ಕೊಕ್ಕೋ, ರಬ್ಬರ್‌ ಬೆಲೆ ಏರಿಕೆ


Team Udayavani, Dec 24, 2019, 4:00 AM IST

cd-35

ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಹೊಸ ಅಡಿಕೆ ಕಳೆದ ವಾರದ 255 ರೂ.ಗಳಿಂದ ಇಳಿಕೆ ಕಂಡು 240 ರೂ.ಗೆ ಖರೀದಿಯಾಗಿದೆ. ಕಳೆದ ವಾರದ ಹಿಂದೆ 260 ರೂ. ತನಕ ಬೆಳವಣಿಗೆಯಾಗಿತ್ತು. ಹಳೆಯ ಅಡಿಕೆ (ಸಿಂಗಲ್‌ ಚೋಲ್‌) 260 – 300 ರೂ. ತನಕ ಖರೀದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪಠೊರಾ 200-210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 90-110 ರೂ., ಕರಿಕೋಟು 80- 100 ರೂ. ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಯಥಾಸ್ಥಿತಿ
ಕಾಳುಮೆಣಸಿನ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ಕೆ.ಜಿ.ಗೆ 320 ರೂ. ತನಕ ಖರೀದಿಯಾಗಿದೆ. ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.

ರಬ್ಬರ್‌ ಅಲ್ಪ ಏರಿಕೆ
ರಬ್ಬರ್‌ ಧಾರಣೆಯಲ್ಲಿ ಮತ್ತೆ ಅಲ್ಪ ಏರಿಕೆ ಕಂಡಿದೆ. ಕಳೆದ ವಾರ 129.50 ರೂ.ಗೆ ಖರೀದಿಯಾಗಿತ್ತು. ಈ ವಾರ 130 ರೂ.ಗೆ ಖರೀದಿಯಾಗಿದೆ.

ಕರಾವಳಿ ಭಾಗದ ಬೆಳೆಗಾರರ ಪ್ರಮುಖ ವಾಣಿಜ್ಯ ಬೆಳೆ ಎಣಿಸಿಕೊಂಡಿರುವ ರಬ್ಬರ್‌ ಕೆಲವು ಸಮಯದ ಹಿಂದೆ ಚೇತೋಹಾರಿ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್‌ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಆದರೆ ಕೆಲವು ವಾರಗಳಿಂದ ಇಳಿಕೆಯ ಹಾದಿಯಲ್ಲಿ ಸಾಗಿತ್ತು. ಆರ್‌ಎಸ್‌ಎಸ್‌ 4- 130 ರೂ., ಆರ್‌ಎಸ್‌ಎಸ್‌ 5 – 124 ರೂ.ಗೆ ಖರೀದಿಯಾಗಿದೆ.

ಕೊಕ್ಕೋ ಧಾರಣೆ ಏರಿಕೆ
ಈ ವಾರ ಕೊಕ್ಕೋ ಧಾರಣೆಯಲ್ಲೂ ಅಲ್ಪ ಏರಿಕೆಯಾಗಿದೆ. ಕಳೆದ ವಾರ 45-48 ರೂಗೆ ಖರೀದಿಯಾಗಿದ್ದ ಕೊಕ್ಕೋ ಈ ವಾರ 50-53 ರೂ. ತನಕ ಖರೀದಿಯಾಗಿದೆ.
ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ. ಆದರೆ ಈಗ ಮಾತ್ರ ಬೆಲೆ ಇಳಿಕೆಯಲ್ಲಿದೆ.

ತೆಂಗು ಧಾರಣೆ
ಈ ವಾರ ತೆಂಗಿನಕಾಯಿ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ತೆಂಗಿನಕಾಯಿ ಸಣ್ಣ ಗಾತ್ರ(ಕೆ.ಜಿ.ಗೆ) 20-24 ರೂ., ತೆಂಗಿನಕಾಯಿ ಮಧ್ಯಮ ಗಾತ್ರ (ಕೆ.ಜಿ.ಗೆ) 25-29 ರೂ., ತೆಂಗಿನಕಾಯಿ ದೊಡ್ಡ ಗಾತ್ರ (ಕೆ.ಜಿ.ಗೆ) 30-33 ರೂ.ಗೆ ಖರೀದಿಯಾಗಿದೆ.

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.