ಬಹುಗ್ರಾಮ ಘನತ್ಯಾಜ್ಯ ನಿರ್ವಹಣೆಗೆ ಒತ್ತು


Team Udayavani, Dec 22, 2019, 3:08 AM IST

gana

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಹಲವು ಪ್ರದೇಶಗಳು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಂದಿಕೊಂಡಿದ್ದು ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ತಲೆದೊರಿದೆ. ಈಗಗಾಲೇ ಆನೇಕಲ್‌ ತಾಲೂಕಿನ ಚಂದಾಪುರ, ಅತ್ತಿಬೆಲೆ, ಬೊಮ್ಮಸಂದ್ರ, ಜಿಗಣಿ ಸೇರಿದಂತೆ ಇನ್ನೂ ಹಲವು ಪ್ರದೇಶಗಳಲ್ಲಿ ಕಸ ವಿಲೇರಿವಾರಿ ಸಮಸ್ಯೆ ಎದುರಾಗಿದೆ. ಜಾಗದ ಕೊರತೆಯೇ ಇಷ್ಟಕ್ಕೆಲ್ಲ ಕಾರಣ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೃಷ್ಣರಾ ಜಪುರದ ದೊಡ್ಡಬನಹಳ್ಳಿಯಲ್ಲಿ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಮುಂದಾಗಿದೆ.

ಘನ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಪಂ ಕೃಷ್ಣರಾಜಪುರ ವ್ಯಾಪ್ತಿಯ ಕೆಲವು ಗ್ರಾಮ ಪಂಚಾಯ್ತಿ ಅಧ್ಯ ಕ್ಷರಿಗೆ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಲಿಕಾ ಪ್ರವಾಸ ಏರ್ಪಡಿಸಿದೆ. ಶೀಘ್ರದಲ್ಲೆ ಕೊಪ್ಪಳ ಜಿಲ್ಲೆಯ ಹುಲಿಗಿಯಲ್ಲಿ ಸ್ಥಾಪಿಸಲಾಗಿರುವ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ತಂಡ ಭೇಟಿ ನೀಡಿ ಅಲ್ಲಿನ “ಬಹುಗ್ರಾಮ ಘನ ತ್ಯಾಜ್ಯ ನಿರ್ವಹಣಾ ಘಟಕ’ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದೆ.

ಘಟಕಕ್ಕೆ 2 ಎಕರೆ ಭೂಮಿ: ನಗರ ಜಿಲ್ಲಾಡಳಿತ ಈಗಾಗಲೇ ಕಸ ವಿಲೇವಾರಿ ಸಂಬಂಧ ಜಾಗ ಗುರುತಿಸುವ ಕಾರ್ಯದಲ್ಲಿ ನಿರತಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳ ಸಭೆ ಕರೆದು ಭೂಮಿ ಸಮಸ್ಯೆಗಳ ನಿವಾರಣೆಗೆ ಮುಂದಾಗಿದೆ. ಈಗಾಗಲೇ ಸರ್ಕಾರ ಘನ ತ್ಯಾಜ್ಯ ವಿಲೇವಾ ರಿ ಗಾಗಿ ಕೃಷ್ಣರಾಜಪುರದ ದೊಡ್ಡಬನಹಳ್ಳಿಯಲ್ಲಿ ಎರಡು ಎಕರೆ ಜಾಗವನ್ನು ಜಿಲ್ಲಾಡಳಿತಕ್ಕೆ ನೀಡಿದೆ.

ಆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂದಿನ ದಿನಗಳಲ್ಲಿ ಕೆ.ಆರ್‌.ಪುರ ಸಮೀಪದ ದೊಡ್ಡಬನಹಳ್ಳಿಯಲ್ಲಿ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡಲಿದೆ ಎಂದು ನಗರ ಜಿಲ್ಲೆಯ ಸ್ವತ್ಛ ಭಾರತ ಮಿಷನ್‌ನ (ಗ್ರಾಮೀಣ) ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣರಾಜಪುರ ತಾಲೂಕು ವ್ಯಾಪ್ತಿಯ ನಾಲ್ಕು ಗ್ರಾ.ಪಂ.ಗಳ ಅಧ್ಯಕ್ಷರು ಮತ್ತು ಅಧಿಕಾರಿಗಳು ಕೊಪ್ಪಳ ಜಿಲ್ಲೆಯ ಹುಲಿಗಿ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸಂಬಂಧಿಸಿದಂತೆ ಪೂರಕ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾಗದ ಕೊರತೆ: ಸ್ವತ್ಛ ಭಾರತ ಮಿಷನ್‌ ಸಡಿ ಜಿಲ್ಲಾಡಳಿತ ಹಲವು ಯೋಜನೆ ಜಾರಿಗೊಳಿಸುವ ಆಲೋಚನೆಯಲ್ಲಿದೆ. ಆದರೆ ಇದಕ್ಕೆ ಭೂಮಿ ಕೊರೆತೆ ಕಾಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 96 ಗ್ರಾ.ಪಂ.ಗಳಿದ್ದು ಹಲವೆಡೆ ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ. ಇದನ್ನು ಗಂಭೀ ರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಈ ಹಿಂದೆ ವೈಜ್ಞಾನಿಕ ಕಸ ವಿಲೇವಾರಿ ಸಂಬಂಧ ಜಾಗ ಗುರುತಿಸಿತ್ತು. ಇದಕ್ಕೆ ಸ್ಪಂದಿಸಿದ್ದ ಸರ್ಕಾರ, ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆ, ದೊಡ್ಡ ಜಾಲ, ಚಿಕ್ಕಜಾಲ, ಸಿಂಗನಾಯಕನ ಹಳ್ಳಿ ಭೂಮಿ ಮಂಜೂರು ಮಾಡಿತ್ತು. ಆದರೆ ಇನ್ನೂ 90 ಗ್ರಾ.ಪಂ.ಗಳಲ್ಲಿ ಕಸ ವಿಲೇವಾರಿಗೆ ಜಾಗದ ಸಮಸ್ಯೆ ಇದೆ.

ಕೆ.ಆರ್‌.ಪುರದ ದೊಡ್ಡಬನಹಳ್ಳಿಯಲ್ಲಿ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸುವ ಆಲೋಚನೆಯಿದೆ. ಆ ಹಿನ್ನೆಲೆಯ ಜಿಲ್ಲಾಡಳಿತದ ತಂಡ ಶೀಘ್ರದಲ್ಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮಕ್ಕೆ ಭೇಟಿ ನೀಡಲಿದೆ.
-ಜಗದೀಶ್‌ ಕೆ.ಜಿ, ಸಹಾಯಕ ಯೋಜನಾಧಿಕಾರಿ

ಕಸ ವಿಲೇವಾರಿ ಸಂಬಂಧಿಸಿದಂತೆ ಜಾಗದ ಸಮಸ್ಯೆ ಎದುರಾಗಿದೆ. ಖಾಲಿ ಜಾಗವನ್ನು ಗುರುತಿಸುವ ಕಾರ್ಯ ಈಗಾಗಲೇ ಸಾಗಿದೆ.
-ಕೆ.ಶಿವರಾಮೇಗೌಡ, ಬೆಂ.ನಗರ ಜಿಪಂ ಸಿಇಒ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.