಗೂ ಮಾಹಿತಿ ಲಭಿಸಿ ಅವರು ಯಡಿಯೂರಪ್ಪನವರಿಗೆ ಪತ್ರಕರ್ತರ ಬಿಡುಗಡೆಗೆ ಮನವಿ ಮಾಡಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದ ಯಡಿಯೂರಪ್ಪನವರು, ಗುರುತಿನ ಚೀಟಿ ಹೊಂದಿರದ ಕಾರಣಕ್ಕೆ ವಶಕ್ಕೆ ಪಡೆದಿದ್ದ ಕೆಲವು ಪತ್ರಕರ್ತರನ್ನು ಬಿಡುಗಡೆಗೊಳಿಸಿ ಕೇರಳಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.
ಸಿಎಂ, ಗೃಹ ಸಚಿವರು ಇಂದು ಮಂಗಳೂರಿಗೆ
ಮಂಗಳೂರು ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಕಾನೂನು-ಸುವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಇಂಟರ್‌ನೆಟ್ ಸೇವೆ ಸ್ಥಗಿತ
ಅಹಿತಕರ ಘಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಸಹಿತ ಜಿಲ್ಲೆಯಲ್ಲಿ ಶುಕ್ರವಾರ ಇಡೀ ದಿನ ಇಂಟರ್‌ನೆಟ್ ಸೇವೆ ಸ್ಥಗಿತಗೊಂಡಿದ್ದು, ಶನಿವಾರವೂ ವ್ಯತ್ಯಯ ಮುಂದುವರಿಯಲಿದೆ. ಇದರಿಂದ ಹಲವು ಆನ್‌ಲೈನ್ ಆಧಾರಿತ ಸೇವಾ ಚಟುವಟಿಕೆಗಳು ಬಾಧಿತವಾಗಿದ್ದವು.
ಪೌರತ್ವ ಕಾಯ್ದೆ ಬಗ್ಗೆ ಕೇಂದ್ರದ ಸ್ಪಷ್ಟನೆ
ಹೊಸದಿಲ್ಲಿ: 1987ರ ಜುಲೈ 1ಕ್ಕಿಂತ ಮೊದಲು ಭಾರತ ದಲ್ಲಿ ಯಾರು ಜನಿಸಿದ್ದಾರೋ ಅಥವಾ ಈ ದಿನಾಂಕಕ್ಕಿಂತ ಮೊದಲು ಯಾರ ಹೆತ್ತವರು ಭಾರತದಲ್ಲಿ ಹುಟ್ಟಿದ್ದರೋ, ಅವರೆಲ್ಲರಿಗೂ ಭಾರತದ ಪೌರತ್ವ ಸಿಗಲಿದೆ. ಇದರ ವ್ಯಾಪ್ತಿಗೆ ಬರುವವರು ಪೌರತ್ವ ಕಾಯ್ದೆಯ ಕುರಿತು ಭಯ ಪಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಇಲಾಖೆ ಶುಕ್ರವಾರ ಸ್ಪಷ್ಟನೆ ನೀಡಿದೆ. ಅಸ್ಸಾಂನಲ್ಲಿ ಮಾತ್ರ ಭಾರತದ ಪೌರತ್ವದ ಕಟ್ ಆಫ್ ದಿನಾಂಕವನ್ನು 1971 ಎಂದು ಪರಿಗಣಿಸಲಾಗಿತ್ತು. ಹಾಗಾಗಿ ಅಸ್ಸಾಂನಲ್ಲಿ ನಡೆಸಲಾದ ಎನ್‌ಆರ್‌ಸಿಯನ್ನು ಮತ್ತು ದೇಶಾದ್ಯಂತ ನಡೆಸಲು ಉದ್ದೇಶಿಸಿರುವ ಎನ್‌ಆರ್‌ಸಿಯನ್ನು ಯಾರೂ ಹೋಲಿಕೆ ಮಾಡಿಕೊಳ್ಳಲು ಹೋಗಬಾರದು ಎಂದೂ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.