
ಬೋಧನಾ ಕೊಠಡಿ ಕಾಮಗಾರಿಗೆ ಶಾಸಕ ದೊಡ್ಡನಗೌಡ ಚಾಲನೆ
Team Udayavani, Dec 22, 2019, 11:49 AM IST

ಇಳಕಲ್ಲ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 8 ಬೋಧನಾ ಕೊಠಡಿ ಕಾಮಗಾರಿಗೆ ಶಾಸಕ ದೊಡ್ಡನಗೌಡ ಪಾಟೀಲ ಭೂಮಿಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ವಿಶೇಷ ಅಭಿವೃದ್ಧಿ ಯೋಜನೆ(ಎಸ್‌ಡಿಪಿ) ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಕಾಮಗಾರಿಯನ್ನು ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ ವಹಿಸಲಾಗಿದೆ. ನೆಲ ಮಹಡಿಯಲ್ಲಿ 4 ಹಾಗೂ ಮೊದಲನೇ ಮಹಡಿಯಲ್ಲಿ ಸುಸಜ್ಜಿತ ಬೋಧನಾ ಕೊಠಡಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪ್ರಾಥಮಿಕ ಹಂತದಿಂದ ಪದವಿ ಹಂತದವರೆಗೂ ಶೈಕ್ಷಣಿಕ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎಂದರು. ನಗರಸಭಾ ಸದಸ್ಯ ಚಂದ್ರಶೇಖರ ಏಕಬೋಟೆ, ಬಿಜೆಪಿ ಮುಖಂಡರಾದ ಮಹಾಂತಗೌಡ ಪಾಟೀಲ, ಶ್ಯಾಮ ಕರವಾ, ಮಾಧುಸಾ ಕಾಟ್ವಾ, ನಗರದ ನಿವೃತ್ತ ಪ್ರಾಚಾರ್ಯ ಬಾಲಕೃಷ್ಣ ಗಜೇಂದ್ರಗಡ, ವಿ.ಬಿ. ಜೀರಗಿ ಉಪಸ್ಥಿತರಿದ್ದರು. ಉಪನ್ಯಾಸಕಿ ವಿದ್ಯಾವತಿ ಗೋಟೂರ ಸ್ವಾಗತಿಸಿದರು. ದೈಹಿಕ ಶಿಕ್ಷಕ ಕುರಿ ವಂದಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.