ಸಂಪುಟ ಸದಸ್ಯರ ಸಾಧನೆ ಪರಿಶೀಲಿಸಿದ ಪ್ರಧಾನಿ ಮೋದಿ
Team Udayavani, Dec 21, 2019, 7:01 PM IST
ನವದೆಹಲಿ: ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿ ಆರು ತಿಂಗಳು ಪೂರ್ಣಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪೂರ್ಣ ಪ್ರಮಾಣದ ಸಂಪುಟ ಸದಸ್ಯರ ಸಾಧನೆ ಪರಾಮರ್ಶೆ ನಡೆಸಿದರು. ದಿನವಿಡೀ ನಡೆದ ಸಭೆಯಲ್ಲಿ ವಿವಿಧ ಸಚಿವಾಲಯಗಳ ಸಚಿವರು ತಮ್ಮ ತಮ್ಮ ಸಾಧನೆಗಳ ಬಗೆಗಿನ ಮಾಹಿತಿ ಪ್ರಾತ್ಯಕ್ಷಿಕೆಯನ್ನು ಪ್ರಧಾನಿಗೆ ನೀಡಿದರು.
ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಸಾಮಾಜಿಕ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿ ಹೆಚ್ಚಿನ ಒತ್ತು ನೀಡಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಜನಸಂಖ್ಯಾ ಕೋಷ್ಠಕ (ಎನ್ಆರ್ಸಿ) ದೇಶಾದ್ಯಂತ ಜಾರಿಗೆ ತರುವುದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೇ ಸಚಿವರ ಸಾಧನೆ ಮೌಲ್ಯಮಾಪನ ನಡೆದಿದೆ. ಹಲವು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಂಪುಟ ಸಭೆಯ ಮೂಲಕ ವಿವಿಧ ಸಚಿವಾಲಯಗಳು ಸಾಧಿಸಿದ ಪ್ರಗತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದರು.
ಸಾಮಾನ್ಯವಾಗಿ ಮಂತ್ರಿ ಮಂಡಲ ಸಭೆಯ ಬಳಿಕ ಸಚಿವ ಸಂಪುಟ ಸಭೆ ನಡೆಯುತ್ತದೆ. ಈ ಬಾರಿ ಅದನ್ನು ಪ್ರತ್ಯೇಕವಾಗಿ ನಡೆಸಲಾಗಿದೆ. ಡಿ.24ರಂದು ವಾರದ ಸಂಪುಟ ಸಭೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.