![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 21, 2019, 12:57 PM IST
ಮಣಿಪಾಲ: ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಶ್ರೀಪಾದರು ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಗಣ್ಯರು ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉಮಾಭಾರತಿ ಇಂದು ಆಸ್ಪತ್ರೆಗೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಗಿದ್ದು, ಭದ್ರತೆಯ ಕಾರಣದಿಂದಾಗಿ ಉಭಯರ ಭೇಟಿ ರದ್ದಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಕರ್ಫ್ಯೂ ಸಡಿಲಿಕೆಯ ನಂತರ ಉಭಯ ಕೇಂದ್ರ ನಾಯಕರು ಉಡುಪಿಗೆ ಆಗಮಿಸುವ ಸಾಧ್ಯತೆಯಿದೆ.
ಇಂದು ಮಣಿಪಾಲ ಆಸ್ಪತ್ರೆಗೆ ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ, ವಿಧಾನಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಮುಂತಾದ ಗಣ್ಯರು ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಹ ದೂರವಾಣಿ ಕರೆ ಮೂಲಕ ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡಾ ಆಗಮಿಸಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.